Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಡಿಗೋ ಸಮಸ್ಯೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆಯ ಅಸ್ಥಿ ಹಿಡಿದು ಮಗಳ ಪರದಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂಡಿಗೋ ಸಮಸ್ಯೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆಯ ಅಸ್ಥಿ ಹಿಡಿದು ಮಗಳ ಪರದಾಟ

Bengaluru City

ಇಂಡಿಗೋ ಸಮಸ್ಯೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆಯ ಅಸ್ಥಿ ಹಿಡಿದು ಮಗಳ ಪರದಾಟ

Public TV
Last updated: December 5, 2025 6:51 pm
Public TV
Share
2 Min Read
Bengaluru Airport 2
SHARE

ಚಿಕ್ಕಬಳ್ಳಾಪುರ/ಬೆಂಗಳೂರು: ಸಿಲಿಕಾನ್‌ ಸಿಟಿ ಸೇರಿದಂತೆ ದೇಶಾದ್ಯಂತ ಹಲವು ವಿಮಾನ ನಿಲ್ದಾಣಗಳಲ್ಲಿ (Bengaluru Airport) ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಸತತ 4ನೇ ದಿನವೂ ಕಾಲಿಟ್ಟಿದೆ. ನಿನ್ನೆ ಒಂದೇ ದಿನ ಬರೋಬ್ಬರಿ 550 ವಿಮಾನಗಳ ಸಂಚಾರ ರದ್ದಾಗಿದೆ. ಸಿಬ್ಬಂದಿಯ ಕೊರತೆಯಿಂದಾಗಿ ಇಂಡಿಗೋ ದೇಶೀಯ, ಅಂತಾರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ಬ್ರೇಕ್ ಹಾಕಿದೆ. ಇದರಿಂದ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ಒಂದರಲ್ಲೇ ಒಟ್ಟು 205 ಇಂಡಿಗೋ (IndiGo) ವಿಮಾನಗಳ ಹಾರಾಟ ರದ್ದಾಗಿದೆ. ಕಳೆದ 3-4 ದಿನಗಳಿಂದ ಈ ಸಮಸ್ಯೆ ಆಗುತ್ತಿದ್ದು, ಸಾವಿರಾರು ಪ್ರಯಾಣಿಕರು ಪರದಾಡಿದ್ದಾರೆ.

Bengaluru Airport 1

ಎಲ್ಲಿ ನೋಡಿದ್ರೂ ಜನವೋ ಜನ
ಇನ್ನೂ ಕಳೆದ 24 ವರ್ಷಗಳಲ್ಲೇ ಅತಿಹೆಚ್ಚು ವಿಮಾನಗಳ ಹಾರಾಟದಲ್ಲಿ ಸಮಸ್ಯೆ ಆಗಿರೋದು ಸಹಜವಾಗಿಯೇ ಪ್ರಯಾಣಿಕರಲ್ಲಿ ಸಮಸ್ಯೆ ಉಂಟು ಮಾಡಿದೆ. ಇಂದೂ ಕೂಡ ದೇಶದ ಹಲವು ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದ್ದು, ಹಲವು ವಿಮಾನಗಳು ರದ್ದಾಗಿವೆ. ಇಂದು ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 102 ಇಂಡಿಗೋ ವಿಮಾನಗಳು ರದ್ದಾಗಿವೆ. ಹೈದ್ರಾಬಾದ್‌ನಲ್ಲಿ 92 ವಿಮಾನಗಳು ರದ್ದಾಗಿದ್ದು, ಮುಂಬೈ, ದೆಹಲಿಯಲ್ಲೂ ವಿಮಾನಗಳನ್ನ ಕ್ಯಾನ್ಸಲ್ ಮಾಡಲಾಗಿದೆ. ಇದರಿಂದ ಪ್ರಯಾಣಿಕರು ಇಂಡಿಗೋ ಸಂಸ್ಥೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರು ಏರ್‌ಪೋರ್ಟ್‌ನ ದೃಶ್ಯ ಹೇಗಿದೆಯೆಂದರೆ, ರೈಲ್ವೆ ಸ್ಟೇಷನ್ ನಂತಾಗಿದೆ.

ತಂದೆ ಅಸ್ಥಿ ಜೊತೆ ಏರ್‌ಪೋರ್ಟ್‌ನಲ್ಲೇ ಮಗಳು
ಇನ್ನು.. ಇಂಡಿಗೋ ವಿಮಾನಗಳಲ್ಲಿ ತಾಂತ್ರಿಕ ತೊಂದ್ರೆ ಹಾಗೂ ಪೈಲಟ್‌ಗಳ ಕೊರತೆಯಿಂದ ದೇಶದಾದ್ಯಂತ ಹಲವು ವಿಮಾನಗಳು ರದ್ದಾಗುತ್ತಿವೆ. ಇದೇ ರೀತಿ ಭುವನೇಶ್ವರಕ್ಕೆ ತೆರಳಬೇಕಿದ್ದ ವರನ ಕುಟುಂಬ ಪರದಾಡಿದೆ. 110 ಮಂದಿ ಏರ್‌ಪೋರ್ಟ್‌ನಲ್ಲೇ ಪರದಾಡಿದ್ದಾರೆ. ಹೀಗಾಗಿ ಇಂಡಿಗೋ ವಿರುದ್ಧ ವರನ ತಂದೆ ಮಹೇಂದ್ರ ಕುಮಾರ್ ಅಸಮಾಧಾನ ಹೊರಹಾಕಿದ್ದಾರೆ.

ಇತ್ತ, ಹರಿದ್ವಾರಕ್ಕೆ ತಂದೆಯ ಅಸ್ಥಿ ಬಿಡಲು ತೆರಳುತ್ತಿದ್ದ ಮಗಳು ಕೂಡ ವಿಮಾನ ಸ್ಥಗಿತದಿಂದ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಇನ್ನು, ಬೆಂಗಳೂರಿನಿಂದ ಅಹಮದಾಬಾದ್‌ಗೆ ತಾಯಿಯನ್ನ ಚಿಕಿತ್ಸೆಗೆ ಕರೆದುಕೊಂಡು ಹೊರಟಿದ್ದ ಮಗನಿಗೂ ಶಾಕ್ ಎದುರಾಗಿದೆ. ಏರ್‌ಪೋರ್ಟ್‌ಗೆ ತಾಯಿಯನ್ನು ಕರೆದುಕೊಂಡು ಬಂದ ಮಗನ ಮೊಬೈಲ್‌ಗೆ ವಿಮಾನ ರದ್ದು ಮಾಹಿತಿ ಬಂದಿದೆ. ಹೀಗಾಗಿ ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ತಾಯಿ ಚಿಕಿತ್ಸೆಗೆ ಅಪಾಯಿಂಟ್ಮೆಂಟ್‌ ಪಡೆದಿದ್ದ ರಂಜಿತ್ ಪರದಾಡುವ ಪರಿಸ್ಥಿತಿ ಎದುರಾಗಿದೆ.

ಏರ್‌ಪೋರ್ಟ್‌ನಲ್ಲೇ ಭಜನೆ ಮಾಡಿ ಆಕ್ರೋಶ
ಇನ್ನು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಕ್ಯಾನ್ಸಲ್‌ನಿಂದ ಪ್ರಯಾಣಿಕರು ಪರದಾಡಿದ್ರು. ಇಂಡಿಗೋ ಸಂಸ್ಥೆ ವಿರುದ್ಧ ಹಿಡಿಶಾಪ ಹಾಕಿದ್ರು. ಏರ್‌ಪೋರ್ಟ್‌ನಲ್ಲೇ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ ಪ್ರಯಾಣಿಕರು, ಭಜನೆ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ರು. ಇಂದು ಕೂಡ 400ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದು, ದೆಹಲಿ ವಿಮಾನ ನಿಲ್ದಾಣದಿಂದ ತೆರಳಬೇಕಿದ್ದ ಹಾಗೂ ಹೊರಡಬೇಕಿದ್ದ 220ಕ್ಕೂ ಹೆಚ್ಚು ವಿಮಾನಗಳು ರದ್ದಾಗಿವೆ. ಹೀಗಾಗಿ ನಿಲ್ದಾಣಗಳಲ್ಲಿ ಪ್ರಯಾಣಿಕರು ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಟಿಕೆಟ್ ಬುಕಿಂಗ್ ಕ್ಯಾನ್ಸಲ್‌ಗೆ ಸಾಲು ನಿಂತ ಪ್ರಯಾಣಿಕರು
ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ದಂಡೇ ಬಂದಿದೆ. ಸುಮಾರು ಗಂಟೆಗಳ ಕಾಲ ನಿಂತಲ್ಲೇ ನಿಂತಿರುವ ಪ್ರಯಾಣಿಕರು ಇದೀಗ ಟಿಕೆಟ್ ಬುಕಿಂಗ್ ಕ್ಯಾನ್ಸಲೇಷನ್‌ಗೆ ಮುಂದಾಗಿದ್ದಾರೆ. ಅಯೋಧ್ಯೆಯಲ್ಲಿ ನಾಳೆ ಶೌರ್ಯ ದಿನ ಹಿನ್ನೆಲೆ ಅಯೋಧ್ಯೆಗೆ ತೆರಳಬೇಕಿದ್ದ ವಿಮಾನ ಕೂಡ ರದ್ದಾಗಿದ್ದು, ನೂರಾರು ಪ್ರಯಾಣಿಕರು ಪರದಾಡಿದ್ದಾರೆ. ಈ ಮಧ್ಯೆ, ಇಂಡಿಗೋ ವಿಮಾನಗಳ ಹಾರಾಟದಲ್ಲೆ ಸಮಸ್ಯೆ ಹಾಗೂ ಇತರೆ ವಿಮಾನಗಳ ಟಿಕೆಟ್ ಬೆಲೆ ಏರಿಕೆ ಕಾರಣ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಇಂಡಿಗೋ ವೈಫಲ್ಯವು ಸರ್ಕಾರದ ಈ ಏಕಸ್ವಾಮ್ಯ ಮಾದರಿಯ ಬೆಲೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

TAGGED:bengaluru airportDelhi AirportIndi Go Flights CancelsIndiGo Domestic Flightsಇಂಡಿಗೋಇಂಡಿಗೋ ವಿಮಾನ ನಿಲ್ದಾಣಬೆಂಗಳೂರು ಏರ್‌ಪೋರ್ಟ್‌
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

BMTC Staff jewellery
Bengaluru City

ಬಸ್‌ನಲ್ಲಿ ಬಿಟ್ಟು ಹೋಗಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ BMTC ಸಿಬ್ಬಂದಿ

Public TV
By Public TV
14 minutes ago
new zealand defeated afghanistan by 5 wickets in 4th match of t20 world cup
Cricket

T20 World Cup​ | ಅಫ್ಘಾನಿಸ್ತಾನದ ವಿರುದ್ಧ ನ್ಯೂಜಿಲೆಂಡ್‌ಗೆ 5 ವಿಕೆಟ್‌ಗಳ ಜಯ

Public TV
By Public TV
36 minutes ago
BIJAPURA FLIGHT
Districts

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ

Public TV
By Public TV
44 minutes ago
Dinesh Gundu Rao 4
Kalaburagi

ಮೆಟ್ರೋ ದರ ಪರಿಷ್ಕರಣೆ ಕೇಂದ್ರದ ಹೊಣೆ – ತೇಜಸ್ವಿ ಸೂರ್ಯ ಗೂಬೆ ಕೂರಿಸುವುದು ಬೇಡ: ದಿನೇಶ್ ಗುಂಡೂರಾವ್

Public TV
By Public TV
56 minutes ago
crime news bhadravati police shoot rowdy sheeter leg
Crime

ಜೈಲಿನಿಂದ ಬಿಡುಗಡೆಯಾದ ಮರುದಿನವೇ ಡಕಾಯಿತಿಗೆ ಹೊಂಚು – ರೌಡಿಶೀಟರ್ ಕಾಲಿಗೆ ಗುಂಡು

Public TV
By Public TV
2 hours ago
Gruhalakshmi Scheme 1
Bengaluru City

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಜೀವಿತ ಪ್ರಮಾಣಪತ್ರ – ಕ್ರಮವಹಿಸಲು ಸಿಎಸ್‌ಗೆ ಸಿಎಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?