Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಮಿಷನರ್‌ ಕಚೇರಿ ಆವರಣದಲ್ಲೇ ಹಣ ದೋಚಿದ ಪೊಲೀಸಪ್ಪ – ಆರೋಪಿ ಕಾರಿನಲ್ಲಿದ್ದ 11 ಲಕ್ಷ ಕಳವು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಮಿಷನರ್‌ ಕಚೇರಿ ಆವರಣದಲ್ಲೇ ಹಣ ದೋಚಿದ ಪೊಲೀಸಪ್ಪ – ಆರೋಪಿ ಕಾರಿನಲ್ಲಿದ್ದ 11 ಲಕ್ಷ ಕಳವು!

Bengaluru City

ಕಮಿಷನರ್‌ ಕಚೇರಿ ಆವರಣದಲ್ಲೇ ಹಣ ದೋಚಿದ ಪೊಲೀಸಪ್ಪ – ಆರೋಪಿ ಕಾರಿನಲ್ಲಿದ್ದ 11 ಲಕ್ಷ ಕಳವು!

Public TV
Last updated: December 4, 2025 11:00 am
Public TV
Share
2 Min Read
Police Theft
SHARE

ಬೆಂಗಳೂರು: ಸಿದ್ದಾಪುರ ದರೋಡೆ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಕಳ್ಳತನ (Theft) ಆರೋಪ ಬಂದಿದೆ. ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲಿಯೇ ಕಳ್ಳತನ ನಡೆದಿದೆ.

ಸೈಬರ್ ಪ್ರಕರಣದ (Cyber Case) ಆರೋಪಿಯನ್ನ ವಿಚಾರಣೆಗೆ ಕರೆತಂದಾಗ ಆತನ ಕಾರಿನಲ್ಲಿ 11 ಲಕ್ಷ ಹಣದ ಬ್ಯಾಗ್ ಅನ್ನು ಹೆಡ್ ಕಾನ್ಸ್‌ಟೇಬಲ್‌ (Police Head constable) ಜಬೀವುಲ್ಲಾ ಕದ್ದಿರುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಸಿಎಂ ಕಾವೇರಿ ನಿವಾಸದ ಬಂದೋಬಸ್ತ್‌ಗೆ ಬಾರದ ಸಿಬ್ಬಂದಿ ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್‌

CRIME

ಹಣ ಕಳ್ಳತನ ಮಾಡಿ ಏನು ಗೊತ್ತೇ ಇಲ್ಲ ಎನ್ನುವಂತೆ ಜಬೀವುಲ್ಲಾ ಕೆಲಸ ಮಾಡ್ತಿದ್ದನಂತೆ. ಇತ್ತ ಆರೋಪಿ ಬಂಧಿಸಿದ್ದ ಇನ್ಸ್ಪೆಕ್ಟರ್ ಉಮೇಶ್ ಅಂಡ್ ಟೀಂ ಆತನನ್ನ ಜೈಲಿಗಟ್ಟಿತ್ತು. ಬಳಿಕ ಜಾಮೀನು ಪಡೆದು ಹೊರಬಂದ ಆರೋಪಿ ತನ್ನ ಕಾರಿನಲ್ಲಿ ಇದ್ದ ಹಣದ ಬ್ಯಾಗ್ ನಾಪತ್ತೆ ಆಗಿರುವುದನ್ನ ನೋಡಿ ಈ ಬಗ್ಗೆ ಸೈಬರ್ ಪೊಲೀಸರ (Cyber Police) ಬಳಿ ಪ್ರಶ್ನೆ ಮಾಡಿದ್ದಾನೆ. ಆರೋಪಿಯ ಪ್ರಶ್ನೆಗೆ ಗಾಬರಿಗೊಂಡು ಪರಿಶೀಲನೆ ಮಾಡಿದಾಗ ಕಾರಿನಲ್ಲಿದ್ದ ಹಣವನ್ನ ಜಬೀವುಲ್ಲಾ ತೆಗೆದುಕೊಂಡು ಹೋಗಿರೋದು ಗೊತ್ತಾಗಿದೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಜಬೀವುಲ್ಲಾ ಹಣದ ಬ್ಯಾಗ್ ಕಳ್ಳತನ ಮಾಡಿರುವುದು ಗೊತ್ತಾಗಿದೆ. ಇತ್ತ ಸುಮಾರು 11 ಲಕ್ಷ ಹಣ ಕಳ್ಳತನ ಮಾಡಿ ಹೆಡ್ ಕಾನ್‌ಸ್ಟೇಬಲ್‌ ಜಬಿವುಲ್ಲಾ ಆರಾಮಾಗಿ ಓಡಾಡಿಕೊಂಡಿದ್ದ. ಘಟನೆಯ ಬಗ್ಗೆ ಸಿಸಿಬಿ ಡಿಸಿಪಿ ರಾಜಾ ಇಮಾಮ್ ಖಾಸಿಂ ಗೆ ಹಣ ಕಳೆದುಕೊಂಡ ವ್ಯಕ್ತಿ ದೂರು ನೀಡಿದ್ರು. ದೂರು ಪಡೆದುಕೊಂಡು ಕಾನ್ಸ್‌ಟೇಬಲ್‌ ಜಬೀವುಲ್ಲಾ ಮನೆ ಸರ್ಚ್ ಮಾಡಲು ತೆರಳಿದಾಗ ಮನೆಯ ಬಳಿ ಜಬೀವುಲ್ಲಾ ಹೈಡ್ರಾಮಾ ಮಾಡಿದ್ದಾನೆ. ಮನೆಯ ಒಳಗೆ ಸೈಬರ್ ಪೊಲೀಸರನ್ನ ಬಿಡದೆ ಗಲಾಟೆ ಮಾಡಿದ್ದಾನೆ. ಕೊನೆಗೆ ಜಬೀವುಲ್ಲಾನನ್ನ ತಡೆದು ಮನೆ ಸರ್ಚ್‌ ಮಾಡಿದಾಗ ತನ್ನ ಕೋಣೆಯ ಬೆಡ್ ಕೆಳಗೆ ಲಕ್ಷ ಲಕ್ಷ‌ ಹಣ ಜೋಡಿಸಿಟ್ಟಿದ್ದು ಬಯಲಾಗಿದೆ. ಅಲ್ಲದೇ ಕದ್ದ ಹಣದಿಂದಲೇ ಪತ್ನಿಗೆ ಒಡೆವೆಗಳನ್ನೂ ಕೊಡಿಸಿದ್ದ ಅನ್ನೋದು ಕಂಡುಬಂದಿದೆ.

ಸದ್ಯ ಹೆಡ್ ಕಾನ್ಸ್‌ಟೇಬಲ್‌ ಜಬಿವುಲ್ಲಾ 2 ಲಕ್ಷ ರೂ. ಹಣ ವಾಪಸ್ ಕೊಟ್ಟಿದ್ದಾನೆ. ಉಳಿದ ಹಣ ವಾಪಸ್‌ ಕೊಡುವಂತೆ ಹಿರಿಯ ಅಧಿಕಾರಿಗಳು ತಾಕೀತು ಮಾಡಿದ್ದಾರೆ. ಇದನ್ನೂ ಓದಿ: ಆಶಿಕಾ ರಂಗನಾಥ್ ಸಂಬಂಧಿ ಅಚಲ ಆತ್ಮಹತ್ಯೆ ಕೇಸ್ – ಪೊಲೀಸರ ಕೈಸೇರಿದ CDR ರಿಪೋರ್ಟ್, ಆರೋಪಿ ಜೊತೆ ಸಂಪರ್ಕ ಪತ್ತೆ

ಈಗಾಗಲೇ ಸಿದ್ದಾಪುರ ದರೋಡೆ ಕೇಸ್‌ನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಅಣ್ಣಪ್ಪ ನಾಯಕ್ ಬಂಧನವಾಗಿದ್ರೆ, ಜೆ.ಪಿ‌ ನಗರದಲ್ಲಿ ಸೀನಿಯರ್ ಸಿಟಿಜನ್ ಬಳಿ ಹಣ‌ಪಡೆದ ಹಿನ್ನೆಲೆ ಇಬ್ಬರ ಅಮಾನತು ಮಾಡಲಾಗಿತ್ತು. ಬೆಳ್ಳಂದೂರು ಪೊಲೀಸರ ಮೇಲೆ ಸಾವಿನಲ್ಲೂ ಹಣ ಪಡೆದ ಆರೋಪ ಬಂದಿತ್ತು. ಇದೀಗ ಸೈಬರ್ ಠಾಣೆಯ ಸಿಬ್ಬಂದಿ ಹೆಡ್ ಕಾನ್ಸ್‌ಟೇಬಲ್‌ ಜಬಿವುಲ್ಲಾ ಮೇಲೆ ಕಳ್ಳತನದ ಆರೋಪ ಬಂದಿದ್ದು, ದೂರು ಪಡೆದಿರುವ ಪೊಲೀಸರಿಂದ‌ ಪ್ರಕರಣ ಮುಚ್ಚಿ ಹಾಕಲು ಯತ್ನ ನಡೆದಿದೆ ಅನ್ನೊ ಆರೋಪ ಸಹ ಕೇಳಿ ಬಂದಿದೆ.

TAGGED:bengaluruBengaluru police commissionerCyber policeMoney Theftಬೆಂಗಳೂರುಬೆಂಗಳೂರು ಪೊಲೀಸ್ ಕಮಿಷನರ್ಸೈಬರ್ ಪೊಲೀಸ್ಹಣ ಕಳ್ಳತನ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
36 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
56 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
57 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
1 hour ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
1 hour ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?