ಬೆಂಗಳೂರು: ಸ್ನಾತಕೋತ್ತರ ಆಯುಷ್ (ಪಿಜಿ ಆಯುಷ್) ಕೋರ್ಸ್‌ಗಳ ಪ್ರವೇಶ ಸಂಬಂಧ ಎರಡನೇ ಸುತ್ತಿನ ಸೀಟು ಹಂಚಿಕೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ಇಂದಿನಿಂದ ಆರಂಭವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಇಚ್ಛೆ/ಆಯ್ಕೆಗಳನ್ನು ಬದಲಾಯಿಸಿಕೊಳ್ಳಲು ನ.26ರಂದು ಬೆಳಿಗ್ಗೆ 9 ಗಂಟೆವರೆಗೆ ಅವಕಾಶ ನೀಡಲಾಗಿದೆ. ನ.26ರಂದು ಸಂಜೆ 4ಗಂಟೆಗೆ ತಾತ್ಕಾಲಿಕ ಫಲಿತಾಂಶ ಹಾಗೂ ನ.27ರಂದು ಬೆಳಿಗ್ಗೆ 11ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ವಿವರಿಸಿದ್ದಾರೆ.ಇದನ್ನೂ ಓದಿ: ಬೈಕ್‌ನಲ್ಲಿ ತಲವಾರ್ ಹಿಡಿದು ಸಾಗ್ತಿದ್ದವರ ವಿಡಿಯೋ ಮಾಡಿದ್ದಕ್ಕೆ ಹಲ್ಲೆ – ಓರ್ವ ವಶಕ್ಕೆ
ಸೀಟು ಹಂಚಿಕೆಯಾದವರು ನ.28ರಿಂದ 29ರವರೆಗೆ ಶುಲ್ಕ ಪಾವತಿ ಮತ್ತು ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ನ.30ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಸೇವಾ ನಿರತರಿಗೆ ಪಿಜಿ ಮೆಡಿಕಲ್:
ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಸಲುವಾಗಿ ಸೇವಾ ನಿರತ (In service) ಅಭ್ಯರ್ಥಿಗಳಿಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಇಂದಿನಿಂದ ಲಿಂಕ್ ಬಿಡುಗಡೆ ಮಾಡಲಾಗಿದೆ. ನ.26ರಂದು ಬೆಳಿಗ್ಗೆ 10 ಗಂಟೆವರೆಗೆ ಇಚ್ಛೆ ದಾಖಲಿಸಬಹುದು. ನ.26ರಂದು ಮಧ್ಯಾಹ್ನ 12 ಗಂಟೆ ನಂತರ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ನ.27ರ ಬೆಳಿಗ್ಗೆ 11 ಗಂಟೆವರೆಗೆ ಇಚ್ಛೆ/ಆಯ್ಕೆಗಳನ್ನು ಅದಲು-ಬದಲು ಮಾಡಿಕೊಳ್ಳಲು ಅವಕಾಶ ಇರುತ್ತದೆ. ನ.27ರಂದು ಸಂಜೆ 4 ಗಂಟೆ ನಂತರ ತಾತ್ಕಾಲಿಕ ಫಲಿತಾಂಶ ಹಾಗೂ ನ.28ರಂದು ಬೆಳಿಗ್ಗೆ 11 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿವರಗಳಿಗೆ ವೆಬ್‌ಸೈಟ್ ನೋಡಿ ಎಂದು ಸಲಹೆ ನೀಡಿದ್ದಾರೆ.ಇದನ್ನೂ ಓದಿ:ವಿಜಯ್ ಸೇತುಪತಿ ಹೊಸ ಸಿನಿಮಾದ ಶೂಟಿಂಗ್ ಮುಕ್ತಾಯ: ಪುರಿ ನಿರ್ದೇಶನದ ಸಿನಿಮಾ

