ಬೆಂಗಳೂರು: ರಾಜ್ಯದಲ್ಲಿ ಕುರ್ಚಿ ಕದನ ಜೋರಾಗಿದ್ದು, ಸಿಎಂ ಸಿದ್ದರಾಮಯ್ಯ (Siddaramaiah) ಕ್ಯಾಂಪ್‌ನಿಂದ 6 ಸಚಿವರು ದೆಹಲಿ ದಂಡಯಾತ್ರೆಗೆ ಸಜ್ಜಾಗಿದ್ದಾರೆ.
ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಚಿವರು ದೆಹಲಿ ದಂಡಯಾತ್ರೆ ಹೋಗಲಿದ್ದಾರೆ. ಹೆಚ್.ಕೆ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ ಮತ್ತು ಇನ್ನಿಬ್ಬರು ಸಚಿವರು ನಾಳೆಯೇ ದೆಹಲಿಗೆ ಹೋಗಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ನನ್ನನ್ನು ದೆಹಲಿಗೆ ಬರುವಂತೆ ಕರೆದಿಲ್ಲ: ಡಿಕೆಶಿ

ರಾಜ್ಯದಲ್ಲಾಗುತ್ತಿರುವ ಬೆಳವಣಿಗೆ ಬಗ್ಗೆ ನಮಗೆ ಸಾಕಷ್ಟು ಗೊಂದಲಗಳಿವೆ. ನಾಳೆಯೇ ದೆಹಲಿಗೆ ಹೋಗಿ ಕ್ಲಾರಿಟಿ ಪಡೆದುಕೊಳ್ಳುತ್ತೇವೆ ಎಂಬ ವಿಚಾರವನ್ನು ಪರಮೇಶ್ವರ್ ಅವರು ಸಿಎಂ ಮುಂದಿಟ್ಟಿದ್ದಾರೆ. ಅದಕ್ಕೆ ಸಿದ್ದರಾಮಯ್ಯ ಅವರು ಆಯ್ತು ಎಂದು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆನ್ನಲಾಗಿದೆ.
ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷದ ತುಂಬಿದ ಬೆನ್ನಲ್ಲೇ ಸಿಎಂ ಕುರ್ಚಿ ಕದನ ಏರ್ಪಟ್ಟಿದೆ. ಸಿಎಂ ಮತ್ತ ಡಿಸಿಎಂ ಹೈಕಮಾಂಡ್ ಕರೆದರೆ ನಾವು ಹೋಗ್ತೀವಿ ಅಂತ ಹೇಳಿಕೆ ಕೊಟ್ಟಿದ್ದರು. ಇದನ್ನೂ ಓದಿ: ಒಕ್ಕಲಿಗ ನಾಯಕರಾಗಿ ಬೇಡ, ಡಿಕೆಶಿ ಅವಶ್ಯಕತೆ ಪಕ್ಷಕ್ಕಿದ್ರೇ ಸಿಎಂ ಪಟ್ಟ ಕೊಡಬೇಕು – ಕೆಂಚಪ್ಪ ಗೌಡ
ಈಗ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ವೇಣುಗೋಪಾಲ್ ಅವರು ಸಭೆ ನಡೆಸಿದ್ದಾರೆ. ಬಿಹಾರ ಚುನಾವಣಾ ಫಲಿತಾಂಶದ ಜೊತೆಗೆ ಕರ್ನಾಟಕದ ಬೆಳವಣಿಗೆ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.
ಕೆಲದಿನಗಳ ಹಿಂದೆಯಷ್ಟೇ ಡಿಕೆ ಶಿವಕುಮಾರ್ ಬಣದ ನಾಯಕರು ದೆಹಲಿಗೆ ಹೋಗಿ ಬಂದಿದ್ದರು. ಈಗ ಡಿಸಿಎಂಗೆ ಟಕ್ಕರ್ ಕೊಡಲು ಸಿಎಂ ಕ್ಯಾಂಪ್‌ನಿಂದ ಹಿರಿಯ ನಾಯಕರು ದೆಹಲಿ ಕಡೆಗೆ ಮುಖ ಮಾಡಿದ್ದಾರೆ ಎನ್ನಲಾಗಿದೆ.

