Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಡಿಗೋ ಸಮಸ್ಯೆ – ಪೈಲಟ್‌ ರಜೆ ನಿಯಮಗಳನ್ನು ಸಡಿಲಿಸಿದ DGCA
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂಡಿಗೋ ಸಮಸ್ಯೆ – ಪೈಲಟ್‌ ರಜೆ ನಿಯಮಗಳನ್ನು ಸಡಿಲಿಸಿದ DGCA

Latest

ಇಂಡಿಗೋ ಸಮಸ್ಯೆ – ಪೈಲಟ್‌ ರಜೆ ನಿಯಮಗಳನ್ನು ಸಡಿಲಿಸಿದ DGCA

Public TV
Last updated: December 5, 2025 2:25 pm
Public TV
Share
3 Min Read
India Biggest Airline company Indigo Signed World largest ever Airplane deal with airbus for 500 brand new A320 Planes worth over 55 billion dollar 1
SHARE

ನವದೆಹಲಿ: ದೇಶಾದ್ಯಂತ ಇಂಡಿಗೋ (Indigo) ವಿಮಾನ ಸೇವೆಯಲ್ಲಿ ಸಮಸ್ಯೆಯಾದ ಬೆನ್ನಲ್ಲೇ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ತನ್ನ ನಿಯಮಗಳನ್ನು ಸಡಿಲಿಸಿದೆ.

ವಿಮಾನಯಾನ ಸಿಬ್ಬಂದಿ ಸಾಪ್ತಾಹಿಕ ವಿಶ್ರಾಂತಿಗೆ ರಜೆಯನ್ನು ಬದಲಾಯಿಸಬಾರದು ಎಂಬ ತನ್ನ ಇತ್ತೀಚಿನ ನಿರ್ದೇಶನವನ್ನು ಡಿಜಿಸಿಎ ತಕ್ಷಣವೇ ಹಿಂದಕ್ಕೆ ಪಡೆದುಕೊಂಡಿದೆ.

24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಡಿಜಿಸಿಎ ತನ್ನ ಎಫ್‌ಡಿಟಿಎಲ್ (Flight Duty Time Limitations) ಮಾನದಂಡಗಳಿಗೆ ಮಾಡಿದ ಎರಡನೇ ಬದಲಾವಣೆ ಇದಾಗಿದೆ. ಗುರುವಾರ ರಾತ್ರಿ ಪೈಲಟ್ ಹಾರಾಟ ನಡೆಸಬಹುದಾದ ಸತತ ಗಂಟೆಗಳ ಸಂಖ್ಯೆಯ ಮಿತಿಯನ್ನು 12 ರಿಂದ 14 ಕ್ಕೆ ವಿಸ್ತರಿಸಿತ್ತು.

ಕಳೆದ 2 ದಿನಗಳಿಂದ ಸಾವಿರಕ್ಕೂ ಹೆಚ್ಚು ವಿಮಾನ ಹಾರಾಟವನ್ನು ಇಂಡಿಗೋ ರದ್ದು ಮಾಡಿತ್ತು. ದಿಢೀರ್‌ ರದ್ದು ಮಾಡಿದ್ದರಿಂದ ವಿಮಾನ ನಿಲ್ದಾಣದಲ್ಲಿ ಪ್ರಯಾಣ ದಟ್ಟಣೆ ಹೆಚ್ಚಾಗಿದೆ.

ಸಮಸ್ಯೆಗೆ ಕಾರಣ ಏನು?
ಭಾರತದ ವಿಮಾನ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಬಹಳ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪೈಲಟ್‌ಗಳ ಕೊರತೆ ಇದ್ದರೂ ಇರುವ ಪೈಲಟ್‌ಗಳ ಮೇಲೆ ಕಂಪನಿಗಳು ಹೆಚ್ಚಿನ ಒತ್ತಡ ಹಾಕಿಸುತ್ತವೆ ಎಂಬ ದೂರುಗಳು ಬರುತ್ತಿದ್ದವು. ಸಿಬ್ಬಂದಿ ಆರೋಗ್ಯ, ಮಾನಸಿಕ ಆರೋಗ್ಯ.. ಇತ್ಯಾದಿ ಸಮಸ್ಯೆಯನ್ನು ಪರಿಗಣಿಸಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಪ್ರಯಾಣಿಕರ ಸುರಕ್ಷತೆಯನ್ನು ಹೆಚ್ಚಿಸಲು ಪೈಲಟ್‌ಗಳು ಮತ್ತು ಸಿಬ್ಬಂದಿಗೆ ಸಾಕಷ್ಟು ವಿಶ್ರಾಂತಿ ನೀಡಲು ಹೊಸ ನಿಯಮಗಳನ್ನು ಜಾರಿ ಮಾಡಿದೆ. ಈ ನಿಯಮವನ್ನು ಕಂಪನಿಗಳು ಈಗ ಕಡ್ಡಾಯವಾಗಿ ಪಾಲನೆ ಮಾಡಬೇಕಾದ ಕಾರಣ ಇಂಡಿಗೋ ಕಾರ್ಯಾಚರಣೆಯಲ್ಲಿ ಸಮಸ್ಯೆ ಆರಂಭವಾಗಿದೆ. ಇದನ್ನೂ ಓದಿ:  1000ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು – ಫೆಬ್ರವರಿ ವೇಳೆಗೆ ಸಮಸ್ಯೆಗೆ ಪರಿಹಾರ ಎಂದ ಇಂಡಿಗೋ

ಯಾವ ನಿಯಮಗಳು ಏನು ಬದಲಾವಣೆಯಾಗಿದೆ?
ಪೈಲಟ್ ಅಥವಾ ಕ್ಯಾಬಿನ್ ಸಿಬ್ಬಂದಿಗೆ ಒಂದು ದಿನದಲ್ಲಿ ಒಟ್ಟು 10-13 ಗಂಟೆ ಕರ್ತವ್ಯ ಮಾಡಬಹುದಿತ್ತು. ಆದರೆ ವಿಮಾನಯಾನ ರೋಸ್ಟರ್ ಮಾನದಂಡಗಳ ಪ್ರಕಾರ ಈಗ ಗರಿಷ್ಠ 10 ಗಂಟೆ ಮಾತ್ರ ನಿಗದಿ ಮಾಡಲಾಗಿದೆ.

ಈ ಮೊದಲು ವಾರದಲ್ಲಿ ಕನಿಷ್ಠ 36 ಗಂಟೆ ವಿಶ್ರಾಂತಿ ನೀಡಲಾಗುತ್ತಿತ್ತು. ಆದರೆ ಈಗ ಕನಿಷ್ಠ 48 ಗಂಟೆ ವಿಶ್ರಾಂತಿ ಪಡೆಯಬೇಕೆಂದು ಸೂಚಿಸಲಾಗಿದೆ. ರಾತ್ರಿ ಪಾಳಿಯಲ್ಲಿ ಕೆಲಸ ಮಾಡಿದ ಬಳಿಕ 10 ಗಂಟೆ ವಿಶ್ರಾಂತಿ ಪಡೆಯಬಹುದಾಗಿತ್ತು. ಆದರೆ ಈಗ ಈ ಅವಧಿಯನ್ನು12 ಗಂಟೆಗೆ ವಿಸ್ತರಿಸಲಾಗಿದೆ.  ಇದನ್ನೂ ಓದಿ: 1000ಕ್ಕೂ ಹೆಚ್ಚು ವಿಮಾನ ಹಾರಾಟ ರದ್ದು – ಫೆಬ್ರವರಿ ವೇಳೆಗೆ ಸಮಸ್ಯೆಗೆ ಪರಿಹಾರ ಎಂದ ಇಂಡಿಗೋ

ಮೊದಲು ರಾತ್ರಿ ಸಮಯದಲ್ಲಿ 6 ಬಾರಿ ಲ್ಯಾಂಡಿಂಗ್‌ ಮಾಡಲು ಅವಕಾಶವಿತ್ತು. ಆದರೆ ಈಗ 2 ಬಾರಿ ಮಾತ್ರ ಲ್ಯಾಂಡಿಂಗ್‌ಗೆ ಅವಕಾಶ ನೀಡಲಾಗಿದೆ.

ದಿನಕ್ಕೆ 8-10 ಗಂಟೆಗಳು, ವಾರಕ್ಕೆ 30 ಗಂಟೆಗಳು ಅಥವಾ 28 ದಿನಗಳಲ್ಲಿ ಗರಿಷ್ಠ100 ಗಂಟೆ ವಿಮಾನ ಹಾರಾಟಕ್ಕೆ ಸಮಯ ಮಿತಿಯನ್ನು ಹಾಕಲಾಗಿದೆ. ಇದು ವಾರ್ಷಿಕವಾಗಿ 1,000 ಗಂಟೆಗಳಿಗಿಂತ ಹೆಚ್ಚಿರಬಾರದು. ಯಾವುದೇ ವಿಮಾನಯಾನ ಸಂಸ್ಥೆಯು ಪೈಲಟ್‌ಗಳು ಮತ್ತು ಕ್ಯಾಬಿನ್ ಸಿಬ್ಬಂದಿಯನ್ನು ಈ ಮಿತಿಗಳಿಗಿಂತ ಹೆಚ್ಚಿನ ಅವಧಿ ಕೆಲಸ ಮಾಡಿಸುವಂತಿಲ್ಲ.

 

ಇಂಡಿಗೋಗೆ ಮಾತ್ರ ಯಾಕೆ ಸಮಸ್ಯೆ?
ದೇಶದ ವಾಯುಯಾನ ಮಾರುಕಟ್ಟೆಯಲ್ಲಿ ಇಂಡಿಗೋ 64% ಪಾಲನ್ನು ಹೊಂದಿದ್ದು ಏರ್‌ ಇಂಡಿಯಾ 27% ಪಾಲನ್ನು ಹೊಂದಿದೆ. ಇಂಡಿಗೋ ಪ್ರತಿದಿನ 2,200 ಕ್ಕೂ ಹೆಚ್ಚು ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ವಹಿಸುತ್ತದೆ. ಇದು ಏರ್ ಇಂಡಿಯಾ ಒಂದು ದಿನದಲ್ಲಿ ಕಾರ್ಯನಿರ್ವಹಿಸುವ ವಿಮಾನಗಳ ಸಂಖ್ಯೆಯ ಎರಡು ಪಟ್ಟು ಹೆಚ್ಚು.

ಬೇರೆ ಕಂಪನಿಗಳಿಗೆ ಹೋಲಿಸಿದರೆ ಇಂಡಿಗೋ ಕಡಿಮೆ ವೆಚ್ಚದ ವಿಮಾನ ಸೇವೆಗಳನ್ನು ನೀಡುತ್ತಿದೆ. ರಾತ್ರಿ ಸಮಯದಲ್ಲೇ ಹೆಚ್ಚಿನ ವಿಮಾನಗಳನ್ನು ಹಾರಿಸುತ್ತದೆ. ಡಿಜಿಸಿಎ ರಾತ್ರಿ ವಿಮಾನ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕಠಿಣ ನಿಯಮ ಜಾರಿ ಮಾಡಿದ್ದು ಇಂಡಿಗೋಗೆ ಬಹಳ ಹೊಡೆತ ನೀಡಿದೆ.

ಡಿಜಿಸಿಎ ಜನವರಿಯಲ್ಲೇ ಈ ನಿಯಮ ಜಾರಿ ಮಾಡಿದ್ದರೂ ಕಂಪನಿಗಳು ಹಂತ ಹಂತವಾಗಿ ಈ ನಿಯಮಗಳನ್ನು ಪಾಲನೆ ಮಾಡಬೇಕೆಂದು ಸೂಚಿಸಿತ್ತು. ಜುಲೈ 1 ರಂದು ಮೊದಲ ಹಂತ ಜಾರಿಯಾಗಿತ್ತು. ಈ ಸಂದರ್ಭದಲ್ಲಿ 15 ಷರತ್ತುಗಳು ಸಡಿಲವಾಗಿತ್ತು. ನವೆಂಬರ್‌ 1 ರಿಂದ ನೈಟ್‌ ಲ್ಯಾಂಡಿಂಗ್‌ ಸೇರಿದಂತೆ ಉಳಿದ ಷರತ್ತುಗಳು ಜಾರಿಯಾದವು.

ಉಳಿದ ಕಂಪನಿಗಳಿಗೆ ಇಂಡಿಗೋದಷ್ಟು ವಿಮಾನಗಳನ್ನು ಹಾರಿಸದ ಕಾರಣ ಅವುಗಳಿಗೆ ಇಷ್ಟೊಂದು ಸಮಸ್ಯೆಯಾಗಿಲ್ಲ. ಆದರೆ ಇಂಡಿಗೋ ಸಂಸ್ಥೆ ತನ್ನ ಸಿಬ್ಬಂದಿ ವೇಳಾಪಟ್ಟಿಯನ್ನು ಸರಿಯಾಗಿ ಮಾಡದ ಕಾರಣ ಈಗ ದಿಢೀರ್‌ ಸಮಸ್ಯೆಯಾಗಿದೆ.

TAGGED:DGCAIndgioindiaಇಂಡಿಗೋಡಿಜಿಸಿಎಭಾರತವಿಮಾನ ಸೇವೆ
Share This Article
Facebook Whatsapp Whatsapp Telegram

Cinema news

Bigg Boss Rakshita Malu Dhruvanth
ರಕ್ಷಿತಾ-ಮಾಳುಗೆ ಧ್ರುವಂತ್‌ ಮೋಸ – ಕ್ಲಾಸ್‌ ತಗೆದುಕೊಳ್ಳುವಂತೆ ಆಗ್ರಹ
Cinema Latest Top Stories TV Shows
Baahubali The Epic 3
ಜಪಾನ್‌ನಲ್ಲಿ `ಬಾಹುಬಲಿ ದಿ ಎಪಿಕ್’ ರಿಲೀಸ್ – ಯಾವಾಗ ಗೊತ್ತಾ..?
Cinema Latest South cinema
Darshan
ʻದಾಸʼನಿಗೆ 82 ಲಕ್ಷ ಹಣದ ತಲೆಬಿಸಿ – ಕೃಷಿ, ಪ್ರಾಣಿ ಮಾರಾಟದಿಂದಲೇ ಹಣ ಸಿಕ್ಕಿದ್ದು ಎಂದ ದರ್ಶನ್‌
Bengaluru City Cinema Districts Karnataka Latest Main Post Sandalwood
Nanda Kishore and bekary raghu
ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಕೇಸ್‌ಗೆ ಟ್ವಿಸ್ಟ್ – ಉದ್ಯಮಿ ಕಿಡ್ನ್ಯಾಪ್ ಹಿಂದೆ ರಘು ಕೈವಾಡ ಸಾಬೀತು
Bengaluru City Cinema Districts Karnataka Latest Sandalwood Top Stories

You Might Also Like

KIADB Office
Bengaluru City

KIADB ಹೊಸ ಬಹುಮಹಡಿ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ

Public TV
By Public TV
39 seconds ago
Daneshwara Swamiji of Basavagopala Neelmanika Mutt in Bandigani village of Rabakavi banahatti taluk passes away
Bagalkot

ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ

Public TV
By Public TV
3 minutes ago
d.k.shivakumar
Bengaluru City

ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್‌ – ಛಲವಾದಿಗೆ ಡಿಕೆಶಿ ತಿರುಗೇಟು

Public TV
By Public TV
5 minutes ago
Flower Girl
Latest

ಪ್ರೀತಿಯೊಂದು ಹೂವಿನ ಹಾಗೇ… ಬಾಡೋ ಮಾತಿಲ್ಲ!

Public TV
By Public TV
18 minutes ago
Deputy Lokayukta Justice Veerappa
Karnataka

ಯಾವುದೇ ಸರ್ಕಾರವನ್ನು ಉಲ್ಲೇಖಿಸಿ ಭ್ರಷ್ಟಾಚಾರದ ಬಗ್ಗೆ ಹೇಳಿಲ್ಲ: ಉಪ ಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ

Public TV
By Public TV
35 minutes ago
SHIVAMOGGA COURT copy
Districts

ರೈತನಿಗೆ ಪರಿಹಾರ ವಿಳಂಬ – ಶಿವಮೊಗ್ಗ ಡಿಸಿ ಕಾರು ಜಪ್ತಿಗೆ ಕೋರ್ಟ್ ಆದೇಶ

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?