ಬೆಂಗಳೂರು: ಚಿಕ್ಕಪೇಟೆ (Chikpet) ಕ್ಷೇತ್ರದ ಮಾಜಿ ಶಾಸಕ, ಹಿರಿಯ ಕಾಂಗ್ರೆಸ್ ನಾಯಕ (Congress Leader) ಆರ್.ವಿ. ದೇವರಾಜ್ (RV Devraj) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಡಿ.3 ರಂದು ದೇವರಾಜ್(67) ಅವರ ಹುಟ್ಟುಹಬ್ಬವಿತ್ತು. ಹುಟ್ಟುಹಬ್ಬ ಆಚರಣೆಗೂ ಮೊದಲು ಅವರು ಚಾಮುಂಡಿ ತಾಯಿಯ ದರ್ಶನಕ್ಕೆಂದು ಇಂದು ಮೈಸೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಅವರಿಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆರ್‌ವಿ ದೇವರಾಜ್ ಕೊನೆಯುಸಿರೆಳೆದಿದ್ದಾರೆ.

