Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪವನ್ ವೆಂಕಟೇಶ್ ನಿರ್ದೇಶನದಲ್ಲಿ ಮೂಡಿಬಂತು ಫಸ್ಟ್ ಸ್ಯಾಲರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪವನ್ ವೆಂಕಟೇಶ್ ನಿರ್ದೇಶನದಲ್ಲಿ ಮೂಡಿಬಂತು ಫಸ್ಟ್ ಸ್ಯಾಲರಿ

Cinema

ಪವನ್ ವೆಂಕಟೇಶ್ ನಿರ್ದೇಶನದಲ್ಲಿ ಮೂಡಿಬಂತು ಫಸ್ಟ್ ಸ್ಯಾಲರಿ

Public TV
Last updated: December 2, 2025 3:28 pm
Public TV
Share
2 Min Read
First Salary Movie
SHARE

ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ ಸುಧೀಂದ್ರ ವೆಂಕಟೇಶ್ ನಿರ್ಮಾಣ ಮಾಡಿರುವ, ಅವರ ಪುತ್ರ ಪವನ್ ವೆಂಕಟೇಶ್ ನಿರ್ದೇಶನ ಮಾಡಿರುವ ಫಸ್ಟ್ ಸ್ಯಾಲರಿ ಫಸ್ಟ್ ಶೋ ಇತ್ತೀಚೆಗೆ ನಡೆಯಿತು. ಮೊದಲ ಪ್ರದರ್ಶನದಲ್ಲಿ ಹಿರಿಯ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟಿ ಶೃತಿ ಹಾಗೂ ಗುರುಗಳಾದ ಕಮಲಾಕರ್ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ನಂತರ ಗಣ್ಯರು ಹಾಗೂ ತಂಡದ ಸದಸ್ಯರು ಮಾತನಾಡಿದರು.

ಡಿ.ವಿ.ಸುಧೀಂದ್ರ ಅವರು ನನಗೆ ಬಹಳ ಆತ್ಮೀಯರು. ಈಗ ಪಿ.ಆರ್.ಓ ವೆಂಕಟೇಶ್ ಪುತ್ರ ಪವನ್ ವೆಂಕಟೇಶ್, ‘ಫಸ್ಟ್ ಸ್ಯಾಲರಿ’ ಕಿರುಚಿತ್ರವನ್ನು ನಿರ್ದೇಶಿಸುವ ಮೂಲಕ ಚಲನಚಿತ್ರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಕಿರುಚಿತ್ರ ಬಹಳ ಚೆನ್ನಾಗಿ ಮೂಡಿಬಂದಿದೆ. ಕಲಾವಿದರು ಕೂಡ ಅದ್ಭುತವಾಗಿ ಅಭಿನಯಿಸಿದ್ದಾರೆ. ಮುಂದಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಈ ಹುಡುಗನಿಗೆ ಉತ್ತಮ ಅವಕಾಶಗಳು ಸಿಗಲಿ ಎಂದು ರಾಕ್ ಲೈನ್ ವೆಂಕಟೇಶ್ ಹಾರೈಸಿದರು. ನಾನು ಡಿ.ವಿ.ಸುಧೀಂದ್ರ ಅವರ ನಿರ್ಮಾಣದ ʼನಗುನಗುತಾ ನಲಿʼ ಚಿತ್ರದಲ್ಲಿ ಅಭಿನಯಿಸಿದ್ದೆ. ಇಂದು ಅವರ ಕುಟುಂಬದ ಪವನ್ ವೆಂಕಟೇಶ್ ಕಿರುಚಿತ್ರ ನಿರ್ಮಾಣ ಮಾಡಿದ್ದಾನೆ. ತಾಯಿ – ಮಗನ ಸೆಂಟಿಮೆಂಟ್ ಸನ್ನಿವೇಶಗಳು ಮನಸ್ಸಿಗೆ ಬಹಳ ಹತ್ತಿರವಾಯಿತು. ಕಣ್ಣಂಚಲಿ ನೀರು ತರಿಸಿತ್ತು ಎಂದು ತಿಳಿಸಿದ ನಟಿ ಶ್ರುತಿ, ನನ್ನ ʼಫಸ್ಟ್ ಸ್ಯಾಲರಿʼ ಐನೂರು ರೂಪಾಯಿಗಳು ಎಂದು ನೆನಪಿಸಿಕೊಂಡರು.

First Salary Movie 1

ನಮ್ಮ ಚಿಕ್ಕಪ್ಪ ಡಿ.ವಿ.ಸುಧೀಂದ್ರ ಅವರು ಪಾಲುದಾರಿಕೆಯಲ್ಲಿ ಆರು ಚಿತ್ರಗಳನ್ನು ನಿರ್ಮಾಣ ಮಾಡಿದ್ದರು. ಈಗ ನಾನು ಮೊದಲ ಬಾರಿಗೆ ಈ ಕಿರುಚಿತ್ರ ನಿರ್ಮಾಣ ಮಾಡಿದ್ದೇನೆ. ಮಗ ಪವನ್ ಹಾಗೂ ಸ್ನೇಹಿತರು ಒಂದೊಳ್ಳೆ ಕಿರುಚಿತ್ರ ಮಾಡುತ್ತಿದ್ದೇವೆ ಎಂದು ಹೇಳಿದಾಗ ನಾನು ಅವರ ಜೊತೆಗೆ ನಿಂತೆ. ಕಿರುಚಿತ್ರ ಅವರು ಹೇಳಿದ ಹಾಗೆ ಚೆನ್ನಾಗಿ ಮಾಡಿದ್ದಾರೆ. ಸಮಾರಂಭಕ್ಕೆ ಬಂದು ಪ್ರೋತ್ಸಾಹ ನೀಡಿ ಹಾರೈಸಿದ ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್ ಅವರಿಗೆ, ನಟಿ ಶ್ರುತಿ ಅವರಿಗೆ, ಗುರುಗಳಿಗೆ ಹಾಗೂ ಇಡೀ ಮಾಧ್ಯಮದ ಬಳಗಕ್ಕೆ ಧನ್ಯವಾದ ಎಂದರು ಸುಧೀಂದ್ರ ವೆಂಕಟೇಶ್ .

ʼಫಸ್ಟ್ ಸ್ಯಾಲರಿʼ ನನ್ನ ಗೆಳೆಯ ವಿಜಯ್ ಶಿವಕುಮಾರ್ ಅವರು ಬರೆದ ಕಥೆ. ಈ ಚಿತ್ರದಲ್ಲಿ ಅವರೆ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಹರಿಣಿ ಶ್ರೀಕಾಂತ್, ಯತಿರಾಜ್, ತ್ರಿಶೂಲ್, ಸ್ನೇಹಶ್ರೀ, ರಕ್ಷಿತ್ ಇದರಲ್ಲಿ ನಟಿಸಿದ್ದಾರೆ. ವಿಜಯ್ ಹರಿತ್ಸ ಸಂಗೀತ ನೀಡಿದ್ದಾರೆ. ರಿಚರ್ಡ್ ಡ್ಯಾನಿಯಲ್ ಛಾಯಾಗ್ರಹಣ ಹಾಗೂ ಸಂಕಲನ ಮಾಡಿದ್ದಾರೆ. ಮನೋಜ್ ಕುಮಾರ್ ಮತ್ತು ರವಿ ಸಾಸನೂರು ಸಹ ನಿರ್ದೇಶಕರಾಗಿ ಸಾಥ್ ನೀಡಿದ್ದಾರೆ. ನಾನು ನಿರ್ದೇಶಕನಾಗುವ ಕನಸನ್ನು ನನ್ನ ತಂದೆ ಸುಧೀಂದ್ರ ವೆಂಕಟೇಶ್ ಅವರು ಈ ಕಿರುಚಿತ್ರವನ್ನು ನಿರ್ಮಾಣ ಮಾಡುವ ಮೂಲಕ ನನಸು ಮಾಡಿದ್ದಾರೆ. ಹಿರಿಯರಾದ ರಾಕ್ ಲೈನ್ ವೆಂಕಟೇಶ್, ನಟಿ ಶ್ರುತಿ ಹಾಗೂ ಗುರುಗಳಾದ ಕಮಲಾಕರ್ ಅವರು ಬಂದು ಹಾರೈಸಿದ್ದಾರೆ. ಆಗಮಿಸಿದ ಗಣ್ಯರಿಗೆ ಹಾಗೂ ಮಾಧ್ಯಮದವರಿಗೆ ಅನಂತ ಧನ್ಯವಾದಗಳು ಎಂದು ನಿರ್ದೇಶಕ ಪವನ್ ವೆಂಕಟೇಶ್ ತಿಳಿಸಿದರು. ನಾನು ಕಣ್ಣಾರೆ ಕಂಡ ಅನೇಕ ಸನ್ನಿವೇಶಗಳೆ ಈ ಕಥೆಗೆ ಸ್ಪೂರ್ತಿ ಎಂದು ಮಾತನಾಡಿದ ಕಥೆಗಾರ ಹಾಗೂ ನಟ ವಿಜಯ್ ಶಿವಕುಮಾರ್, ಈ ಕಥೆ ಕೇಳಿದ ಪವನ್ ವೆಂಕಟೇಶ್ ಕಥೆ ಚೆನ್ನಾಗಿದೆ ನಾನೇ ನಿರ್ದೇಶನ ಮಾಡುತ್ತೇನೆ ಎಂದರು. ಸುಧೀಂದ್ರ ವೆಂಕಟೇಶ್ ಅವರು ನಿರ್ಮಾಣ ಮಾಡಿದರು. ನಮ್ಮ ಈ ಮೊದಲ ಪ್ರಯತ್ನಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು. ಕಿರುಚಿತ್ರದಲ್ಲಿ ನಟಿಸಿರುವ ಹರಿಣಿ ಶ್ರೀಕಾಂತ್, ಯತಿರಾಜ್, ತ್ರಿಶೂಲ್ ಸಹ ನಿರ್ದೇಶಕರಾದ ಮನೋಜ್ ಕುಮಾರ್, ರವಿ ಸಾಸನೂರ್ ಹಾಗೂ ಸಂಗೀತ ನಿರ್ದೇಶಕ ವಿಜಯ್ ಹರಿತ್ಸ ಮುಂತಾದವರು ʼಫಸ್ಟ್ ಸ್ಯಾಲರಿʼ ಬಗ್ಗೆ ಮಾತನಾಡಿದರು. ನಿರ್ಮಾಪಕ ಸುರೇಶ್ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು

TAGGED:First Salarykannada cinemaPavan Venkateshsandalwood
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
16 minutes ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
46 minutes ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
51 minutes ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
1 hour ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
2 hours ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?