– ಅಭಿಮಾನಿಗಳು ಪಟಾಕಿ, ಧ್ವಜ ಬ್ಯಾಗ್, ನೀರಿನ ಬಾಟಲ್ ತರುವಂತಿಲ್ಲ
ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಭಗವದ್ಗೀತೆ ಪಠಣ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸುತ್ತಿದ್ದಾರೆ. ಪ್ರಧಾನಿಗಳ ಭೇಟಿ ಸಮಯದಲ್ಲಿ ಶಿಷ್ಟಾಚಾರ ಪಾಲಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ್ ಆದೇಶಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತ (BNS) 2023, ಸೆಕ್ಷನ್ 163ರ ಅನ್ವಯ ಆದೇಶಿಸಿದ್ದಾರೆ.

ಹೆಲಿಪ್ಯಾಡ್ ವಠಾರ, ಶ್ರೀ ಕೃಷ್ಣ ಮಠ (Udupi Sri Krishna Matha) ವಠಾರ, ಪ್ರವಾಸಿ ಮಂದಿರದ ಸುತ್ತಮುತ್ತ ಹಾಗೂ ಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಲು ಆದೇಶದಲ್ಲಿ ಸೂಚಿಸಿದ್ದಾರೆ. ಅಲ್ಲದೇ ನವೆಂಬರ್ 28ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಬಂದ್ ಇರಬೇಕು. ನವಂಬರ್ 28 ಸಂಜೆ 6 ಗಂಟೆಯವರೆಗೆ ನಗರದ 5 ಕಿ.ಮೀ ವ್ಯಾಪ್ತಿಯಲ್ಲಿ ಡ್ರೋನ್ (Drone) ಹಾರಾಟ ನಿಷೇಧಿಸಿದ್ದು, ಉಡುಪಿಯನ್ನ (Udupi) ನೋ ಫ್ಲೈ ಝೋನ್ ಎಂದು ಘೋಷಿಸಲಾಗಿದೆ.

ಅಭಿಮಾನಿಗಳು ಪಟಾಕಿ, ಧ್ವಜ ಬ್ಯಾಗ್, ನೀರಿನ ಬಾಟಲ್ ತರುವಂತಿಲ್ಲ
ಇನ್ನೂ ಪ್ರಧಾನಿ ಮೋದಿ ಅವರ ಆಗಮನದ ಹಿನ್ನೆಲೆ ಪ್ರಧಾನಿಗಳ ರೋಡ್ ಶೋ ವೀಕ್ಷಣೆಗೆ ಬರುವ ಅಭಿಮಾನಿಗಳು, ಸಾರ್ವಜನಿಕರಿಗೂ ಕಟ್ಟು ನಿಟ್ಟಿನ ನಿಯಮ ಪಾಲಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಕನಕನ ಕಿಂಡಿಯ ಮೂಲಕ ಶ್ರೀ ಕೃಷ್ಣ ದರ್ಶನ – ಉಡುಪಿ ರಥಬೀದಿಯಲ್ಲಿ ನಾಳೆ ಮೋದಿ ಕಾರ್ಯಕ್ರಮ ಏನೇನು?
ರೋಡ್ ಶೋ ವೀಕ್ಷಣೆಗೆ ಬರುವವರಿಗೆ ಬ್ಯಾಗ್, ನೀರಿನ ಬಾಟಲ್, ಧ್ವಜ ತರುವಂತಿಲ್ಲ. ಫೋಟೋ, ಸ್ಟಿಕರ್ಸ್, ಬಲೂನ್ಸ್, ಪಟಾಕಿ, ಲೂಸ್ ಪಾಲಿಥಿನ್ ತರುವುದನ್ನ ನಿಷೇಧಿಸಲಾಗಿದೆ. ಆದೇಶ ಉಲ್ಲಂಘಿಸುವವರ ವಿರುದದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ʻಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿʼ – ಮತ್ತೆ ವಾಗ್ದಾನ ನೆನಪಿಸಿದ್ರಾ ಡಿಕೆಶಿ?

