Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು; 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ: ಎಂ.ಬಿ.ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು; 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ: ಎಂ.ಬಿ.ಪಾಟೀಲ್

Bengaluru City

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರ ರೈಲು ಸಂಚಾರಕ್ಕೆ ಅಸ್ತು; 3-4 ತಿಂಗಳಲ್ಲಿ ಹೊಸ ರೈಲು ಸೇವೆಗೆ ಪ್ರಯತ್ನ: ಎಂ.ಬಿ.ಪಾಟೀಲ್

Public TV
Last updated: December 3, 2025 7:28 pm
Public TV
Share
5 Min Read
MB Patil
SHARE

– ನೂತನ ರೈಲು ಕೋರಿ ಅಶ್ವಿನಿ ವೈಷ್ಣವ್, ಸೋಮಣ್ಣಗೆ ಶೀಘ್ರದಲ್ಲೇ ಪತ್ರ

ಬೆಂಗಳೂರು: ರಾಜಧಾನಿ ಮತ್ತು ದೂರದ ವಿಜಯಪುರ ನಡುವೆ ಹುಬ್ಬಳ್ಳಿ ಹಾಗೂ ಗದಗ ಬೈಪಾಸ್ ಮಾರ್ಗಗಳಲ್ಲಿ ರೈಲು ಓಡಿಸಲು ಯಾವುದೇ ತೊಂದರೆ ಇಲ್ಲ. ಆದರೆ ಈಗ ಚಾಲ್ತಿಯಲ್ಲಿರುವ ರೈಲುಗಳ ಮಾರ್ಗವನ್ನು ಬದಲಿಸಲು ಸಾಧ್ಯವಿಲ್ಲ. ಇದಕ್ಕಾಗಿ ರೈಲ್ವೇ ಮಂಡಳಿಯಿಂದ ಹೊಸ ರೈಲುಗಳನ್ನು ಮಂಜೂರು ಮಾಡಿಸಿಕೊಳ್ಳಬೇಕು ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧವಾಗಿ ಅವರ ಜೊತೆಗೆ ನಮ್ಮ ಕಡೆಯಿಂದಲೂ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ವಿ.ಸೋಮಣ್ಣ ಅವರಿಗೆ ತಕ್ಷಣವೇ ಪತ್ರ ಬರೆಯಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಖನಿಜ ಭವನದಲ್ಲಿ ರಾಜ್ಯದ ವಿವಿಧ ವೆಚ್ಚ ಹಂಚಿಕೆ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ನೈರುತ್ಯ ರೈಲ್ವೆ ಉನ್ನತಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, `ವಿಜಯಪುರ-ಬೆಂಗಳೂರು ನಡುವೆ ಈಗ ರೈಲು ಪ್ರಯಾಣಕ್ಕೆ 15 ಗಂಟೆ ಬೇಕಾಗುತ್ತಿದೆ. ಇದನ್ನು 10 ಗಂಟೆಗಳಿಗೆ ಇಳಿಸಲು ಪ್ರಯತ್ನಗಳು ನಡೆಯುತ್ತಿದ್ದು, ಈಗಾಗಲೇ ಹಲವು ಸಭೆಗಳನ್ನು ನಡೆಸಲಾಗಿದೆ. ಈಗ ರೈಲ್ವೆ ಅಧಿಕಾರಿಗಳು ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗಗಳ ಮೂಲಕ ರೈಲು ಓಡಿಸಲು ಅಭ್ಯಂತರವಿಲ್ಲ ಎಂದಿದ್ದಾರೆ. ಇದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಬೆಂಗಳೂರಿನಿಂದ ಹುಬ್ಬಳ್ಳಿಯವರೆಗೆ ನಿಯಮಿತ ನಿಲುಗಡೆಗಳನ್ನು ಮಾತ್ರ ಕೊಟ್ಟು, ಅಲ್ಲಿಂದ ಮುಂದಕ್ಕೆ ವಿಜಯಪುರದವರೆಗೆ ಸ್ಥಳೀಯ ಜನರಿಗೆ ಅನುಕೂಲವಾಗುವಂತೆ ರೈಲು ಸೇವೆ ಆರಂಭಿಸಿದರೆ ಹೆಚ್ಚು ಪರಿಣಾಮಕಾರಿ ಆಗಲಿದೆ ಎಂಬುದನ್ನು ರೈಲ್ವೆ ಅಧಿಕಾರಿಗಳಿಗೆ ಸಚಿವರು ಮನದಟ್ಟು ಮಾಡಿದರು. ಇದನ್ನೂ ಓದಿ: ತನಗಿಂತ ಯಾರೂ ಸುಂದರವಾಗಿ ಕಾಣಬಾರದು ಅಂತ 6 ವರ್ಷದ ಹುಡುಗಿ ಕೊಂದ ಮಹಿಳೆ

ಪ್ರಸ್ತುತ ಬೆಂಗಳೂರು-ವಿಜಯಪುರ ರೈಲು ಹುಬ್ಬಳ್ಳಿ ಮತ್ತು ಗದಗ ರೈಲು ನಿಲ್ದಾಣಗಳಲ್ಲಿ ಎಂಜಿನ್ ಬದಲಿಸಿಕೊಂಡು ಚಲಿಸಬೇಕಾಗಿದೆ. ಇದರಿಂದ ಪ್ರಯಾಣ ಅವಧಿ ಜಾಸ್ತಿ ಆಗುತ್ತಿದೆ. ಹೀಗಾಗಿ ಈ ಎರಡೂ ಬೈಪಾಸ್‌ಗಳ ಮೂಲಕ ರೈಲು ಓಡಿಸುವಂತಾದರೆ ಪ್ರಯಾಣ ಅವಧಿ ಕಡಿಮೆ ಆಗಲಿದೆ ಎಂದು ವಿವರಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅಲ್ಲ, ವೇಣುಗೋಪಾಲ್: ಛಲವಾದಿ ನಾರಾಯಣಸ್ವಾಮಿ

MB Patil 1

ಸದ್ಯಕ್ಕೆ ಈ ಮಾರ್ಗದ ವಂಡಾಲ ಮತ್ತು ಆಲಮಟ್ಟಿ ನಡುವೆ ಜೋಡಿ ಹಳಿ ಕಾಮಗಾರಿ ಮಾತ್ರ ಬಾಕಿ ಇದೆ. ಇದು 2026ರ ಫೆಬ್ರವರಿಯಲ್ಲಿ ಮುಗಿಯಲಿದೆ. ಈ ಭಾಗದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಅರ್ಧ ಕಿ.ಮೀ. ಉದ್ದದ ಬೃಹತ್ ಉಕ್ಕು ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಮಾರ್ಚ್ ವೇಳೆಗೆ ವಿದ್ಯುದ್ದೀಕರಣದ ಜೋಡಿ ಮಾರ್ಗದ ನಿರ್ಮಾಣ ಕಾಮಗಾರಿ ಮುಗಿಯಲಿದೆ. ಆ ಬಳಿಕ ಹಾಲಿ ರೈಲುಗಳ ವೇಗ ಕೂಡ ಹೆಚ್ಚಾಗಲಿದೆ. ಜೊತೆಗೆ ಹೊಸ ರೈಲುಗಳಿಗೂ ಬೇಡಿಕೆ ಸಲ್ಲಿಸಲಾಗುವುದು. ಬೆಂಗಳೂರು-ವಿಜಯಪುರ ನಡುವೆ ವಂದೇ ಭಾರತ್ ರೈಲು ಸೇವೆ ಆರಂಭಿಸಬೇಕೆಂದೂ ನಾವು ಆಗ್ರಹಿಸುತ್ತಿದ್ದೇವೆ. ಆದರೆ ಅದು ಕಾರ್ಯಸಾಧ್ಯವಲ್ಲ, ಬದಲಿಗೆ ವಂದೇ ಭಾರತ್ ಸ್ಲೀಪರ್ ಕೋಚ್ ಸೇವೆ ಆರಂಭಿಸಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ. ಆ ಪ್ರಕಾರ ಇಬ್ಬರೂ ರೈಲ್ವೆ ಸಚಿವರಿಗೆ ಪತ್ರ ಬರೆಯಲಾಗುವುದು. ಸೋಮಣ್ಣ ಅವರ ಜೊತೆಗೂ ಸಭೆ ಮಾಡಿ ಮನವಿ ಕೂಡ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯೋದು ಸೂರ್ಯ-ಚಂದ್ರ ಇರುವಷ್ಟೇ ಸತ್ಯ: ರೇಣುಕಾಚಾರ್ಯ

ತುಮಕೂರು-ಊರುಕೆರೆ ರೈಲು ಆರಂಭ:
ತುಮಕೂರು-ರಾಯದುರ್ಗ ನಡುವೆ ರೈಲು ಹಳಿ ಜೋಡಣೆ ನಡೆಯುತ್ತಿದೆ. ಇಲ್ಲಿ ತುಮಕೂರು-ಊರುಕೆರೆ ಮತ್ತು ದೊಡ್ಡಹಳ್ಳಿ-ಪಾವಗಡ ನಡುವೆ ಈ ವರ್ಷ 27 ಕಿ.ಮೀ. ಕಾಮಗಾರಿ ಮುಗಿಯಲಿದೆ. ತುಮಕೂರು-ಊರುಕೆರೆ ನಡುವೆ (10 ಕಿ.ಮೀ) ನೂರಾರು ಕೈಗಾರಿಕೆಗಳಿದ್ದು, ದಿನವೂ ಸಾವಿರಾರು ಜನ ಇಲ್ಲಿ ಓಡಾಡುತ್ತಾರೆ. ಇನ್ನೊಂದು ಬದಿಯಲ್ಲಿ ದೊಡ್ಡಹಳ್ಳಿ-ಪಾವಗಡ ನಡುವೆಯೂ (20 ಕಿ.ಮೀ) 2026ರ ಜನವರಿಯಿಂದ ರೈಲು ಓಡಿಸಲಾಗುವುದು. ಮಡಕಶಿರಾ-ಪಾವಗಡ ನಡುವಿನ ಕಾಮಗಾರಿ 2026ರ ಡಿಸೆಂಬರ್ ಹೊತ್ತಿಗೆ, ಮಧುಗಿರಿ-ಪಾವಗಡ ಮಧ್ಯದ ಹಳಿ ಜೋಡಣೆ 2028ರ ಫೆಬ್ರವರಿ ವೇಳೆಗೆ ಮುಗಿಯಲಿದೆ ಎಂದು ನುಡಿದರು. ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡ್ ಸತ್ತು ಹೋಗಿದೆ, ಸಿಎಂ-ಡಿಸಿಎಂ ಕುರ್ಚಿ ಕಿತ್ತಾಟ ಬಿಟ್ಟು ರೈತರ ಸಮಸ್ಯೆ ಆಲಿಸಲಿ: ರೇಣುಕಾಚಾರ್ಯ

ತುಮಕೂರು-ಚಿತ್ರದುರ್ಗ-ದಾವಣಗೆರೆ ಮಾರ್ಗದಲ್ಲಿ ಊರುಕೆರೆ-ತಿಮ್ಮರಾಯನಹಳ್ಳಿ ನಡುವೆ 13 ಕಿ.ಮೀ. ಹಳಿ ಜೋಡಣೆ ಈ ತಿಂಗಳೇ ಮುಗಿಯಲಿದೆ. ಭರಮಸಾಗರ-ಹೆಬ್ಬಾಳು, ಹೆಬ್ಬಾಳು-ತೋಳಹುಣಸೆ ನಡುವೆ 2026ರ ಫೆಬ್ರವರಿ ಕೊನೆಯ ವೇಳೆಗೆ ಹಳಿ ಜೋಡಣೆ ಆಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಶ್ರೀರಂಗಪಟ್ಟಣ | ಜಾಮಿಯಾ ಮಸೀದಿ ಹಿಂದೂಗಳದ್ದು, ಹನುಮ ಮಂದಿರ ಮತ್ತೆ ಕಟ್ಟುವೆವು – ಮಾಲಾಧಾರಿಗಳ ಬಿಗಿಪಟ್ಟು

ಬೆಂಗಳೂರು-ತುಮಕೂರು ಮತ್ತು ಬೆಂಗಳೂರು-ಮೈಸೂರು ನಡುವೆ ಈಗ ಜೋಡಿ ಹಳಿ ಇದೆ. ಇದನ್ನು ನಾಲ್ಕು ಹಳಿಗಳ ಮಾರ್ಗವಾಗಿ ಮಾಡುವ ಬಗ್ಗೆ ಕಾರ್ಯಸಾಧ್ಯತಾ ವರದಿ ನೀಡುವಂತೆ ಹೇಳಲಾಗಿತ್ತು. ಈ ಸಂಬಂಧದ ವರದಿಗಳು ಕ್ರಮವಾಗಿ ಈ ತಿಂಗಳ 25ರಂದು ಮತ್ತು 2026ರ ಮೇ ತಿಂಗಳಲ್ಲಿ ಕೈ ಸೇರಲಿವೆ. ಪ್ರಾಥಮಿಕ ಮೂಲಗಳ ಪ್ರಕಾರ, ಈ ಚತುಷ್ಪಥ ಮಾರ್ಗ ಲಾಭದಾಯಕವಾಗಲಿದ್ದು, ಇದರಿಂದ ಸ್ಥಳೀಯ ಜನರಿಗೆ ಹೆಚ್ಚಿನ ಅನುಕೂಲ ಆಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಶಿವನಸಮುದ್ರ ನಾಲೆಯಿಂದ ಆನೆ ರಕ್ಷಿಸಿದ ಸಿಬ್ಬಂದಿ ಸನ್ಮಾನಿಸಿದ ಸಚಿವ ಈಶ್ವರ ಖಂಡ್ರೆ

ಬೆಂಗಳೂರು-ಹಾಸನ-ಮಂಗಳೂರು ದ್ವಿಪಥ:
ಸಭೆಯಲ್ಲಿ ಬೆಂಗಳೂರು-ಹಾಸನ-ಮಂಗಳೂರು ಮಾರ್ಗವನ್ನು ಜೋಡಿ ಹಳಿಗೇರಿಸುವ ಬಗ್ಗೆಯೂ ಚರ್ಚಿಸಲಾಗಿದೆ. ಹಾಸನ-ಮಂಗಳೂರು ನಡುವೆ ಸ್ವಲ್ಪ ಸವಾಲಿದೆ. ಇಲ್ಲಿ ರಸ್ತೆ ಮತ್ತು ರೈಲು ಎರಡನ್ನೂ ಸಮಾನಾಂತರವಾಗಿ ಅಭಿವೃದ್ಧಿಪಡಿಸುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸುತ್ತಿದ್ದಾರೆ. ಚಿತ್ರದುರ್ಗ-ಆಲಮಟ್ಟಿ ಹಾಗೂ ಯಾದಗಿರಿ-ಆಲಮಟ್ಟಿ ಹೊಸ ಮಾರ್ಗ, ಕೂಡ್ಗಿ ಮಾರ್ಗಗಳ ಯೋಜನಾ ಪ್ರಗತಿ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಎಂ.ಬಿ ಪಾಟೀಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ‘ಸಂಚಾರ್ ಸಾಥಿ’ ಆ್ಯಪ್ ಪ್ರಿ-ಇನ್ಸ್ಟಾಲ್ ಕಡ್ಡಾಯವಲ್ಲ: ಕೇಂದ್ರ ಸ್ಪಷ್ಟನೆ

ಕರಾವಳಿಗೆ ಸಂಪರ್ಕ ಕಲ್ಪಿಸುವ ಹುಬ್ಬಳ್ಳಿ- ಅಂಕೋಲಾ ಯೋಜನೆಯಿಂದ ವನ್ಯಜೀವಿಗಳ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎನ್ನುವುದರ ಬಗ್ಗೆ ಡೆಹ್ರಾಡೂನ್‌ನ ವನ್ಯಜೀವಿ ಸಂಸ್ಥೆ ಅಧ್ಯಯನ ನಡೆಸುತ್ತಿದ್ದು, 2026ರ ಜೂನ್‌ಗೆ ವರದಿ ಬರಲಿದೆ. ಅದರ ಬಳಿಕ ಯೋಜನೆ ಆರಂಭವಾಗುವ ವಿಶ್ವಾಸ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಇಡ್ಲಿ, ನಾಟಿಕೋಳಿ ತಿಂದಮೇಲೆ ಎಲ್ಲವೂ ಮುಗಿದಿದೆ, ಇನ್ನು ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ: ಇಕ್ಬಾಲ್ ಹುಸೇನ್

ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಎನ್.ಮಂಜುಳಾ, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ, ನೈರುತ್ಯ ರೈಲ್ವೆ ಮುಖ್ಯ ಆಡಳಿತಾಧಿಕಾರಿ ಅಜಯ್ ಸಿಂಗ್ ಉಪಸ್ಥಿತರಿದ್ದರು. ನೈರುತ್ಯ ರೈಲ್ವೆ ಉಪ ಮುಖ್ಯ ಎಂಜಿನಿಯರ್ ಶಾಸ್ತ್ರಿ ಅವರು ವೀಡಿಯೋ ಸಂವಾದದ ಮೂಲಕ ಭಾಗವಹಿಸಿದ್ದರು. ಇದನ್ನೂ ಓದಿ: ಬ್ರೇಕ್‌ಫಾಸ್ಟ್ ಮೀಟಿಂಗ್‌ಗೆ ಇಡ್ಲಿ, ನಾಟಿ ಕೋಳಿ ಸಾರು – ಡಿನ್ನರ್‌ಗೆ ಬೆಳ್ಳುಳ್ಳಿ ಕಬಾಬ್ ಇರುತ್ತೇನೋ: ನಿಖಿಲ್ ಲೇವಡಿ

TAGGED:bengalurugadaghubballiMB PatilRailway Departmenttrainvijayapuraಎಂಬಿ ಪಾಟೀಲ್ಗದಗಬೆಂಗಳೂರುರೈಲುರೈಲ್ವೆ ಇಲಾಖೆವಿಜಯಪುರಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood
Sanvi Sudeep
ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ – ಫೋಟೋ ವೈರಲ್
Cinema Latest Sandalwood Top Stories
Ratha Saptami Jeevan Moulya
ರಥಸಪ್ತಮಿ: ವಿಭಿನ್ನ ಧಾರಾವಾಹಿಗೆ ಸಾಕ್ಷಿಯಾದ ಉದಯ ಟಿವಿ
Cinema Latest TV Shows

You Might Also Like

IndiGo
Latest

ದೇಶಾದ್ಯಂತ 200 ವಿಮಾನಗಳ ಹಾರಾಟ ರದ್ದು – ಕ್ಷಮೆ ಕೋರಿದ ಇಂಡಿಗೋ

Public TV
By Public TV
2 minutes ago
Aiden Markram
Cricket

ಕಳಪೆ ಬೌಲಿಂಗ್‌, ಫೀಲ್ಡಿಂಗ್‌ಗೆ ಬೆಲೆತೆತ್ತ ಭಾರತ; ರನ್‌ ಮಳೆಯಲ್ಲಿ ಗೆದ್ದ ಆಫ್ರಿಕಾ – ಸರಣಿ 1-1ರಲ್ಲಿ ಸಮ

Public TV
By Public TV
5 minutes ago
anganwadi asha workers h.d.kumaraswamy
Latest

ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ

Public TV
By Public TV
21 minutes ago
Siddaramaiah Pralhad Joshi
Latest

ಚಳಿಗಾಲದ ಅಧಿವೇಶನ; ಸಿಎಂ ಕರೆದ ಸಭೆಗೆ ಬರೋದು ಅಸಾಧ್ಯ – ಜೋಶಿ

Public TV
By Public TV
59 minutes ago
Darshan Pavithra
Bengaluru City

ಒಂದೂವರೆ ವರ್ಷಗಳ ಬಳಿಕ ರೇಣುಕಾ ಕೇಸ್ ವಿಚಾರಣೆ – ಲೆಕ್ಕ ಕೊಡದ 82 ಲಕ್ಷ ರೂ. ಇಡಿ ಸುಪರ್ದಿಗೆ

Public TV
By Public TV
1 hour ago
Techie
Bengaluru City

ಬೆಂಗಳೂರು | ತಾನೇ ಕಟ್ಟಿಸುತ್ತಿದ್ದ ಕನಸಿನ ಮನೆಯಲ್ಲಿ ಟೆಕ್ಕಿ ನೇಣಿಗೆ ಶರಣು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?