ಬೆಂಗಳೂರು: ಸಚಿವರೊಬ್ಬರ ಆಪ್ತರ ರಿಯಲ್ ಎಸ್ಟೇಟ್ ಬಿಲ್ಡರ್ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ.
ಈ ಹಿಂದೆ ಆದಾಯ ತೆರಿಗೆ ಇಲಾಖೆಯ (Income Tax) ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಪರಿಶೀಲನೆ ನಡೆಸಿದ ಬಳಿಕ ವರದಿಯನ್ನು ಇಡಿ ಅಧಿಕಾರಿಗಳಿಗೆ ವರ್ಗಾವಣೆ ಮಾಡಿದ್ದರು.
ಐಟಿ ಅಧಿಕಾರಿಗಳ ವರದಿ ಮೇಲೆ ದೆಹಲಿಯ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲು ಮಾಡಿಕೊಂಡಿತ್ತು. ಇಂದು ದಾಳಿ ನಡೆಸಿದ್ದು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ದೆಹಲಿಯ ಇಡಿ ಅಧಿಕಾರಿಗಳ ತಂಡ 7 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದೆ.

