– ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು: ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ (Smart Meter Tender Scam) ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ (KJ George) ಸೇರಿದಂತೆ ಕೆಲ ಪ್ರಮುಖರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ (Karnataka High Court) ರದ್ದುಪಡಿಸಿದೆ.
ಬಿಜೆಪಿ ನಾಯಕರು ಸಲ್ಲಿಸಿದ್ದ ಈ ಪ್ರಕರಣದಲ್ಲಿ, ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಹೈಕೋರ್ಟ್ ಪೀಠವು ಸಚಿವ ಕೆ.ಜೆ.ಜಾರ್ಜ್ ವಿರುದ್ಧದ ಖಾಸಗಿ ದೂರನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಸಿದ್ದರಾಮಯ್ಯ
ಜಾರ್ಜ್ ಅವರ ಜೊತೆಗೆ, ಇಂಧನ ಇಲಾಖೆಯ ಗೌರವ್ ಗುಪ್ತ, ಬೆಸ್ಕಾಂನ ಮಹಾಂತೇಶ ಬೀಳಗಿ ಹಾಗೂ ಹೆಚ್.ಜೆ. ರಮೇಶ್ ವಿರುದ್ಧದ ಪ್ರಕರಣಗಳನ್ನೂ ಹೈಕೋರ್ಟ್ ರದ್ದುಪಡಿಸಿದೆ. ಇದನ್ನೂ ಓದಿ: Ramanagara | ಹೆಡ್ ಕಾನ್ಸ್‌ಟೇಬಲ್ ಅನುಮಾನಾಸ್ಪದ ಸಾವು – ಕೆರೆಯಲ್ಲಿ ಶವ ಪತ್ತೆ
ಪ್ರಕರಣ ಏನು?
ಸ್ಮಾರ್ಟ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಇತರೆ ಕಂಪನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಗುತ್ತಿಗೆ ನೀಡಲಾಗಿದೆ. ಈ ಕಂಪನಿಗಾಗಿ ಇತರೆ ಕಂಪನಿಗಳು ಟೆಂಡರ್‌ನಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಬೇರೆ ರಾಜ್ಯಗಳಲ್ಲಿ 900 ರೂ.ಗೆ ಸಿಗುವ ಸ್ಮಾರ್ಟ್ ಮೀಟರ್ ಅನ್ನು 5 ಸಾವಿರದಿಂದ 10 ಸಾವಿರ ರೂ.ಗೆ ಗ್ರಾಹಕರಿಗೆ ನೀಡಲಾಗುತ್ತಿದೆ. ಹೀಗಾಗಿ ಇದೊಂದು ದೊಡ್ಡ ಹಗರಣ ಎಂದು ಆರೋಪಿಸಲಾಗಿತ್ತು. ಇದನ್ನೂ ಓದಿ: ಪೋಕ್ಸೋ ಕೇಸ್ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೊರೆ ಹೋದ BSY
ಸ್ಮಾರ್ಟ್ ಮೀಟರ್ ಟೆಂಡರ್ ಸುಮಾರ್ 10 ಸಾವಿರ ಕೋಟಿ ರೂ. ಮೊತ್ತದ್ದಾಗಿರುವ ಕಾರಣ ಜಾಗತಿಕ ಟೆಂಡರ್ ಕರೆಯಬೇಕಿತ್ತು. ಆದರೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಟೆಂಡರ್ ನೀಡಲಾಗಿದೆ. 10 ವರ್ಷಕ್ಕೆ 5,296 ಕೋಟಿ ರೂ.ಗೆ ನೀಡಲಾಗಿರುವ ಟೆಂಡರ್ ಅನ್ನು ಬೇಕೆಂದೇ 997 ಕೋಟಿ ರೂ. ಟೆಂಡರ್ ಎಂಬಂತೆ ಬಿಂಬಿಸಲಾಗಿದೆ. ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಈ ಟೆಂಡರ್ ಅನ್ವಯವಾದರೂ ಇತರೆ ಎಸ್ಕಾಂಗಳಿಗೂ ಇದೇ ಸ್ಮಾರ್ಟ್ ಮೀಟರ್ ಖರೀದಿಸಿರುವಂತೆ ಸೂಚಿಸಲಾಗಿದೆ. ಇದು ಸಂಪೂರ್ಣ ಕಾನೂನು ಬಾಹಿರ. ಕೇಂದ್ರದ ಆರ್‌ಡಿಎಸ್‌ಎಸ್ ಯೋಜನೆಯಡಿ 900 ರೂ.ಗೆ ಸಿಗುವ ಮೀಟರ್ ಅನ್ನು 5 ಸಾವಿರದಿಂದ 8,800 ರೂ.ಗೆ ಗ್ರಾಹಕರು ಖರೀದಿಸಬೇಕಾಗಿದೆ. ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಅಧಿಕಾರಿಗಳೇ ಹೊಣೆ ಎಂದು ಬಿಜೆಪಿ ಆರೋಪ ಮಾಡಿತ್ತು. ಇದನ್ನೂ ಓದಿ: ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆ ಕೇಸ್ – ಮಾಲೀಕ, ಮ್ಯಾನೇಜರ್ ವಿರುದ್ಧ FIR

