ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ ಕುರ್ಚಿ ಕಿತ್ತಾಟ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ ಬಣ ದೆಹಲಿಗೆ ಹೋಗಿ ಬಂದ ಬೆನ್ನಲ್ಲೇ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಿಎಂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಇಂದು ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಡಿಕೆ ಬಣದಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಬಗ್ಗೆ ಗಮನಕ್ಕೆ ತಂದಿದ್ದಾರೆ ಅಂತ ಹೇಳುತ್ತಿವೆ ಆಪ್ತ ಮೂಲಗಳು. ಇದನ್ನೂ ಓದಿ: ಡಿಕೆ ಶಿವಕುಮಾರ್‌ರಿಂದ ʻಸಂಕಲ್ಪ ಪೂಜೆʼ- ಮನೆಗೇ ಉತ್ಸವಮೂರ್ತಿ ಕರೆಸಿಕೊಂಡು ಪೂಜೆ ಸಲ್ಲಿಸಿದ ಡಿಸಿಎಂ

ಸಿಎಂ ಭೇಟಿಗೂ ಮುನ್ನ ಕಾಂಗ್ರೆಸ್ ಹೈಕಮಾಂಡ್ ಸಂಧಾನ ಸೂತ್ರ ರವಾನಿಸಿದೆ. ಈಗ ಪರಿಸ್ಥಿತಿ ಸರಿ ಇಲ್ಲದಿರೋದ್ರಿಂದ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳೋದಾಗಿ ಹೇಳಿದೆ. ಅಗತ್ಯಬಿದ್ದರೆ, ಇಬ್ಬರನ್ನೂ ದೆಹಲಿಗೆ ಕರೆಸಿಕೊಳ್ಳೋದಾಗಿ ಎಐಸಿಸಿ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇನ್ನೂ, ಒಂದೆರಡು ದಿನಗಳಲ್ಲಿ ಪವರ್ ಶೇರಿಂಗ್ ಗೊಂದಲ ಬಗೆಹರಿಯೋ ವಿಶ್ವಾಸವನ್ನ ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಯಾವ ಸಿಎಂ ಇವತ್ತು ಅಧಿಕಾರದಲ್ಲಿದ್ದಾರೋ ಅವ್ರನ್ನ ಅಂದು ಡಿಸಿಎಂ, ಹಣಕಾಸು ಮಂತ್ರಿ ಮಾಡಿದ್ದೇ ನಾನು: ಹೆಚ್‌ಡಿಡಿ
