Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆ, ಕಾರು ಖರೀದಿದಾರರಿಗೆ ಗುಡ್‌ನ್ಯೂಸ್‌ | ರೆಪೋ ದರ ಕಡಿತ – ಇಎಂಐ ಎಷ್ಟು ಇಳಿಕೆಯಾಗುತ್ತೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮನೆ, ಕಾರು ಖರೀದಿದಾರರಿಗೆ ಗುಡ್‌ನ್ಯೂಸ್‌ | ರೆಪೋ ದರ ಕಡಿತ – ಇಎಂಐ ಎಷ್ಟು ಇಳಿಕೆಯಾಗುತ್ತೆ?

Latest

ಮನೆ, ಕಾರು ಖರೀದಿದಾರರಿಗೆ ಗುಡ್‌ನ್ಯೂಸ್‌ | ರೆಪೋ ದರ ಕಡಿತ – ಇಎಂಐ ಎಷ್ಟು ಇಳಿಕೆಯಾಗುತ್ತೆ?

Public TV
Last updated: December 5, 2025 11:40 am
Public TV
Share
2 Min Read
home loan
SHARE

ಮುಂಬೈ: ದೇಶದ ಜಿಡಿಪಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ರೆಪೋ ದರ (Repo Rate) ಕಡಿತಗೊಳಿಸಿದೆ. 25 ಬೇಸಿಸ್ ಪಾಯಿಂಟ್‌ ಕಡಿತಗೊಳಿಸಿದ್ದು ರೆಪೋ ಬಡ್ಡಿ ದರ 5.50% ರಿಂದ 5.25% ಕ್ಕೆ ಇಳಿಕೆಯಾಗಿದೆ.

ಆರ್‌ಬಿಐನ ಹಣಕಾಸು ನೀತಿ ಸಮಿತಿಯು (MPC) ಸಭೆಯ ಬಳಿಕ 25 ಮೂಲಾಂಶದಷ್ಟು (ಬೇಸಿಸ್‌ ಪಾಯಿಂಟ್‌) ರೆಪೋ ದರ ಕಡಿಮೆ ಮಾಡಲು ನಿರ್ಧರಿಸಿರುವುದಾಗಿ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ (Sanjay Malhotra) ತಿಳಿಸಿದರು.

ಆರ್‌ಬಿಐ ನಿರ್ಧಾರದಿಂದ ಸಾಲ (Loan) ಮತ್ತು ಇಎಂಐಗಳ (EMI) ಬಡ್ಡಿ ದರವೂ ಇಳಿಕೆಯಾಗಲಿದೆ. ಜೊತೆಗೆ ಹೊಸ ಸಾಲಗಾರರಿಗೆ ಗೃಹ ಸಾಲಗಳು, ವಾಹನದ ಮೇಲಿನ ಸಾಲಗಳು ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ. ಆಟೊಮೊಬೈಲ್, ಕಾರ್ಪೊರೇಟ್ ಸಾಲಗಳ ಮೇಲಿನ ಮರುಪಾವತಿ ಕಂತುಗಳಲ್ಲಿಯೂ ಇಳಿಕೆಯಾಗುವ ನಿರೀಕ್ಷೆ ಇದೆ.

ರೆಪೋ ದರದಲ್ಲಿ 25 ಮೂಲಾಂಶ ಇಳಿಕೆ ಆಗಬಹುದೆಂದು ತಜ್ಞರು ನಿರೀಕ್ಷಿಸಿದ್ದರು. ಈ ವರ್ಷದ ಫೆಬ್ರವರಿಯಿಂದ ಆರ್‌ಬಿಐ ರೆಪೋ ದರದಲ್ಲಿ 125 ಮೂಲಾಂಶದಷ್ಟು ಕಡಿತ ಮಾಡಿದೆ. ಫೆಬ್ರವರಿಯಲ್ಲಿ 25, ಏಪ್ರಿಲ್‌ನಲ್ಲಿ 25, ಜೂನ್‌ನಲ್ಲಿ 50 ಬೇಸಿಸ್‌ ಪಾಯಿಂಟ್‌ ಕಡಿತಗೊಳಿಸಲಾಗಿತ್ತು. ಇದನ್ನೂ ಓದಿ:  ಭಾರತವನ್ನು ಬೆಂಬಲಿಸಿ ಟ್ರಂಪ್‌ ಬೂಟಾಟಿಕೆಯನ್ನು ಬಯಲು ಮಾಡಿದ ಪುಟಿನ್‌

 

ರೆಪೋ ರೇಟ್ ಎಂದರೇನು?
ವಾಣಿಜ್ಯ ಬ್ಯಾಂಕ್‌ಗಳ ರಿಸರ್ವ್ ಬ್ಯಾಂಕ್‍ನಿಂದ ಪಡೆಯುವ ಅಲ್ಪಾವಧಿ ಸಾಲದ ಮೇಲಿನ ಬಡ್ಡಿ ದರಕ್ಕೆ ರೆಪೋ ದರ ಎನ್ನುತ್ತಾರೆ. ರೆಪೋ ದರ ಕಡಿಮೆಯಾದರೆ ಬ್ಯಾಂಕ್‌ಗಳು ಕಡಿಮೆ ಬಡ್ಡಿ ದರದಲ್ಲಿ ಹೆಚ್ಚಿನ ಹಣವನ್ನು ಪಡೆಯಬಹುದು. ಬ್ಯಾಂಕ್‍ಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತಿರುತ್ತವೆ. ರೆಪೋ ರೇಟ್‌ ಜಾಸ್ತಿ ಇದ್ದರೆ ಬ್ಯಾಂಕ್‌ಗಳು ಸಾಲದ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡುತ್ತದೆ. ಇದರಿಂದ ವಾಹನ ಸಾಲ, ಗೃಹ ಸಾಲ, ಇತ್ಯಾದಿ ಸಾಲಗಳ ಬಡ್ಡಿ ದರ ಏರುತ್ತದೆ.

ರಿವರ್ಸ್ ರೆಪೋ: ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಲ್ಲಿ ಇಡುವ ಠೇವಣಿಗಳ ಮೇಲೆ ಪಡೆಯುವ ಬಡ್ಡಿದರವೇ ವಿರುದ್ಧ ರೆಪೋ ರೇಟ್. ಆರ್‌ಬಿಐನಲ್ಲಿ ಠೇವಣಿ ಇಡುವುದು ಬ್ಯಾಂಕುಗಳಿಗೆ ಸುರಕ್ಷಿತ. ರಿವರ್ಸ್‌ ರೆಪೋ ದರ ಹೆಚ್ಚಾದಾಗ ಬ್ಯಾಂಕುಗಳು ಹೆಚ್ಚಿನ ಮೊತ್ತವನ್ನು ಆರ್‌ಬಿಐಗೆ ವರ್ಗಾಯಿಸುತ್ತದೆ. ಇದನ್ನೂ ಓದಿ: ಟ್ರಂಪ್‌ ಸುಂಕ ಸಮರದ ಮಧ್ಯೆಯೂ ನಿರೀಕ್ಷೆಗೂ ಮೀರಿ ಜಿಡಿಪಿ ವೃದ್ಧಿ

ಗೃಹ ಸಾಲದ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

8.5% ಬಡ್ಡಿದರದಲ್ಲಿ 15 ವರ್ಷಗಳ ಅವಧಿಗೆ 25 ಲಕ್ಷ ರೂ. ಸಾಲ
ಪ್ರಸ್ತುತ ಇಎಂಐ- 24,618 ರೂ.
8.25% ದರ ಕಡಿತದ ಬಳಿಕ ಇಎಂಐ – 24,254 ರೂ.
ಪ್ರಸ್ತುತ ಬಡ್ಡಿ- 19,31,328 ರೂ.
8.25% ದರ ಕಡಿತ ನಂತರ ಬಡ್ಡಿ – 18,65,632 ರೂ.
ಉಳಿತಾಯ – 65,696 ರೂ.

TAGGED:gdpindiarbirepo rateಆರ್‍ಬಿಐಜಿಡಿಪಿಭಾರತರೆಪೋ ದರ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Chalavadi Narayaswamy
Bengaluru City

ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆಯನ್ನ ತಿಹಾರ್ ಜೈಲಿಗೆ ಹಾಕಬೇಕು: ಛಲವಾದಿ ನಾರಾಯಣಸ್ವಾಮಿ

Public TV
By Public TV
6 minutes ago
Auto Gas 1
Bagalkot

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ, ವದಂತಿಗೆ ಕಿವಿಗೊಡಬೇಡಿ: ಆಹಾರ ಇಲಾಖೆ

Public TV
By Public TV
22 minutes ago
LPG refills 3
Latest

ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ

Public TV
By Public TV
31 minutes ago
no stock at 5 out of 6 petrol stations in soraba
Districts

ಸೊರಬದ 6 ಪೆಟ್ರೋಲ್‌ ಬಂಕ್‌ಗಳಲ್ಲಿ 5ರಲ್ಲಿ ನೋ ಸ್ಟಾಕ್‌ – ಉಳಿದ ಒಂದೇ ಬಂಕ್‌ಗೆ ಮುಗಿಬಿದ್ದ ಜನ

Public TV
By Public TV
34 minutes ago
ಸಾಂದರ್ಭಿಕ ಚಿತ್ರ
Bagalkot

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯ

Public TV
By Public TV
41 minutes ago
Karwar Car Acident
Crime

ಕಾರಿನಲ್ಲೇ ಸುಟ್ಟು ಕರಕಲಾದ ಚಾಲಕ – ಸಾವಿನ ಸುತ್ತ ಅನುಮಾನದ ಹುತ್ತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?