ಬೆಂಗಳೂರು: ರಾಜ್ಯದಲ್ಲಿ ಮೊಬೈಲ್ (Mobile) ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆ (Electronic Products) ಹಾಗೂ ವಿನ್ಯಾಸ ಕ್ಷೇತ್ರದ ವಿಸ್ತರಣೆಯನ್ನು ಗುರಿಯಾಗಿ ಇಟ್ಟುಕೊಂಡು 150 ಬಿಲಿಯನ್ ಡಾಲರ್ ವಾರ್ಷಿಕ ವಹಿವಾಟು ಹಾಗೂ ಹೂಡಿಕೆ ಸಾಧ್ಯವಾಗುವಂತೆ ವಿಷನ್ ಡಾಕ್ಯುಮೆಂಟ್ (Vision Document) ತಯಾರಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಧಾನಸೌಧದ ಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ಇಂಡಿಯನ್ ಸೆಲ್ಯುಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ (ಐಸಿಇಎ) ಅಧ್ಯಕ್ಷ ಪಂಕಜ್ ಮಹೀಂದ್ರೂ ನೇತೃತ್ವದ ಉನ್ನತ ಮಟ್ಟದ ನಿಯೋಗದ ಜೊತೆ ವಿಸ್ತೃತ ಮಾತುಕತೆ ನಡೆಸಿದರು. ಇದನ್ನೂ ಓದಿ: ಮುಸ್ಲಿಮರು ಈಶ್ವರ ಅಲ್ಹಾ ತೇರೇ ನಾಮ್ ಅಂತ ಎಲ್ಲೂ ಹೇಳಿಲ್ಲ: ಸಿ.ಟಿ ರವಿ
ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಈ ವರ್ಷದ ಏಪ್ರಿಲ್ ತಿಂಗಳಲ್ಲಿ ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕೆ ಯೋಜನೆಯನ್ನು ಘೋಷಿಸಿದೆ. ಇದಕ್ಕೆ ಸಮಾನಾಂತರವಾಗಿ ರಾಜ್ಯ ಸರ್ಕಾರವು ಕೂಡ ಒಂದು ಯೋಜನೆಯನ್ನು ರೂಪಿಸಲು ಚಿಂತಿಸುತ್ತಿದ್ದು, ಇದರ ಕಾರ್ಯಸಾಧ್ಯತೆಯನ್ನು ಕುರಿತು ಅಧ್ಯಯನ ಮಾಡುತ್ತಿದೆ. ಇದು ಕರಡು ಹಂತದಲ್ಲಿದ್ದು, ಇದಕ್ಕೆ ಐಸಿಇಎ ನೀಡುವ ಸಲಹೆಗಳನ್ನು ಸ್ವಾಗತಿಸಲಾಗುವುದು ಎಂದರು. ಇದನ್ನೂ ಓದಿ: ಬೀಡಿ ಕೊಡಿ ಸಾರ್ ಬೀಡಿ – ಬೆಂಗಳೂರಿನ ಸೆಂಟ್ರಲ್ ಜೈಲಲ್ಲಿ ತುಂಡು ಬೀಡಿಗೆ ಬೇಡಿಕೆ
ಮೊಬೈಲ್ ಫೋನ್ ಬಿಡಿಭಾಗಗಳು ಮಾತ್ರವಲ್ಲದೆ ಕೈಗಾರಿಕಾ ಎಲೆಕ್ಟ್ರಾನಿಕ್ಸ್, ಕಾರ್ಯತಂತ್ರ ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಕೂಡ ಅಪಾರ ಅವಕಾಶಗಳಿವೆ. ಅಧಿಕಾರಿಗಳಿಗೆ ಕೇಂದ್ರ ಸರ್ಕಾರದ ಯೋಜನೆ ಮತ್ತು ಇತರ ರಾಜ್ಯಗಳಲ್ಲಿ ಇರುವ ಇಂತಹ ಯೋಜನೆಗಳ ಅಧ್ಯಯನ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ದೆಹಲಿ ವಾಯುಮಾಲಿನ್ಯ | ಸಂಸತ್ ಆವರಣದಲ್ಲಿ ಪ್ರತಿಭಟನೆ – ನನ್ನಂತ ವೃದ್ಧರಿಗೆ ತೊಂದರೆಯಾಗ್ತಿದೆ: ಸೋನಿಯಾ ಗಾಂಧಿ
ಪಂಕಜ್ ಮಹೀಂದ್ರೂ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿ ಸಬ್-ಅಸೆಂಬ್ಲಿ (ಡಿಸ್-ಪ್ಲೇ, ಕ್ಯಾಮರಾ ಮಾಡ್ಯೂಲ್ಸ್), ಬೇರ್ ಕಾಂಪೊನೆಂಟ್ಸ್ ಮತ್ತು ತಯಾರಿಕೆಗೆ ಬೇಕಾಗುವ ಸಾಧನಗಳಿಗೆ ಒತ್ತು ಕೊಡಲಾಗಿದೆ. ಇದಲ್ಲದೆ ವಹಿವಾಟನ್ನು ಆಧರಿಸಿ ಪ್ರೋತ್ಸಾಹನಾ ಭತ್ಯೆಗಳು, ಶೇಕಡ 25ರಷ್ಟು ಬಂಡವಾಳ ಸಬ್ಸಿಡಿ ಬೆಂಬಲ ಕೊಡಲಾಗುವುದು. ಈ ಯೋಜನೆಗೆ ಕೇಂದ್ರ ಸರ್ಕಾರವು 22,900 ಕೋಟಿ ರೂ. ವಿನಿಯೋಗಿಸುತ್ತಿದೆ ಎಂದರು. ಇದನ್ನೂ ಓದಿ: ಯುವ ಬರಹಗಾರರ ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರವು ಈ ವರ್ಷದ ನವೆಂಬರ್ ತನಕ 7,172 ಕೋಟಿ ರೂ. ಮೊತ್ತದ 17 ಹೂಡಿಕೆ ಯೋಜನೆಗಳಿಗೆ ಒಪ್ಪಿಗೆ ನೀಡಿದೆ. ಇದರಿಂದ 11,800 ನೇರ ಉದ್ಯೋಗಗಳು ಸೃಷ್ಟಿಯಾಗಲಿದ್ದು, 65 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ಉತ್ಪನ್ನಗಳು ತಯಾರಾಗಲಿವೆ ಎಂದು ನುಡಿದರು. ಇದನ್ನೂ ಓದಿ: ದ್ವೇಷ ಭಾಷಣ ಮಸೂದೆಗೆ ಇಂದೇ ಒಪ್ಪಿಗೆ ಪಡೆಯುತ್ತೇವೆ – ಪರಮೇಶ್ವರ್
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು. ಇದನ್ನೂ ಓದಿ: ಪರಮೇಶ್ವರ್‌ಗೆ ಸಿಎಂ ಸ್ಥಾನ ಕೊಡಬೇಕು – ತುಮಕೂರಿನಲ್ಲಿ ದಲಿತಪರ ಸಂಘಟನೆ ಆಗ್ರಹ


