Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಯಕತ್ವ ಬದಲಾವಣೆ ಐದಾರು ಜನರ ಗುಟ್ಟಿನ ವ್ಯಾಪಾರ, ಬಹಿರಂಗವಾಗಿ ಚರ್ಚಿಸಲ್ಲ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾಯಕತ್ವ ಬದಲಾವಣೆ ಐದಾರು ಜನರ ಗುಟ್ಟಿನ ವ್ಯಾಪಾರ, ಬಹಿರಂಗವಾಗಿ ಚರ್ಚಿಸಲ್ಲ: ಡಿಕೆಶಿ

Districts

ನಾಯಕತ್ವ ಬದಲಾವಣೆ ಐದಾರು ಜನರ ಗುಟ್ಟಿನ ವ್ಯಾಪಾರ, ಬಹಿರಂಗವಾಗಿ ಚರ್ಚಿಸಲ್ಲ: ಡಿಕೆಶಿ

Public TV
Last updated: November 25, 2025 5:02 pm
Public TV
Share
2 Min Read
dk shivakumar 1 6
SHARE

ರಾಮನಗರ: ನಾಯಕತ್ವ ಬದಲಾವಣೆ ನಮ್ಮ ಐದಾರು ಜನರ ನಡುವಿನ ಗುಟ್ಟಿನ ವಿಚಾರ. ಇದನ್ನು ನಾನು ಬಹಿರಂಗ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಇಂದು ಖರ್ಗೆ ಹಾಗೂ ರಾಹುಲ್ ಗಾಂಧಿ ಚರ್ಚೆ ವಿಚಾರವಾಗಿ ಕನಕಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರು ಚರ್ಚೆ ಮಾಡುವ ವಿಚಾರ ನನಗೆ ಗೊತ್ತಿಲ್ಲ. ಅವರು ನನಗೆ ಈ ಬಗ್ಗೆ ಹೇಳಿಲ್ಲ. ನಾನು ಆತ್ಮಸಾಕ್ಷಿಯನ್ನು ನಂಬಿದ್ದೇನೆ. ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು. ಪಕ್ಷಕ್ಕೆ ಮುಜುಗರ ತರಲು, ಪಕ್ಷವನ್ನು ದುರ್ಬಲಗೊಳಿಸಲು ನನಗೆ ಇಷ್ಟವಿಲ್ಲ. ಪಕ್ಷ ಹಾಗೂ ಕಾರ್ಯಕರ್ತರು ಇದ್ದರೆ ನಾವು. ಸಿಎಂ ಸಿದ್ದರಾಮಯ್ಯ (Siddaramaiah) ಹಿರಿಯ ನಾಯಕರು, ನಮ್ಮ ಪಕ್ಷದ ಆಸ್ತಿ. ಅವರು ಸಿಎಂ ಆಗಿ ಏಳೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ್ದಾರೆ. ಮುಂದಿನ ಬಜೆಟ್ ಅನ್ನು ಅವರೇ ಮಂಡಿಸುವುದಾಗಿ ಹೇಳಿದ್ದಾರೆ. ಬಹಳ ಸಂತೋಷ. ಅವರು ವಿರೋಧ ಪಕ್ಷದ ನಾಯಕರಾಗಿ ಶ್ರಮಿಸಿದ್ದಾರೆ, ಪಕ್ಷ ಕಟ್ಟಿದ್ದಾರೆ. ನಾವೆಲ್ಲರೂ ಸೇರಿ 2028 ಹಾಗೂ 2029ರ ಚುನಾವಣೆ ಗುರಿಯತ್ತ ಗಮನ ಹರಿಸಬೇಕು ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು: ಹೆಚ್.ವಿಶ್ವನಾಥ್

ಇನ್ನೂ ಡಿಕೆಶಿ ಸಿಎಂ ಆಗಬೇಕು ಎಂದು ಅಭಿಮಾನಿಗಳು ಪೂಜೆ ಬಗ್ಗೆ ಪ್ರತಿಕ್ರಿಯಿಸಿ, ನನಗೆ ಅಧಿಕಾರ ಸಿಗಲಿ ಎಂದು ಈಗ ಪೂಜೆ ಮಾಡುತ್ತಿರುವುದಕ್ಕಿಂತ, ನಾನು ಜೈಲಿಗೆ ಹೋದಾಗ ನನ್ನ ತಾಯಂದಿರು, ಯುವಕರು, ಹಿರಿಯರು ದೇವಾಲಯದ ಅರ್ಚಕರು ಮಾಡಿದ ಪ್ರಾರ್ಥನೆಯನ್ನು ಮರೆಯಲು ಸಾಧ್ಯವಿಲ್ಲ. ಬಿಜೆಪಿ ಅವಧಿಯಲ್ಲಿ ನಾನು ಜೈಲಿಂದ ಬಿಡುಗಡೆ ಆದಾಗ ಪೊಲೀಸರ ಬೆದರಿಕೆಗೂ ಹಿಂಜರಿಯದೇ ನನ್ನನ್ನು ಜನ ಸ್ವಾಗತಿಸಿದರು. ನಾನು ಜೈಲಲ್ಲಿ ಇದ್ದಾಗ ಕರವೇ ನಾರಾಯಣ ಗೌಡರಿಗೆ ಪ್ರತಿಭಟನೆ ನಡೆಸದಂತೆ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಬೆದರಿಕೆ ಹಾಕಿದ್ದರು. ಕೆಲವು ಸ್ವಾಮೀಜಿಗಳು ಬಂದರು, ಕೆಲವರು ಬರಲಿಲ್ಲ. ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಬೇರೆ ಹೇಳಿಕೆ ಕೊಟ್ಟರು. ಅನೇಕರು ನಮ್ಮ ಮನೆಗೆ ಬಂದು ನನ್ನ ಪತ್ನಿ ಹಾಗೂ ಮಕ್ಕಳ ಜೊತೆ ಮಾತನಾಡಿ ಧೈರ್ಯ ತುಂಬಿದ್ದರು. ಅಂದು ಜನ ಹರಕೆ ಹೊತ್ತು ಪ್ರಾರ್ಥಿಸಿದ್ದರು. ಆಗ ಕಟ್ಟಿಕೊಂಡ ಹರಕೆ ಮುಗಿಸಲು ಇನ್ನೂ ನನಗೆ ಆಗುತ್ತಿಲ್ಲ. ಅನೇಕರು ನಾನು ಬಿಡುಗಡೆಯಾಗುವವರೆಗೂ ಕಾಲಿಗೆ ಚಪ್ಪಲಿ ಹಾಕಿರಲಿಲ್ಲ. ನಾನು ಇಂದು ಡಿಸಿಎಂ ಆಗಿದ್ದು, ಪಕ್ಷದ ಅಧ್ಯಕ್ಷನಾಗಿದ್ದೇನೆ. ಕಷ್ಟಕಾಲದಲ್ಲಿದ್ದಾಗ ಮಾಡಿದ ಪ್ರಾರ್ಥನೆ, ಆಗ ಅವರು ನನಗೆ ಆತ್ಮಸ್ಥೈರ್ಯ ತುಂಬಿದ್ದು ನನಗೆ ಬಹಳ ವಿಶೇಷ ಎಂದು ನುಡಿದರು. ಇದನ್ನೂ ಓದಿ: ಶಾಸಕರು ದೆಹಲಿಗೆ ಹೋಗಿ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ: ಸಿಎಂ

ಡಿಕೆಶಿಯನ್ನ ಸಿಎಂ ಸ್ಥಾನದಲ್ಲಿ ನೋಡಬೇಕು ಎಂದು ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲೂ ಜನ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಎಂಬ ಕುರಿತು ಮಾತನಾಡಿ, ನಾನು ಚುನಾವಣೆ ಸಂದರ್ಭದಲ್ಲಿ ಮಹದೇವಪ್ಪ ಅವರ ಕ್ಷೇತ್ರ, ಮಂಡ್ಯ ಸೇರಿದಂತೆ ಎಲ್ಲಾ ಕಡೆಗಳಲ್ಲಿ ನನ್ನ ಮುಖ ನೋಡಿ ಮತ ಹಾಕಿ ಎಂದು ಕೇಳಿದ್ದೇನೆ. ಜನ ನಮ್ಮ ಸಾಮೂಹಿಕ ನಾಯಕತ್ವಕ್ಕೆ ಮತ ಹಾಕಿದ್ದಾರೆ. ನನ್ನೊಬ್ಬನಿಗಾಗಿ ಮತ ಹಾಕಿದ್ದಾರೆ ಎಂದು ನಾನು ಹೇಳುವುದಿಲ್ಲ. 224 ಕ್ಷೇತ್ರಗಳಲ್ಲಿ ನಮಗಿಂತ ನಮ್ಮ ಕಾರ್ಯಕರ್ತರು ಹೆಚ್ಚು ಶ್ರಮ ಹಾಕಿದ್ದಾರೆ ಎಂದರು. ಇದನ್ನೂ ಓದಿ: 2047ರಲ್ಲಿ ವಿಕಸಿತ ಭಾರತ ನಿರ್ಮಾಣಕ್ಕೆ ರಾಮನ ಗುಣ ಮೈಗೂಡಿಸಿಕೊಳ್ಳಬೇಕು: ಮೋದಿ

TAGGED:congressDK ShivakumarPower Shareramanagarasiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ರಾಮನಗರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

Ghaziabad
Crime

ಆನ್‌ಲೈನ್ ಗೇಮ್‌ ಆಡ್ಬೇಡಿ – ಪೋಷಕರು ಬೈದಿದ್ದಕ್ಕೆ 16, 14, 12 ವರ್ಷದ ಸಹೋದರಿಯರು ಅಪಾರ್ಟ್‌ಮೆಂಟ್‌ನಿಂದ ಹಾರಿ ಆತ್ಮಹತ್ಯೆ

Public TV
By Public TV
45 minutes ago
Ration Card
Latest

ಉದ್ಯಮಿಗಳು, ಕಾರು ಮಾಲೀಕರ ಬಳಿಯೂ ಬಿಪಿಎಲ್‌ ಕಾರ್ಡ್‌ – 2 ಲಕ್ಷಕ್ಕೂ ಅಧಿಕ ಅನರ್ಹರಿಗೆ ನೋಟಿಸ್‌!

Public TV
By Public TV
1 hour ago
sister and brother
Bengaluru City

ಪೋಷಕರು ಜೋರು ಮಾಡಿದ್ದಕ್ಕೆ ಸಿಟ್ಟಾಗಿ ಮನೆ ತೊರೆದ ಅಕ್ಕ-ತಮ್ಮ!

Public TV
By Public TV
2 hours ago
Mother son attacked for uploading photo of saffron flag Gurmatkal Yadagiri
Latest

ಕೇಸರಿ ಧ್ವಜದ ಪೋಟೋ ಅಪ್ಲೋಡ್‌ ಮಾಡಿದ್ದಕ್ಕೆ ತಾಯಿ, ಮಗನ ಮೇಲೆ ಹಲ್ಲೆ

Public TV
By Public TV
3 hours ago
R Ashoka 2
Bengaluru City

ಸಿಎಂ ಕುರ್ಚಿ ಉಳಿಯಬೇಕಿದೆ, ಅದಕ್ಕೆ AICC ಗೆ ಸಾವಿರ ಸಾವಿರ ಕೋಟಿ ಹೋಗ್ತಿದೆ; ಆರ್‌. ಅಶೋಕ್‌

Public TV
By Public TV
3 hours ago
Government Hospital 3
Bagalkot

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ – ರಾಜ್ಯದಲ್ಲಿ ಶುರುವಾಗುತ್ತಾ ಹೆಲ್ತ್ ಎಮೆರ್ಜೆನ್ಸಿ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?