ಬೆಂಗಳೂರು: ಯುಜಿ ಆಯುಷ್ ಕೋರ್ಸ್‌ಗಳ (PG AYUSH Course) ಎರಡನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಆರಂಭಿಸಿದ್ದು, ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.27ರಂದು ಬೆಳಿಗ್ಗೆ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ(H Prasanna) ತಿಳಿಸಿದ್ದಾರೆ.
ನ.27ರಂದು ಮಧ್ಯಾಹ್ನ 2 ಗಂಟೆ ನಂತರ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ನ.28ರಂದು ಬೆಳಿಗ್ಗೆ 10 ಗಂಟೆ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ನ.30ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಅರುಣಾಚಲ ಪ್ರದೇಶ ನಮ್ಮದು – ಭಾರತದ ಮಹಿಳೆ ಬಂಧನದ ಬಳಿಕ ಚೀನಾಗೆ ಭಾರತ ಖಡಕ್ ಉತ್ತರ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇವಾ ನಿರತ ವೈದ್ಯರಿಗೆ ಡಿಎನ್ ಬಿ/ಡಿಪ್ಲೊಮಾ ಕೋರ್ಸ್‌ಗಳ ಸೀಟು ಮ್ಯಾಟ್ರಿಕ್ಸ್ ಪ್ರಕಟಿಸಿದ್ದು, ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.26ರಂದು ಬೆಳಿಗ್ಗೆ 10 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ನೋಡಲು ಕೋರಲಾಗಿದೆ. ಇದನ್ನೂ ಓದಿ: ಆಳಂದ ವೋಟ್ ಚೋರಿ ಕೇಸ್ ತನಿಖೆ ಚುರುಕು – ಸಾವಿರಕ್ಕೂ ಅಧಿಕ ಜನರ ಹೇಳಿಕೆ ದಾಖಲಿಸಿದ ಎಸ್‌ಐಟಿ

