ಹಾಸನ: ಜೀಪ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ (Accident) ಎಲ್‍ಎಲ್‍ಬಿ ವಿದ್ಯಾರ್ಥಿ (LLB Student)ಸಾವನ್ನಪ್ಪಿದ ಘಟನೆ ಬೇಲೂರು (Beluru) ತಾಲೂಕಿನ ಹಿರಿಅಸಡೆ ಗ್ರಾಮದ ಬಳಿ ನಡೆದಿದೆ.
ಗ್ರಾಮದ ಚಂದನ್ (22) ಮೃತ ಯುವಕ ಎಂದು ತಿಳಿದು ಬಂದಿದೆ. ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಭರತ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್‍ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಕಾರ್ಮಿಕರನ್ನು ಕರೆದುಕೊಂಡು ಬರುತ್ತಿದ್ದ ಜೀಪ್ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಚಂದನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ನಟಿ ಆಶಿಕಾ ರಂಗನಾಥ್ ಸಂಬಂಧಿ ಯುವತಿ ಆತ್ಮಹತ್ಯೆ – ಆರೋಪಿ ವಿರುದ್ಧ FIR, ತನಿಖೆ ಚುರುಕು
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಎದುರು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿ – ಓರ್ವ ವಿದ್ಯಾರ್ಥಿ ಸಾವು, 26ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

