– ಸೋಲೇ ಕಾಣದ ಟೆಂಬಾ; ಕ್ಲೀನ್ ಸ್ವೀಪ್‌ನಲ್ಲಿ ಸರಣಿ ಗೆದ್ದ ದ.ಆಫ್ರಿಕಾ
ಗುವಾಹಟಿ: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಫಸ್ಟ್ ಟೈಮ್ ಭಾರತ ತಂಡ ಅತ್ಯಂತ ಕೆಟ್ಟ ದಾಖಲೆ ಬರೆದಿದೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ತವರಿನಲ್ಲೇ ವೈಟ್‌ವಾಶ್ ಆಗಿದ್ದು, ಭಾರೀ ಮುಖಭಂಗ ಅನುಭವಿಸಿದೆ.
ಹೌದು. ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ನಾಯಕತ್ವದ ಟೀಂ ಇಂಡಿಯಾ 408 ರನ್‌ಗಳ ಅಂತರದ ಸೋಲು ಕಂಡಿದೆ. ಇದರೊಂದಿಗೆ ಟೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಕ್ಲೀನ್ ಸ್ವೀಪ್‌ನೊಂದಿಗೆ ಭಾರತದ ನೆಲದಲ್ಲಿ ಸರಣಿ ಕೈವಶ ಮಾಡಿಕೊಂಡಿದೆ. ಇದನ್ನೂ ಓದಿ: ಟಿ20 ವಿಶ್ವಕಪ್ | ಬೆಂಗಳೂರಿನಲ್ಲಿ ಪಂದ್ಯವಿಲ್ಲ – 8 ಮೈದಾನಗಳಲ್ಲಿ ಟೂರ್ನಿ

549 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಭಾರತ 4ನೇ ದಿನದ ಅಂತ್ಯಕ್ಕೆ 27 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಂಕಷ್ಟಕ್ಕೆ ಸಿಲುಕಿತ್ತು. ಇಂದು ಪಂದ್ಯವನ್ನ ಡ್ರಾಗೊಳಿಸುವ ವಿಶ್ವಾಸದೊಂದಿಗೆ ಕಣಕ್ಕಿಳಿದ ಭಾರತ ತಂಡ ಕೇವಲ 140 ರನ್‌ಗಳಿಗೆ ಆಲೌಟ್ ಆದ ಪರಿಣಾಮ ದಕ್ಷಿಣ ಆಫ್ರಿಕಾ 408 ರನ್‌ಗಳ ಬೃಹತ್ ಜಯ ಸಾಧಿಸಿತು.
ಇತಿಹಾಸದಲ್ಲೇ ಕೆಟ್ಟ ಸೋಲು
ಹೌದು. ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ಈ ಹಿಂದೆಯೇ ಹಲವು ಸೋಲುಗಳನ್ನ ಕಂಡಿದೆ. ಇದೇ ವರ್ಷ ನ್ಯೂಜಿಲೆಂಡ್ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲೂ 0-3 ಅಂತರದಲ್ಲಿ ಸೋಲು ಕಂಡಿದ್ದರೂ ರನ್ ಅಂತರ ಕಡಿಮೆಯಿತ್ತು. ಆದ್ರೆ ಇದೇ ಫಸ್ಟ್ ಟೈಮ್ 408 ರನ್‌ಗಳ ದೊಡ್ಡ ಅಂತರದಲ್ಲಿ ಸೋಲು ಕಂಡು ಕೆಟ್ಟ ದಾಖಲೆ ಹೆಗಲಿಗೇರಿಸಿಕೊಂಡಿದೆ.

ಜಡ್ಡು ಫಿಫ್ಟಿ ಹೋರಾಟ
ಕೊನೆಯ ದಿನ ಭಾರತದ ಹೆಲುವಿಗೆ 508 ರನ್‌ಗಳ ಅಗತ್ಯವಿತ್ತು, ಪವಾಡವಾದ್ರೂ ಸಾಧಿಸಿ ಪಂದ್ಯವನ್ನ ಡ್ರಾ ಮಾಡುವತ್ತ ಚಿತ್ತ ಹರಿಸಿತ್ತು. ಇದಕ್ಕಾಗಿ ಆಟಗಾರರು ನಿಧಾನಗತಿಯಲ್ಲಿ ರನ್ ಕಲೆಹಾಕಿದ್ರು. ಆದ್ರೆ ಅದಕ್ಕೆ ಅವಕಾಶ ಕೊಡದ ಆಫ್ರಿಕಾ 140 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಇದನ್ನೂ ಓದಿ: ಸ್ಮೃತಿ ಮಂಧಾನಗೆ ವಂಚಿಸಿದ್ರಾ ಪಾಲಶ್ ಮುಚ್ಚಲ್?
ಕೊನೆಯದಿನದಾಟದಲ್ಲಿ ರವೀಂದ್ರ ಜಡೇಜಾ 54 ರನ್ (57 ಎಸೆತ, 4 ಬೌಂಡರಿ, 2 ಸಿಕ್ಸರ್) ಗಳಿಸಿದ್ದು ಬಿಟ್ಟರೆ, ಉಳಿದ ಆಟಗಾರರು ಅಲ್ಪಮೊತ್ತಕ್ಕೆ ಔಟಾಗಿ ಪೆವಿಲಿಯನ್ ಸೇರಿಕೊಂಡ್ರು.

ಸೋಲೇ ಕಾಣದ ಬವುಮಾ
ಏಕದಿನ ಕ್ರಿಕೆಟ್‌ನಲ್ಲಿ ಭಾರೀ ವೈಫಲ್ಯ ಅನುಭವಿಸುತ್ತಿದ್ದ ಟೆಂಬಾ ಬವುಮಾ ಮತ್ತೊಂದು ಕಡೆ ಟೆಸ್ಟ್ ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾದ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಆಸ್ಟ್ರೇಲಿಯಾ ವಿರುದ್ಧ ಲಾರ್ಡ್ಸ್ ಅಂಗಳದಲ್ಲಿ ಗೆದ್ದು ವಿಶ್ವ ಟೆಸ್ಟ್ ಚಾಂಪಿಯನ್ ಪಟ್ಟ ಅಲಂಕರಿಸಿದ್ರು. ಇದೀಯ ಭಾರತದಲ್ಲಿ ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಟೆಸ್ಟ್ ಸರಣಿಯಲ್ಲಿ ಸೋಲಿಲ್ಲದ ಸರದಾರನಾಗಿ ಮುನ್ನಡೆಯುತ್ತಿರುವ ಬವುಮಾ ಈವರೆಗೆ ನಾಯಕನಾಗಿ ಆಡಿದ 12 ಪಂದ್ಯಗಳಲ್ಲಿ 11 ಪಂದ್ಯ ಗೆದ್ದಿದ್ದಾರೆ. 1 ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಇದನ್ನೂ ಓದಿ: ಕಬಡ್ಡಿಯಲ್ಲಿ ಭಾರತವೇ ವಿಶ್ವ ಚಾಂಪಿಯನ್ – ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದ ಮಹಿಳೆಯರು

