ದಾವಣಗೆರೆ: ನಗರದ (Davangere) ಕುಂದುವಾಡ ಕೆರೆಯಲ್ಲಿ ಇಬ್ಬರು ಯುವಕರ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ.
ಶಾಂತಿನಗರದ ಚೇತನ್ (22), ಮನು (23) ಮೃತ ದುರ್ದೈವಿಗಳು. ಇಬ್ಬರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಇಂದು (ನ.25) ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಇಬ್ಬರ ಶವಗಳು ಕೆರೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿವೆ. ಇದನ್ನೂ ಓದಿ: Anekal | ರಸ್ತೆ ಗುಂಡಿ ತಪ್ಪಿಸಲು ಹೋಗಿ ಚಾಲಕನ ಸಮೇತ ಕೆರೆಗೆ ಬಿದ್ದ ಲಾರಿ
ಯುವಕರು ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ರಾ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಯುವಕನ ಮನೆಯಲ್ಲಿ ಸಿಕ್ಕ ವಿವಾಹಿತೆ – ಮಹಿಳೆ ಕುಟುಂಬಸ್ಥರಿಂದ ಥಳಿಸಿ ಹತ್ಯೆ

