ದಾವಣಗೆರೆ: ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ ಆರೋಪದ ಮೇಲೆ ಬಂಡಾಯ ಸಾಹಿತಿ ಹಾಗೂ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯ್ಕ್ (B.T Lalita Naik) ವಿರುದ್ಧ ಎಫ್ಐಆರ್ ದಾಖಲಾಗಿದೆ.
ನ.23 ರಂದು ಭಾನುವಾರ ದಾವಣಗೆರೆ (Davanagere) ನಗರದ ಎವಿಕೆ ಕಾಲೇಜ್ನಲ್ಲಿ ನಡೆದ ಸಂವಾದದಲ್ಲಿ “ರಾಮಾಯಣದಲ್ಲಿರುವ (Ramayana) ಶ್ರೀರಾಮ, ಲಕ್ಷ್ಮಣ, ರಾವಣರು ಆದರ್ಶರಲ್ಲ ಅವರು ಕ್ರೂರಿಗಳು” ಎಂಬ ಹೇಳಿಕೆ ನೀಡಿದ್ದರು. ಅಲ್ಲದೇ ಭಕ್ತಿಯ ಜೊತೆಗೆ ಬೆರೆತ ಮೌಢ್ಯಗಳು ಜನರ ವಿಚಾರ ಶಕ್ತಿಯನ್ನು ಹಾಳುಮಾಡಿವೆ. ದೇಗುಲಗಳು ಜನರನ್ನ ಮೌಢ್ಯತೆಗೆ ತಳ್ಳುತ್ತಿವೆ. ಗ್ರಂಥಾಲಯಗಳು ಜ್ಞಾನಾರ್ಜನೆಯತ್ತ ಕರೆದೊಯ್ಯುತ್ತವೆ. ಮೌಢ್ಯಗಳಿಂದ ಹೊರಬರಲು ಶಿಕ್ಷಣವೇ ಪರಿಹಾರ. ಮನುಷ್ಯನ ತಪ್ಪುಗಳೇ ಸಾಹಿತ್ಯ, ಮಹಾಕಾವ್ಯಗಳಾಗಿ ರೂಪಿತಗೊಂಡಿವೆ. ಇದನ್ನೂ ಓದಿ: ಶ್ರೀರಾಮ, ಲಕ್ಷ್ಮಣ, ರಾವಣ ಆದರ್ಶ ವ್ಯಕ್ತಿಗಳಲ್ಲ, ಕ್ರೂರಿಗಳು – ಬಿ.ಟಿ ಲಲಿತಾ ನಾಯಕ್ ವಿವಾದ
ರಾಮಾಯಣ ಮತ್ತು ಮಹಾಭಾರತ ಕೂಡ ಇಂತಹದ್ದೇ ಸಾಹಿತ್ಯ. ಶಾಂತಿಯ ಪ್ರತೀಕವಾಗಿರುವ ಬುದ್ಧನ ಕೈಯಲ್ಲಿ ಕತ್ತಿ, ಗುರಾಣಿ, ಖಡ್ಗ ಏನೂ ಇಲ್ಲ. ಮಹಾತ್ಮ ಗಾಂಧೀಜಿ ಕೈಯಲ್ಲಿ ಚರಕ ಮಾತ್ರ ಇದೆ. ಇತ್ತೀಚೆಗೆ ಶ್ರೀರಾಮನ ಕೈಗೆ ಬಿಲ್ಲು, ಬಾಣ ನೀಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದರು.
ಈ ಸಂಬಂಧ ಬಡಾವಣೆ ಠಾಣೆ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ (Sumoto Case) ದಾಖಲಿಸಿಕೊಂಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 299 (ಧಾರ್ಮಿಕ ಭಾವನೆಗೆ ಧಕ್ಕೆ), ಸೆಕ್ಷನ್ 353 (ಸಾರ್ವಜನಿಕವಾಗಿ ಅವಹೇಳನ) ಹಾಗೂ ಸೆಕ್ಷನ್ 352 (ಶಾಂತಿ ಕದಡಲು ಉದ್ದೇಶಪೂರ್ವ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತಂದೆಯ ಪರ ಬ್ಯಾಟಿಂಗ್ – ಜಾತಿ ಅಸ್ತ್ರ ಪ್ರಯೋಗಿಸಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಯತೀಂದ್ರ

