ಬೆಳಗಾವಿ: ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಡಿಕೆ ಶಿವಕುಮಾರ್ (DK Shivakumar) ಅವರಿಗೆ ಸಿಎಂ ಕುರ್ಚಿ ಬಿಟ್ಟಕೊಡದೇ ಇದ್ದಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ (Congress) ಸರ್ಕಾರ ಪತನವಾಗಲಿದೆ ಎಂದು ಬೆಳಗಾವಿಯ ಸ್ವಾಮೀಜಿಯೊಬ್ಬರು ಭವಿಷ್ಯ ನುಡಿದಿದ್ದಾರೆ.
ಕುರ್ಚಿ ಕಿತ್ತಾಟದ ಬಗ್ಗೆ ಕಿತ್ತೂರು ತಾಲೂಕಿನ ದೇಗುಲಹಳ್ಳಿ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಮಾತನಾಡಿ, ಮೊದಲನೇ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಲು ಡಿಕೆ ಶಿವಕುಮಾರ್ ಅವರು ಸಹಕಾರ ನೀಡಿದ್ದರು. ಎರಡನೇ ಅವಧಿಗೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟು ಕೊಡಬೇಕು ಎಂದರು. ಇದನ್ನೂ ಓದಿ: ತಂದೆಯ ಮೇಲೆ ಯಾವ ಆರೋಪವಿಲ್ಲ, ಅಧಿಕಾರ ಹಂಚಿಕೆಯ ಸೂತ್ರವೇ ರಚನೆಯಾಗಿಲ್ಲ: ಯತೀಂದ್ರ

