ಬೆಂಗಳೂರು: ಭ್ರಷ್ಟಾಚಾರ ಆರೋಪ ಹೊತ್ತಿರುವ ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್ ನೀಡಿದೆ. ರಾಜ್ಯದ 10 ಕಡೆ ದಾಳಿ ನಡೆಸಿದೆ.
ಎಲ್ಲೆಲ್ಲಿ ದಾಳಿ?
ಬೆಂಗಳೂರು- RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ.
ಮಂಡ್ಯ- ನಗರ ಪಾಲಿಕೆ CAO ಪುಟ್ಟಸ್ವಾಮಿ.
ಬೀದರ್- ಕೃಷ್ಣಾ ಮೇಲ್ದಂಡೆ ಯೋಜನೆ ಮು.ಇಂಜಿನಿಯರ್ ಪ್ರೇಮ್ ಸಿಂಗ್.
ಮೈಸೂರು- ಹೂಟಗಳ್ಳಿ ನಗರ ಪಾಲಿಕೆ ರೆವಿನ್ಯೂ ಇನ್‌ಸ್ಪೆಕ್ಟರ್ ರಾಮಸ್ವಾಮಿ ಸಿ.
ಧಾರವಾಡ- ಕರ್ನಾಟಕ ವಿ.ವಿಯ ಸ.ಪ್ರಾಧ್ಯಾಪಕ ಸುಭಾಶ್ ಚಂದ್ರ.
ಧಾರವಾಡ- ಪ್ರಾ.ಪಶು ಕ್ಲಿನಿಕ್ ಹುಲಿಗೋಲ್ ಹಿರಿಯ ಪರೀಕ್ಷಕ ಸತೀಶ್.
ಶಿವಮೊಗ್ಗ- SIMS ಮೆಡಿಕಲ್ ಕಾಲೇಜ್ FDA ಲಕ್ಷ್ಮೀಪತಿ ಸಿ.ಎನ್.
ದಾವಣಗೆರೆ- APMC ಸ.ನಿರ್ದೇಶಕ ಪ್ರಭು ಜೆ.
ಮೈಸೂರು (ಮಡಿಕೇರಿ) PWD, ಸ.ಅ.ಇಂಜಿನಿಯರ್ ಗಿರೀಶ್ ಡಿ.ಎಂ.
ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ, ಕಚೇರಿಗಳ ದಾಳಿ ಮಾಡಿ ಲೋಕಾಯುಕ್ತ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

