– ಜ.1 ರಿಂದ ಹೊಸ ವೇಳಾಪಟ್ಟಿ ಜಾರಿ; ಮಾಜಿ ಸಂಸದ ಉಮೇಶ್ ಜಾಧವ್ ಅಭಿನಂದನೆ
ಕಲಬುರಗಿ: ಬಹುಕಾಲದ ಬೇಡಿಕೆಯಾಗಿದ್ದ ಕಲಬುರಗಿ ಮತ್ತು ಬೆಂಗಳೂರು (Bengaluru-Kalaburagi) ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ರೈಲು (Vande Bharat Express Train) ಸಂಚಾರದ ಸಮಯವನ್ನು ಜನವರಿ 1 ರಿಂದ ಬದಲಾಯಿಸಲು ಕೇಂದ್ರ ರೈಲ್ವೆ ಇಲಾಖೆ ನಿರ್ಧರಿಸಿರುವುದು ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆಯಾಗಿದೆ ಎಂದು ಮಾಜಿ ಸಂಸದ ಡಾ. ಉಮೇಶ್ ಜಾಧವ್ (Umesh Jadhav) ಹರ್ಷ ವ್ಯಕ್ತಪಡಿಸಿದ್ದಾರೆ.
ಬಹುದಿನಗಳಿಂದ ಕಲಬುರಗಿಯಿಂದ ಬೆಂಗಳೂರಿಗೆ ಹೊರಡುವ ವಂದೇ ಭಾರತ್ ರೈಲಿನ ಸಮಯ ಬದಲಾವಣೆ ಮಾಡುವಂತೆ ಕೋರಿ ಪ್ರಯಾಣಿಕರು ಒತ್ತಾಯಿಸುತ್ತಿದ್ದು, ರೈಲ್ವೆ ಇಲಾಖೆಯವರೊಂದಿಗೆ ಸತತವಾಗಿ ಚರ್ಚಿಸಿದ ಪರಿಣಾಮವಾಗಿ ಮುಂದಿನ ತಿಂಗಳು ಜನವರಿ 1 ರಿಂದ ಬೆಳಗ್ಗೆ 5:15 ರ ಬದಲು ಬೆಳಗ್ಗೆ 06:10 ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 02:10 ಕ್ಕೆ (ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೈಯಪ್ಪನಹಳ್ಳಿ) ತಲುಪಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 8 ನಿಮಿಷಕ್ಕಿಂತ ಹೆಚ್ಚು ಹೊತ್ತು ವಾಹನ ನಿಲ್ಲಿಸಿದ್ರೆ ದಂಡ – ಏರ್‌ಪೋರ್ಟ್‌ನಲ್ಲಿ ಪಿಕಪ್ ಮಾಡುವ ಕ್ಯಾಬ್, ಖಾಸಗಿ ವಾಹನಗಳಿಗೆ ರೂಲ್ಸ್
ಬೆಂಗಳೂರಿನಿಂದ ಕಲಬುರಗಿಗೆ ಹೊರಡುವ ಸಮಯದಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ, ಇದೀಗ ಈ ರೈಲು ಕಲಬುರಗಿಗೆ ಮೊದಲಿನಿಂದ 45 ನಿಮಿಷ ಬೇಗ ಅಂದರೆ ರಾತ್ರಿ 11:30 ಗಂಟೆಗೆ ಬದಲಾಗಿ ರಾತ್ರಿ 10:45 ಕ್ಕೆ ತಲುಪಲಿದೆ. ಒಟ್ಟಾರೆ ಪ್ರಯಾಣದ ಸಮಯ ಇದೀಗ 8 ಗಂಟೆಯಲ್ಲಿ ಪೂರ್ಣಗೊಳ್ಳಲಿದೆ.
ಇನ್ಮುಂದೆ ಪುಟ್ಟಪರ್ತಿ ಸತ್ಯಸಾಯಿ ದರ್ಶನ ಮಾಡುವ ಭಕ್ತರಿಗೆ ಅನುಕೂಲಕರವಾಗುವಂತೆ ಸತ್ಯಸಾಯಿ ಪ್ರಶಾಂತಿ ನಿಲಯಂನಲ್ಲಿ ವಂದೇ ಭಾರತ್‌ಗೆ ನಿಲುಗಡೆ ಸೌಲಭ್ಯವನ್ನು ನೀಡಿರುವುದು ಇನ್ನಷ್ಟು ಖುಷಿಯ ಸಂಗತಿ ಎಂದು ಜಾಧವ್ ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡ್ ಸ್ಟ್ರಾಂಗ್ ಇದೆ, ಎಲ್ಲಾ ಗೊಂದಲ ಪರಿಹಾರ ಮಾಡುತ್ತೆ: ಬಾಲಕೃಷ್ಣ
ಪ್ರಧಾನ ಮಂತ್ರಿ ನರೇಂದ್ರ ಮೋದಿ, ರೈಲ್ವೆ ಖಾತೆಯ ಸಚಿವ ಅಶ್ವಿನಿ ವೈಷ್ಣವ್ ಮತ್ತು ರಾಜ್ಯ ಸಚಿವ ವಿ.ಸೋಮಣ್ಣ ಅವರ ಪ್ರಯತ್ನದಿಂದಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ವಂದೇ ಭಾರತ್ ರೈಲು ಪ್ರಯಾಣಿಕರ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ. ಈ ಹಿಂದೆ ಬೆಳಗ್ಗೆ 5:10 ಕ್ಕೆ ಕಲಬುರಗಿಯಿಂದ ವಂದೇ ಭಾರತ್ ಸಂಚಾರ ಪ್ರಾರಂಭಿಸುತ್ತಿರುವುದರಿಂದ ಮಕ್ಕಳು, ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗೆ ಸಂಚಾರಕ್ಕೆ ಅನಾನುಕೂಲವಾಗಿತ್ತು. ಬೀದರ್ ಮತ್ತಿತರ ಕಡೆಗಳಿಂದ ಆಗಮಿಸುತ್ತಿರುವ ಪ್ರಯಾಣಿಕರಿಗೂ ಕಷ್ಟ ಸಾಧ್ಯವಾಗಿದ್ದು, ಇದೀಗ ನೂತನ ವೇಳಾಪಟ್ಟಿ ಅತ್ಯಂತ ಅನುಕೂಲಕರವಾಗಲಿದೆ. ಸಾರ್ವಜನಿಕರು ವಂದೇ ಭಾರತ್ ರೈಲು ಸೇವೆಯನ್ನು ಪೂರ್ಣವಾಗಿ ಬಳಸಿಕೊಳ್ಳುವಂತೆ ತಿಳಿಸಿದ್ದಾರೆ.


