ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗೆ ದಿನೇದಿನೇ ಪೈಪೋಟಿ ಜಾಸ್ತಿ ಆಗುತ್ತಿದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y Vijayendra) ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಕಾಂಗ್ರೆಸ್ನ (Congress) ಕುರ್ಚಿ ಕದನದ ವಿಚಾರಕ್ಕೆ ಪ್ರತಿಕ್ರಿಯಿಸಿದರು. ನನಗಿರುವ ಮಾಹಿತಿ ಪ್ರಕಾರ ಆಡಳಿತ ಪಕ್ಷದಲ್ಲಿ ಏಳೆಂಟು ಜನ ಹಿರಿಯ ಶಾಸಕರು, ಸಚಿವರು ಹೇಗಾದರೂ ಮುಖ್ಯಮಂತ್ರಿ ಆಗಬೇಕೆಂದು ಪೈಪೋಟಿಗೆ ಇಳಿದಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಸಿಎಂ ಪರ ಒಕ್ಕಲಿಗ ಶ್ರೀಗಳ ಹೇಳಿಕೆ ವಿಚಾರ; ಪರ ವಿರೋಧಕ್ಕೆ ವೇದಿಕೆ – ಹೆಚ್ಡಿಕೆ ಆಕ್ಷೇಪಕ್ಕೆ ಶಾಸಕ ಬಾಲಕೃಷ್ಣ ತಕರಾರು
ಈ ಪೈಪೋಟಿಯಿಂದ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಸಿದ್ದರಾಮಯ್ಯರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರ ಬಗ್ಗೆ ಅಸಡ್ಡೆ ತೋರುತ್ತಾ ಬಂದಿದೆ. ಕಿಸಾನ್ ಸಮ್ಮಾನ್ ಯೋಜನೆಯನ್ನು ಪ್ರಧಾನಿಯವರು ಜಾರಿಗೊಳಿಸಿದ್ದರು. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರಕಾರ 4 ಸಾವಿರ ರೂ. ಹೆಚ್ಚುವರಿಯಾಗಿ ನೀಡಿತ್ತು. ಅದಕ್ಕೆ ಕಲ್ಲುಹಾಕಿದ್ದಾರೆ ಎಂದು ಆಕ್ಷೇಪಿಸಿದರು. ಬಸವರಾಜ ಬೊಮ್ಮಾಯಿಯವರು ರೈತ ವಿದ್ಯಾನಿಧಿ ಜಾರಿಗೊಳಿಸಿದ್ದರು. ಅದಕ್ಕೂ ಇವರು ಕಲ್ಲು ಹಾಕಿದರು ಎಂದು ದೂರಿದರು. ಇದನ್ನೂ ಓದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ, ಸಿದ್ದರಾಮಯ್ಯ ಓಬಿಸಿ ನಾಯಕರಲ್ಲ: ಅರವಿಂದ ಬೆಲ್ಲದ್ ಚಾಟಿ

