ಹಾವೇರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ (Electrical Short Circuit) 2 ಮೊಬೈಲ್ ಅಂಗಡಿಗಳಿಗೆ ಬೆಂಕಿ ಬಿದ್ದು ಸುಟ್ಟು ಭಸ್ಮವಾದ ಘಟನೆ ಹಾವೇರಿ ಬಸ್ ನಿಲ್ದಾಣ ಬಳಿ ನಡೆದಿದೆ.

ರಫೀಕ್ ಬೋರ್ಗಲ್, ಸಾಹಿಲ್ ಮಾಣಿಕ್ ಎಂಬುವರಿಗೆ ಸೇರಿದ ಮೊಬೈಲ್ ಅಂಗಡಿಗಳು (Mobile Shops) ಸುಟ್ಟು ಕರಕಲಾಗಿವೆ. ಇದನ್ನೂ ಓದಿ: ನ. 28ರಂದು ಉಡುಪಿ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ಮೋದಿ ರೋಡ್ ಶೋ

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿರುವ ಶಂಕೆ ವ್ಯಕ್ತವಾಗಿದೆ. ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಮೊಬೈಲ್‌ಗಳು ಸೇರಿದಂತೆ ವಸ್ತುಗಳು ಸುಟ್ಟು ಕರಕಲಾಗಿವೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಸ್ಮೃತಿ ಮಂಧಾನಗೆ ವಂಚಿಸಿದ್ರಾ ಪಾಲಶ್ ಮುಚ್ಚಲ್?

