Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಣ್ಣಾವ್ರು, ಡಾ.ವಿಷ್ಣುವರ್ಧನ್‌ರೊಂದಿಗೆ ಮರೆಯಲಾಗದ ಅಭಿನಯ – ಉಮೇಶ್‌ ಇನ್ನು ನೆನಪು ಮಾತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಣ್ಣಾವ್ರು, ಡಾ.ವಿಷ್ಣುವರ್ಧನ್‌ರೊಂದಿಗೆ ಮರೆಯಲಾಗದ ಅಭಿನಯ – ಉಮೇಶ್‌ ಇನ್ನು ನೆನಪು ಮಾತ್ರ

Bengaluru City

ಅಣ್ಣಾವ್ರು, ಡಾ.ವಿಷ್ಣುವರ್ಧನ್‌ರೊಂದಿಗೆ ಮರೆಯಲಾಗದ ಅಭಿನಯ – ಉಮೇಶ್‌ ಇನ್ನು ನೆನಪು ಮಾತ್ರ

Public TV
Last updated: November 30, 2025 9:36 am
Public TV
Share
3 Min Read
Umesh 2
SHARE

– 350ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ತನ್ನದೇ ಛಾಪು

ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಕಳಚಿದೆ. ಖ್ಯಾತ ಹಾಸ್ಯನಟ ಉಮೇಶ್ (MS Umesh) ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಉಮೇಶ್ ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಇದೇ ಅಕ್ಟೋಬರ್ 10ರಂದು ಜಾರಿಬಿದ್ದು ಉಮೇಶ್ ಪೆಟ್ಟು ಮಾಡಿಕೊಂಡಿದ್ದರು. 350ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿರುವ ಉಮೇಶ್‌ ಬಹುತೇಕ ಹಾಸ್ಯ ಪಾತ್ರಗಳಲ್ಲೇ ಮಿಂಚಿದ್ದರು. ತನ್ನ ಕಾಮಿಡಿ ಟೈಮಿಂಗ್ ಮೂಲಕ ಪ್ರೇಕ್ಷಕರನ್ನ ರಂಜಿಸಿದ್ದರು.

Umesh

ಎಂ. ಎಸ್ ಉಮೇಶ್ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ತಮ್ಮ ಪರಿಶುದ್ಧ ಹಾಸ್ಯದ ಮೂಲಕ ಪ್ರೇಕ್ಷಕರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಸಂಪಾದಿಸಿದ್ದಾರೆ. ಅವರ ಅಂತ್ಯಕ್ರಿಯೆಗೆ ಕುಟುಂಬಸ್ಥರು ಸಿದ್ಧತೆ ನಡೆಸುತ್ತಿದ್ದಾರೆ.

ರಂಗಭೂಮಿ ನಂಟು ಬೆಳೆದಿದ್ದು ಹೇಗೆ?
ಉಮೇಶ್‌ ಅವರ ತಂದೆ ಎ.ಎಲ್ ಶ್ರೀಕಂಠಯ್ಯ, ತಾಯಿ ನಂಜಮ್ಮ. ತೊಟ್ಟಿಲು ಕೂಸಾಗಿದ್ದಾಗಲೇ ರಂಗಪ್ರವೇಶಿಸಿದ್ದರಿಂದ ರಂಗಭೂಮಿಯತ್ತ ಒಲವು ಅವರಿಗೆ ಹುಟ್ಟಿನಿಂದಲೇ ಬಂತು. ಬಾಲ ಪಾತ್ರಗಳಲ್ಲಿ ತನ್ಮಯತೆಯಿಂದ ಅಭಿನಯಿಸಿದವರು ಉಮೇಶ್. ದೃಶ್ಯಕ್ಕೆ ತಕ್ಕಂತೆ ಮೂಡ್ ಬರಿಸಲು ಕಲ್ಲು ಸಕ್ಕರೆ ಆಸೆ ತೋರಿಸಿ ಬಾಲಪಾತ್ರಗಳಲ್ಲಿ ಅವರಿಗೆ ಅಭಿನಯಿಸಲು ಪ್ರಚೋದನೆ ನೀಡಲಾಗುತ್ತಿತ್ತಂತೆ.

ಕೆ. ಹಿರಣ್ಣಯ್ಯ ಮಿತ್ರ ಮಂಡಲಿಯಲ್ಲಿ ಅ.ನ.ಕೃ. ರವರು ಬರೆದ ಜಗಜ್ಯೋತಿ ಬಸವೇಶ್ವರ ನಾಟಕದಲ್ಲಿ ಬಿಜ್ಜಳನ ಮಗನ ಪಾತ್ರ ಉಮೇಶ್ ಅವರಿಗೆ ಬುದ್ಧಿ ಬಂದ ನಂತರದ ಮೊದಲ ಅನುಭವದ ಪಾತ್ರ. ಇದಕ್ಕೆ ಮೊದಲೇ ಅವರು ಹಲವಾರು ನಾಟಕಗಳಲ್ಲಿ ಬಾಲನಟನ ಪಾತ್ರವಹಿಸಿದ್ದರು. ಗುಬ್ಬಿ ವೀರಣ್ಣನವರ ಕಂಪನಿಯಲ್ಲೂ ಅವರಿಗೆ ಬಾಲನಟನ ಪಾತ್ರಗಳು ದೊರಕಿದವು. ದಶಾವತಾರ ನಾಟಕದಲ್ಲಿ ಇವರ ಪ್ರಹ್ಲಾದನ ಪಾತ್ರದ ಅಭಿನಯವನ್ನು ಮೆಚ್ಚಿದ ಮಾಸ್ತಿಯವರು ಹತ್ತು ರೂಪಾಯಿ ಸಂಭಾವನೆ ನೀಡಿದ್ದರು. ಗುಬ್ಬಿ ವೀರಣ್ಣನವರು ಇವರು ಬಾಲ್ಯದಲ್ಲಿದ್ದಾಗ ರಂಗ ಶಿಕ್ಷಣ ಕೊಡುತ್ತ ಅಭಿನಯವನ್ನು ಕಲಿಸಿದ ಗುರುಗಳು. ಎಂ.ಸಿ.ಮಹಾದೇವ ಸ್ವಾಮಿಯವರ ಕನ್ನಡ ಥಿಯೇಟರ್ಸ್ ಕಂಪನಿಯಲ್ಲೂ ಉಮೇಶ್ ಬಾಲನಟನಾಗಿ ಪಾತ್ರವಹಿಸಿದ್ದರು. ಉಮೇಶರಿಗೆ ನಟನೆಯ ಜೊತೆಗೆ ಹಲವಾರು ವಾದನ ಕಲೆಗಳೂ ಕರಗತವಾಗಿವೆ. ಮಾಸ್ಟರ್‌ ಹಿರಣ್ಣಯ್ಯನವರ ಕಂಪನಿಯಲ್ಲಿ ಪಿಯಾನೋ ವಾದಕರಾಗಿ, ಕುಂಚಕಲಾವಿದರಾಗಿ, ಎನ್. ಶ್ರೀಕಂಠ ಮೂರ್ತಿಗಳ ನಾಟಕ ಕಂಪನಿಯಲ್ಲಿ ಹಾರ್ಮೋನಿಯಂ ವಾದಕರಾಗಿ ಉಮೇಶ್ ಖ್ಯಾತಿ ಗಳಿಸಿದ್ದರು. ಅವರು ಹಾಡಬಲ್ಲವರು ಕೂಡಾ.

ರಾಜ್‌ ಕಡೇ ಸಿನಿಮಾ ವರೆಗೂ ನಿಲ್ಲದ ಹಾಸ್ಯ
ಮುಂದೆ 1974ರಲ್ಲಿ ಉಮೇಶ್, ಪುಟ್ಟಣ್ಣ ಕಣಗಾಲರ ‘ಕಥಾ ಸಂಗಮ’ ಚಲನ ಚಿತ್ರದ ತಿಮ್ಮರಾಯಿ ಪಾತ್ರಕ್ಕಾಗಿ ಉಮೇಶ್ ಆಯ್ಕೆಯಾದರು. ಇದಾದ ನಂತರ ಅವರ ಚಿತ್ರರಂಗದ ನಂಟು ಬೆಳೆಯುತ್ತಾ ಬಂದಿತು. `ಗೋಲ್ ಮಾಲ್ ರಾಧಾಕೃಷ್ಣ’, `ಗುರು ಶಿಷ್ಯರು’ ಮುಂತಾದ ಚಿತ್ರಗಳಿಂದ ಇತ್ತೀಚಿನ `ವೆಂಕಟ ಇನ್ ಸಂಕಟ’ವರೆಗಿನ ಅವರ ಪಾತ್ರಗಳನ್ನು ಮೆಚ್ಚದಿರುವವರೇ ಇಲ್ಲ. ಇದುವರೆಗೂ 350ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ ಕೀರ್ತಿ ಉಮೇಶರದ್ದು.

ಉಮೇಶರು ಹಲವಾರು ಪತ್ರಿಕೆಗಳ ಅಂಕಣ ಬರಹಗಾರರೂ ಹೌದು. ಅಮ್ಮಾವರ ಆಜ್ಞೆ, ಎಲ್ಲರೂ ನಮ್ಮವರೇ ಉಮೇಶರು ರಚಿಸಿದ ನಾಟಕಗಳು. ಕಿರುತೆರೆಗೆ ಬರೆದು ನಿರ್ದೇಶಿಸಿದ್ದು `ನಮ್ಮೂರಲ್ಲೊಂದು ನಾಟಕ’, `ಸಮಸ್ಯೆಯ ಸರಮಾಲೆ’, `ರಿಜಿಸ್ಟರ್‌ ಫೋಸ್ಟ್’, `ಅಂಚು-ಸಂಚು’, `ಗೌಡತಿ ಗೌರಮ್ಮ’, `ಸಂಸಾರದಲ್ಲಿ SOMEಕ್ರಾಂತಿ’, `ಜೋಕ್ಸ್‌ಫಾಲ್ಸ್’`, `ಗಲಿಬಿಲಿ ಸಂಸಾರ’ ಮುಂತಾದ ನಾಟಕಗಳಿಂದ ಜನಮನ ಗೆದ್ದಿದ್ದರು.

ಉಮೇಶ್ ಎಂದರೆ ಹಿರಿಯ ನಟರಿಗೂ ಗೌರವ. ರಾಜಕುಮಾರ್ ಅವರ ಕಟ್ಟ ಕಡೆಯ ಚಿತ್ರಗಳವರೆಗೆ ಬಹುತೇಕ ಚಿತ್ರಗಳಲ್ಲಿ ಉಮೇಶ್ ನಟಿಸಿದ್ದರು. ಒಮ್ಮೆ ಉಮೇಶರ ಹುಟ್ಟು ಹಬ್ಬ ಎಂದು ಅರಿತ ವಿಷ್ಣುವರ್ಧನ್‌ ಅವರು ಸಿನಿಮಾ ಸೆಟ್ಟಿನಲ್ಲೇ ಅವರ ಹುಟ್ಟುಹಬ್ಬ ಆಚರಿಸುವ ಏರ್ಪಾಡು ಮಾಡಿ ಈ ನಟನಿಗೆ ಗೌರವ ಸಲ್ಲುವಂತೆ ನಡೆದುಕೊಂಡರು. ʻಅಂದಿನ ಕಪ್ಪು ಬಿಳುಪು ಜಗತ್ತಿನಿಂದ ಇಲ್ಲಿಯವರೆಗಿನ ಕನ್ನಡ ಚಿತ್ರರಂಗದ ಯಾತ್ರೆ ಅದ್ಬುತ. ಈ ಯಶಸ್ಸಿನ ಹಾದಿಯನ್ನು ನೋಡಿರುವ ನಾನೇ ಪುಣ್ಯವಂತʼ ಎಂಬುದು ಉಮೇಶರ ಮಾತು.

TAGGED:Actor Umeshbengalurukannada cinemaMS Umeshprivate hospitalsandalwoodಎಂ.ಎಸ್‌ ಉಮೇಶ್‌ಕನ್ನಡ ಚಿತ್ರರಂಗಬೆಂಗಳೂರು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Sringeri Bandh
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

Public TV
By Public TV
21 minutes ago
Powerful Drug Lord El Mencho
Latest

‘ಪವರ್‌ಫುಲ್‌ ಡ್ರಗ್ಸ್‌ ಲಾರ್ಡ್‌’ ಎಲ್‌ ಮೆಂಚೊಗೆ ಗುಂಡಿಕ್ಕಿ ಹತ್ಯೆಗೈದ ಮೆಕ್ಸಿಕನ್‌ ಸೇನೆ

Public TV
By Public TV
23 minutes ago
mukul roy
Latest

ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯದ ಚಾಣಕ್ಯ’ ಮುಕುಲ್ ರಾಯ್ ನಿಧನ

Public TV
By Public TV
51 minutes ago
mobile ban
Bengaluru City

ರಾಜ್ಯದ 16 ವರ್ಷದೊಳಗಿನ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ?

Public TV
By Public TV
1 hour ago
hassan couple suicide
Crime

ಬದುಕು ಕೊಟ್ಟ ಅಪ್ಪ-ಅಮ್ಮನ ಬಗ್ಗೆ ನಿರ್ಲಕ್ಷ್ಯ; ತುತ್ತು ಊಟಕ್ಕೂ ಪರದಾಡಿ ವೃದ್ಧ ದಂಪತಿ ಆತ್ಮಹತ್ಯೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 23-02-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?