– ಆತ್ಮಹತ್ಯೆ ಶಂಕೆ, ಪ್ರಕರಣ ದಾಖಲು
ಬೆಂಗಳೂರು: ಇಲ್ಲಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಂದೇ ಭಾರತ್ ಹೈಸ್ಪೀಡ್ ರೈಲಿಗೆ (Vande Bharat High Speed Train) ಸಿಲುಕಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಕೇರಳ ಮೂಲದ ಸ್ಟೆರ್ಲಿನ್ ಎಲಿಜ ಶಾಜಿ (19), ಜಸ್ಟಿನ್ ಜೋಸೆಫ್ (20) ಮೃತ ವಿದ್ಯಾರ್ಥಿಗಳು. ಇಬ್ಬರು ವಿದ್ಯಾರ್ಥಿಗಳು (Nursing Students) ಸಪ್ತಗಿರಿ ಕೇಲೇಜಿನಲ್ಲಿ ಪ್ರಥಮ ವರ್ಷದ BSc ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಇದನ್ನೂ ಓದಿ: ಅಮೆರಿಕದ ವೀಸಾ ಸಿಗದಿದ್ದಕ್ಕೆ ಹೈದರಾಬಾದ್‌ನ ಮಹಿಳಾ ವೈದ್ಯೆ ಆತ್ಮಹತ್ಯೆ

ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದ್ರೆ ರೈಲ್ವೆ ಪೊಲೀಸರ ಮಾಹಿತಿ ಪ್ರಕಾರ, ಇಬ್ಬರು ಪಿಜಿಗೆ ಟ್ರ್ಯಾಕ್ ಮೂಲಕ ಹೋಗಲು ಮುಂದಾಗಿದ್ದರು. ಈ ವೇಳೆ ಹೈಸ್ಪೀಡ್ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ UDR (ಅಸಹಜ ಸಾವಿನ ವರದಿ) ಅಡಿಯಲ್ಲಿ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಯುವಕ-ಯುವತಿ ಬಗ್ಗೆ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ. ಮೃತದೇಹಗಳನ್ನ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಇದನ್ನೂ ಓದಿ: ಕೇವಲ ಒಂದೂವರೆ ಸಾವಿರಕ್ಕೆ ಸ್ನೇಹಿತನ ಕೊಲೆ – ಆರೋಪಿ ಅರೆಸ್ಟ್
