– ಹೆಚ್‌ಡಿಕೆ ಮತ್ತೆ ಸಿಎಂ ಆಗುವವರೆಗೆ ಚಪ್ಪಲಿ ಧರಿಸಲ್ಲ ಎಂದು ಪ್ರತಿಜ್ಞೆ ಮಾಡಿದ್ದ ಅಭಿಮಾನಿ
ಮಂಡ್ಯ: ಕೌಟುಂಬಿಕ ವಿಚಾರವಾಗಿ ಖಿನ್ನತೆಗೆ ಒಳಗಾಗಿ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ (Mandya) ಜಿಲ್ಲೆ ಮದ್ದೂರು (Maddur) ತಾಲೂಕಿನ ದೇವೇಗೌಡನದೊಡ್ಡಿಯಲ್ಲಿ ನಡೆದಿದೆ.
ದೇವೇಗೌಡನದೊಡ್ಡಿ ಗ್ರಾಮದ ಮಹದೇವು (31) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮೂರು ದಿನಗಳ ಹಿಂದೆ ಮರವೊಂದಕ್ಕೆ ನೇಣುಬಿಗಿದುಕೊಂಡು ಮಹದೇವು ಆತ್ಮಹತ್ಯೆ ಮಾಡಿಕೊಂಡಿದ್ದರು. ಭಾನುವಾರ ಮಹದೇವು ಕುಟುಂಬಸ್ಥರು ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಇದನ್ನೂ ಓದಿ: ಪಾಕ್ ಅರೆಸೈನಿಕ ಪಡೆ ಪ್ರಧಾನ ಕಚೇರಿ ಆವರಣದಲ್ಲಿ ಸೂಸೈಡ್ ಬಾಂಬ್ ದಾಳಿ – ಮೂವರು ಸಾವು
ಮಹದೇವು ಕುಮಾರಸ್ವಾಮಿ ಮತ್ತೆ ಸಿಎಂ ಆಗುವವರೆಗೂ ಚಪ್ಪಲಿ ತೊಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಜೆಡಿಎಸ್ ಪಕ್ಷದ ಕಾರ್ಯಕರ್ತನಾಗಿ, ಹೆಚ್.ಡಿ. ಕುಮಾರಸ್ವಾಮಿ ಅಪ್ಪಟ ಅಭಿಮಾನಿಯಾಗಿದ್ದ ಮಹದೇವು ಕುಮಾರಸ್ವಾಮಿ ಸಿಎಂ ಅಧಿಕಾರ ಕಳೆದು ಕೊಂಡಾಗ ಅವ್ರು ಮತ್ತೆ ಸಿಎಂ ಆಗಬೇಕು, ಮತ್ತೆ ಸಿಎಂ ಆಗುವವರೆಗೂ ಚಪ್ಪಲಿ ತೊಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಅದರಂತೆ ಚಪ್ಪಲಿ ತೊಡದೆ ಓಡಾಡುತ್ತಿದ್ದರು. ಅಪ್ಪಟ ಅಭಿಮಾನಿಯ ನಿಧನಕ್ಕೆ ಹೆಚ್‌ಡಿಕೆ ಸೇರಿದಂತೆ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ನಲ್ಲಿ ಟೇಕಾಫ್‌ಗೆ ಮೀಸಲಿಟ್ಟ ರನ್‌ವೇಗೆ ಬಂದಿಳಿದ ಅಫ್ಘಾನ್ ಜೆಟ್ – ತಪ್ಪಿದ ಭಾರೀ ಅನಾಹುತ
ಇನ್ನು ಹೆಚ್‌ಡಿಕೆ ಅಭಿಮಾನಿ ಮಹದೇವು ಆತ್ಮಹತ್ಯೆ ಹಿನ್ನೆಲೆ ಮೃತರ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರ ಅಪ್ಪಟ ಅಭಿಮಾನಿ ಮಹದೇವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವ ಕಾರಣಕ್ಕೆ ಎಂದು ನಮಗೆ ಅರ್ಥವಾಗುತ್ತಿಲ್ಲ. ಹೋದ ಜೀವ ವಾಪಸ್ ತರಲು ಸಾಧ್ಯವಿಲ್ಲ. ನನಗೆ, ಕುಮಾರಣ್ಣಗೆ ಈ ಘಟನೆಯಿಂದ ಮನಸ್ಸಿಗೆ ನೋವಾಗಿದೆ. ಕುಮಾರಣ್ಣ ಸಿಎಂ ಆಗುವವರೆಗೂ ಚಪ್ಪಲಿ ಧರಿಸಲ್ಲ ಎಂದಿದ್ದರು. ಅವರ ಕುಟುಂಬಕ್ಕೆ ನೋವನ್ನ ಭರಿಸುವ ಶಕ್ತಿಯನ್ನ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಜೀವನೋಪಾಯಕ್ಕೆ ನೆರವು ನೀಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ನಕ್ಸಲ್ ಮುಖಂಡನ ಪರ ಘೋಷಣೆ; ಹಿಂಸಾ ರೂಪಕ್ಕೆ ತಿರುಗಿದ ದೆಹಲಿ ಪ್ರತಿಭಟನೆ – 15ಕ್ಕೂ ಹೆಚ್ಚು ಮಂದಿ ಬಂಧನ
