ಕಾರವಾರ: ಶಾಲೆಯ ಬಿಸಿಯೂಟ ಸೇವಿಸಿ 22 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದಿದೆ.
ಮುಂಡಗೋಡ ಪಟ್ಟಣದ ಮಾದರಿ ಶಾಲೆಯ ಸುಮಾರು 22 ವಿದ್ಯಾರ್ಥಿಗಳು ಬಿಸಿಯೂಟ ಸೇವಿಸಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಸಿಯೂಟದಲ್ಲಿ ಇಲಿಯ ಹಿಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಊಟ ಸೇವಿಸಿದ ಸುಮಾರು 400 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಇದನ್ನೂ ಓದಿ: ಪವರ್ ಶೇರಿಂಗ್ ವಿಚಾರ ಹೈಕಮಾಂಡ್ ತೀರ್ಮಾನ ಮಾಡುತ್ತೆ: ಪ್ರಿಯಾಂಕ್ ಖರ್ಗೆ
ಎಂದಿನಂತೆ ಶುಕ್ರವಾರ ಮಧ್ಯಾಹ್ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದಾರೆ. ಊಟದ ವೇಳೆ ಇಲಿಯ ಹಿಕ್ಕೆ ಊಟದಲ್ಲಿ ಕಂಡು ಬಂದಿದೆ. ಹೀಗಾಗಿ, ಅದನ್ನು ಸೇವಿಸಿದ ವಿದ್ಯಾರ್ಥಿಗಳು ವಾಂತಿ ಹಾಗೂ ಹೊಟ್ಟೆನೋವಿನಿಂದ ಬಳಲಿದ್ದಾರೆ. ಹೀಗಾಗಿ ತಕ್ಷಣವೇ ತಾಲೂಕಾಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಪಿಐ ರಂಗನಾಥ್ ಸೇರಿ ಹಲವು ಅಧಿಕಾರಿಗಳ ತಂಡ ತಾಲೂಕಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಾಲೂಕಾಸ್ಪತ್ರೆಯ ವೈದ್ಯರ ತಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಒಂದು ದಿನದ ನಿಗಾದಲ್ಲಿ ಚಿಕಿತ್ಸೆ ನೀಡುವುದಾಗಿ ತಿಳಿಸಿದ್ದಾರೆ. ಶಿಕ್ಷಣ ಇಲಾಖೆಯಿಂದಲೂ ತನಿಖೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯನವರನ್ನು ಇಳಿಸಿದ್ರೆ ಕಾಂಗ್ರೆಸ್ ವಿರುದ್ಧ ಮತ – ಕುರುಬ ಸಂಘದಿಂದ ಎಚ್ಚರಿಕೆ

