ಮುಂಬೈ: ಟೀಂ ಇಂಡಿಯಾದ (Team India) ಪ್ರಮುಖ ಆಟಗಾರ್ತಿ ಸ್ಮೃತಿ ಮಂಧಾನಾ (Smriti Mandhana) ಅವರ ವಿವಾಹ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಮಂಧಾನಾ ಅವರ ಹುಟ್ಟೂರು ಸಾಂಗ್ಲಿಯಲ್ಲಿ ಇಂದು ಮದುವೆ ಸಮಾರಂಭ ಆಯೋಜನೆಗೊಂಡಿತ್ತು. ಮದುವೆ ಕಾರ್ಯಕ್ರಮ ನಡೆಯುತ್ತಿದ್ದಾಗ ಸ್ಮೃತಿ ಮಂಧಾನಾ ಅವರ ತಂದೆ ಶ್ರೀನಿವಾಸ್ (Shrinivas) ಅವರಿಗೆ ಲಘು ಹೃದಯಾಘಾತ (Heart Attack) ಸಂಭವಿಸಿದೆ.
ಅನಾರೋಗ್ಯಕ್ಕೆ ಒಳಗಾದ ಬೆನ್ನಲ್ಲೇ ಕಾರ್ಯಕ್ರಮ ನಡೆಯುತ್ತಿದ್ದ ಜಾಗಕ್ಕೆ ಅಂಬುಲೆನ್ಸ್ ಬಂದು ಶ್ರೀನಿವಾಸ್ ಅವರನ್ನು ಕರೆದುಕೊಂಡು ಹೋಗಿದೆ.
VIDEO | Tuhin Mishra, manager of Indian cricketer Smriti Mandhana, confirms that her father is not well and the wedding has been indefinitely postponed.
(Full video available on PTI Videos – https://t.co/n147TvqRQz) pic.twitter.com/K5EVJwyR4h
— Press Trust of India (@PTI_News) November 23, 2025
ಸ್ಮೃತಿ ಮಂಧಾನಾ ಮತ್ತು ಸಂಗೀತ ಸಂಯೋಜಕ, ಚಲನಚಿತ್ರ ನಿರ್ಮಾಪಕ ಪಲಾಶ್ ಮುಚ್ಚಲ್ ಅವರ ವಿವಾಹ ಕಾರ್ಯಕ್ರಮ ಭರ್ಜರಿಯಾಗಿ ನಡೆದಿತ್ತು. ಇವರ ವಿವಾಹ ಸಂಭ್ರಮದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದನ್ನೂ ಓದಿ: ನ.25 ರಂದು ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ – ಒಂದೇ ಬಣದಲ್ಲಿ ಇಂಡೋ-ಪಾಕ್
ಈ ಮೊದಲು, ಅರಿಶಿನ ಶಾಸ್ತ್ರದಲ್ಲಿ ಸ್ಮೃತಿ ಮತ್ತು ಪಲಾಶ್ ಇಬ್ಬರೂ ಖುಷಿಯಿಂದ ನೃತ್ಯ ಮಾಡಿದ್ದು, ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರು ಸಹ ಸಾಥ್ ನೀಡಿ, ವಧುವಿನ ತಂಡವಾಗಿ ಹೆಜ್ಜೆ ಹಾಕಿರುವ ದೃಶ್ಯಗಳು ಹೆಚ್ಚು ವೈರಲ್ ಆಗಿವೆ.
