Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ 9 ಜಿಲ್ಲೆಗಳನ್ನೊಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bidar | ಕರ್ನಾಟಕದ 9 ಜಿಲ್ಲೆಗಳನ್ನೊಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು

Bidar

ಕರ್ನಾಟಕದ 9 ಜಿಲ್ಲೆಗಳನ್ನೊಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು

Public TV
Last updated: November 26, 2025 3:50 pm
Public TV
Share
3 Min Read
Piyush Goyal HDK
SHARE

– ಸಚಿವ ಪಿಯೂಶ್ ಗೋಯೆಲ್ ಜೊತೆ ಹೆಚ್‌ಡಿಕೆ ನಡೆಸಿದ್ದ ಚರ್ಚೆಗೆ ಮಹತ್ವದ ಮುನ್ನಡೆ

ನವದೆಹಲಿ: ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರಿಂದ ಪ್ರಸ್ತಾಪಿತ ಕರ್ನಾಟಕದ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ (NICDP- National Industrial Corridor Development Programme) ಕೇಂದ್ರ ಸರ್ಕಾರ (Central Govt) ಸಕಾರಾತ್ಮಕವಾಗಿ ಸ್ಪಂದಿಸಿದೆ.

ಕರ್ನಾಟಕದ ಕೈಗಾರಿಕೆ ಹಾಗೂ ಸಾಗಣೆ ಕ್ಷೇತ್ರಗಳಿಗೆ ಪರಿವರ್ತನಾತ್ಮಕ ಕಾಯಕಲ್ಪ ನೀಡುವ ಈ ಯೋಜನೆಗೆ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ (Piyush Goyal) ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಒಂಬತ್ತು ಕೈಗಾರಿಕಾ ಪಾರ್ಕ್‌ಗಳನ್ನು ಸ್ಥಾಪಿಸುವ ಬಗ್ಗೆ ಒಲವು ತೋರಿದ್ದು, ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.ಇದನ್ನೂ ಓದಿ: ಸಂವಿಧಾನ ಪ್ರಜಾಪ್ರಭುತ್ವದ ಬಲವಾದ ಅಡಿಪಾಯ, ನಮ್ಮ ಕಾರ್ಯಗಳ ಮೂಲಕ ಮೌಲ್ಯಗಳನ್ನ ಬಲಪಡಿಸೋಣ: ಮೋದಿ ಕರೆ

ಇದೇ ನ.13ರಂದು ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿದ್ದ ಸಚಿವ ಕುಮಾರಸ್ವಾಮಿ ಅವರು ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ರಾಯಚೂರು ಮತ್ತು ಬೀದರ್ ಜಿಲ್ಲೆಗಳನ್ನು ಒಳಗೊಂಡ ಸುವಿಶಾಲವಾದ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನ ಮಾಡಬೇಕೆಂದು ಕೋರಿ ಮನವಿಯನ್ನು ಸಲ್ಲಿಸಿ ಮಾತುಕತೆ ನಡೆಸಿದ್ದರು.

ಕುಮಾರಸ್ವಾಮಿ ಅವರ ಪ್ರಸ್ತಾವನೆಯನ್ನು ರಾಜ್ಯದ ಅಭಿವೃದ್ಧಿಗೆ ಪರಿವರ್ತನಾತ್ಮಕ ಪರಿಕಲ್ಪನೆ ಎಂದು ಶ್ಲಾಘಿಸಿದ್ದ ಗೋಯೆಲ್ ಅವರು, ಈ ಬಗ್ಗೆ ಉತ್ತರವನ್ನು ಬರೆದಿದ್ದಾರೆ. ಕರ್ನಾಟಕದ ಪ್ರಾದೇಶಿಕ ಸಮತೋಲಿತ ಕೈಗಾರಿಕಾ ಅಭಿವೃದ್ಧಿಗೆ ಇದು ಪೂರಕವಾಗಿದೆ. ಇಂತಹ ಆಕಾಂಕ್ಷೆಗಳನ್ನು ಈಡೇರಿಸುವ ಕೇಂದ್ರದ ರಚನಾತ್ಮಕ ಕೇಂದ್ರ ನೀತಿಯನ್ನು ಕಾರ್ಯರೂಪಕ್ಕೆ ತರುವಲ್ಲಿ ಈ ಕ್ರಮವು ಒಂದು ಪ್ರಮುಖ ಆರಂಭಿಕ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.

Piyush Goyal HDK 1

ಕೈಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯವಾಗಿರುವ ಕರ್ನಾಟಕದಾದ್ಯಂತ ಸೂಕ್ತ ಕೈಗಾರಿಕಾ ಕಾರಿಡಾರ್ ಯೋಜನೆಯ ಚೌಕಟ್ಟಿನಡಿಯಲ್ಲಿ ಕೈಗಾರಿಕಾ ಪಾರ್ಕ್ಗಳನ್ನು ಸ್ಥಾಪಿಸುವ ಕುರಿತಂತೆ ಗೋಯೆಲ್ ಅವರನ್ನು ಕುಮಾರಸ್ವಾಮಿ ಅವರು ಮನವೊಲಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ದೃಢ ಸಂಕಲ್ಪದಂತೆ ಪ್ರಾದೇಶಿಕ ಕೈಗಾರಿಕಾ ಬೆಳವಣಿಗೆಯನ್ನು ಬಲಪಡಿಸಿ ಉತ್ತೇಜಿಸಲು, ಸಾಗಾಣಿಕೆಯ ಮೂಲಸೌಕರ್ಯವನ್ನು ಅಧಿಕವಾಗಿ ಅಭಿವೃದ್ಧಿಪಡಿಸಲು ಹಾಗೂ ಕರ್ನಾಟಕದ ಉದ್ದಗಲಕ್ಕೂ ಬೃಹತ್ ಪ್ರಮಾಣದಲ್ಲಿ ಉದ್ಯೋಗಾವಕಾಶ ಸೃಷ್ಟಿಸಲು ಈ ಯೋಜನೆಯು ಬಹುದೊಡ್ಡ ಮಟ್ಟದಲ್ಲಿ ಕೊಡುಗೆ ನೀಡುತ್ತದೆ ಎಂಬ ಅಂಶದ ಕುರಿತು ಚರ್ಚಿಸಿದ್ದರು.

ಈ ಯೋಜನೆ ಅನುಷ್ಠಾನಕ್ಕೆ ಬಂದರೆ ಕರ್ನಾಟಕದಲ್ಲಿ ಸರಕು, ಕೈಗಾರಿಕೆ ಉತ್ಪನ್ನಗಳ ಸಾಗಣೆ ಸುಲಭವಾಗಿ ಕೈಗಾರಿಕಾಭಿವೃದ್ಧಿ ವೇಗಗತಿಯಲ್ಲಿ ಸಾಗುತ್ತದೆ. ಉದ್ದೇಶಿತ ಜಿಲ್ಲೆಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಬಂದರೆ ಇಡೀ ರಾಜ್ಯಕ್ಕೆ ನಾಲ್ಕು ದಿಕ್ಕುಗಳ್ಳಿಯೂ ಅನುಕೂಲ ಆಗುತ್ತದೆ. ಈ ಪ್ರಸ್ತಾವಿತ ಕೈಗಾರಿಕಾ ಪಾರ್ಕ್‌ಗಳನ್ನು ಸೂಕ್ತವಾದ ಕೈಗಾರಿಕಾ ಕಾರಿಡಾರ್ ಇಲ್ಲವೇ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ ಚೌಕಟ್ಟಿನ ಅಡಿಯಲ್ಲಿ ಪರಿಗಣಿಸಬೇಕೆಂದು ಹೆಚ್‌ಡಿಕೆ ವಿನಂತಿಸಿದ್ದಾರೆ. ಈ ಜಿಲ್ಲೆಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್‌ಗಳಿಗೆ ಸಂಯೋಜಿಸುವ ಮೂಲಕ ಕರ್ನಾಟಕವು ಉದ್ಯೋಗ ಸೃಷ್ಟಿಯಲ್ಲಿ ನಿರ್ಣಾಯಕ ಪಾತ್ರವಹಿಸಲು ಅನುಕೂಲವಾಗುತ್ತದೆ. ಅಲ್ಲದೆ, ಸಾಕಾಣಿಗೆ ಸುಲಭವಾಗಿ ಖಾಸಗಿ ಬಂಡವಾಳ ಹೂಡಿಕೆಯಲ್ಲೂ ಗಮನಾರ್ಹ ಪ್ರಗತಿ ಸಾಧಿಸಲಿದೆ.

ಸಮಾನ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿ:
ಪ್ರಸ್ತಾವಿತ ಈ ಕೈಗಾರಿಕಾ ಪಾರ್ಕ್‌ಗಳು ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸುವ, ಪ್ರಾದೇಶಿಕ ಪೂರೈಕೆ ಸರಪಳಿಯ ಸಂಪರ್ಕಗಳನ್ನು ಮತ್ತಷ್ಟು ಬಲಪಡಿಸುವ ಹಾಗೂ ಹುಬ್ಬಳ್ಳಿ-ಧಾರವಾಡ ಮತ್ತು ಮಂಗಳೂರಿನಲ್ಲಿ ಸಾಗಣೆ ಮತ್ತು ಉತ್ಪಾದನೆಯಿಂದ ಮೊದಲುಗೊಂಡು ರಾಯಚೂರಿನಲ್ಲಿ ಕೃಷಿ ಸಂಸ್ಕರಣೆ, ಮೈಸೂರು ಮತ್ತು ಕೋಲಾರದಲ್ಲಿ ಮೌಲ್ಯವರ್ಧಿತ ವಲಯಗಳ ವಿಸ್ತರಣೆವರೆಗೆ ವಿಶೇಷ ಕೈಗಾರಿಕಾ ಸಮೂಹಗಳನ್ನು ಉತ್ತೇಜಿಸುತ್ತವೆ.ಇದನ್ನೂ ಓದಿ: ಅರುಣಾಚಲ ಪ್ರದೇಶ ನಮ್ಮದು – ಭಾರತದ ಮಹಿಳೆ ಬಂಧನದ ಬಳಿಕ ಚೀನಾಗೆ ಭಾರತ ಖಡಕ್‌ ಉತ್ತರ

TAGGED:hd kumaraswamynewdelhipiyush goyalಕರ್ನಾಟಕಕೇಂದ್ರ ಸರ್ಕಾರನವದೆಹಲಿಪಿಯೂಷ್ ಗೋಯಲ್ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood

You Might Also Like

Annabhagya 1
Bengaluru City

ಗೃಹಲಕ್ಷ್ಮಿಯಂತೆ ಅನ್ನಭಾಗ್ಯ ಹಣವೂ ಬಾಕಿ ಆರೋಪ – ಒಂದೂವರೆ ಕೋಟಿ ಪಡಿತರದಾರರಿಗೆ ಜಮೆ ಆಗಿಲ್ವಾ 657 ಕೋಟಿ?

Public TV
By Public TV
7 minutes ago
Byrathi Suresh
Bengaluru City

ಟೆಂಡರ್‌ಗೂ ಮಂತ್ರಿಗಳಿಗೂ ಏನ್‌ ಸಂಬಂಧ? – ಗಾಳಿಯಲ್ಲಿ ಗುಂಡು ಹಾರಿಸಬೇಡಿ: ಬೈರತಿ ಸುರೇಶ್ ತಾಕೀತು

Public TV
By Public TV
42 minutes ago
Tumakuru Siddaganga Mutt
Districts

ಪಬ್ಲಿಕ್ ಟಿವಿ ಇಂಪ್ಯಾಕ್ಟ್ – 1.96 ಕೋಟಿ ವಿದ್ಯುತ್ ಬಿಲ್ ಪಾವತಿಸಿದ KIADB

Public TV
By Public TV
45 minutes ago
siddaramaiah
Bengaluru City

ಸಿಎಂ ಎಂಟ್ರಿ ಬೆನ್ನಲ್ಲೇ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಚುನಾವಣೆ ಮುಂದೂಡಿಕೆ

Public TV
By Public TV
1 hour ago
Pakistan Cricket Team
Cricket

T20 World Cup | ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ನಿರ್ಧಾರ ಪೆಂಡಿಂಗ್‌ ಇಟ್ಟ ಪಾಕ್‌!

Public TV
By Public TV
1 hour ago
Serial accident on Belagavi
Belgaum

ಬೆಳಗಾವಿ ಹೈವೇಯಲ್ಲಿ ಸರಣಿ ಅಪಘಾತ – ಅದೃಷ್ಟವಶಾತ್‌ ಪ್ರಾಣಹಾನಿ ಇಲ್ಲ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?