ಬೆಂಗಳೂರು: ಮೆಕ್ಕೆಜೋಳ (Maize) ಖರೀದಿ ಪ್ರಮಾಣವನ್ನು 50 ಕ್ವಿಂಟಾಲ್‌ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರತಿ ರೈತರಿಂದ ಖರೀದಿಸುವ ಮೆಕ್ಕೆಜೋಳದ ಗರಿಷ್ಠ ಮಿತಿಯನ್ನು 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಸರ್ಕಾರ ಹೆಚ್ಚಿಸಿದೆ. ಡಿ.2 ರಂದು ಹೊರಡಿಸಿದ್ದ ಆದೇಶಕ್ಕೆ ತಿದ್ದುಪಡಿ ಮಾಡಿ ಸರ್ಕಾರದಿಂದ ಹೊಸ ಆದೇಶ ಹೊರಡಿಸಿದೆ. ಇದನ್ನೂ ಓದಿ: ಕನಕನ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದ ಪವನ್ ಕಲ್ಯಾಣ್
ಪ್ರತಿ ಎಕರೆಗೆ 12 ಕ್ವಿಂಟಾಲ್ ಲೆಕ್ಕದಲ್ಲಿ ಗರಿಷ್ಠ 20 ಕ್ವಿಂಟಾಲ್ ಮೆಕ್ಕೆಜೋಳವನ್ನು ಮಾತ್ರ ಬೆಂಬಲ ಬೆಲೆ 2400.00 ರೂ. ಪ್ರತಿ ಕ್ವಿಂಟಾಲ್ ದರದಲ್ಲಿ ಖರೀದಿಸಲು ಈ ಹಿಂದೆ ಆದೇಶ ಹೊರಡಿಸಲಾಗಿತ್ತು. ಇದೀಗ ಈ ಮಿತಿಯನ್ನು 50 ಕ್ವಿಂಟಾಲ್‌ಗೆ ಏರಿಕೆ ಮಾಡಿ ಆದೇಶಿಸಿದೆ.
ಈ ಮೂಲಕ ಸಣ್ಣ ಮತ್ತು ಮಧ್ಯಮ ರೈತರಿಗೆ ದೊಡ್ಡ ಪ್ರಮಾಣದಲ್ಲಿ ತಮ್ಮ ಉತ್ಪನ್ನವನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡುವ ಅವಕಾಶ ಕಲ್ಪಿಸಲಾಗಿದೆ. ಎಫ್‌ಆರ್‌ಯುಐಟಿಎಸ್ ತಂತ್ರಾಂಶದಲ್ಲಿ ನೋಂದಾಯಿತವಾಗಿರುವ ರೈತರ ಜಮೀನು ವಿಸ್ತೀರ್ಣದ ಆಧಾರದ ಮೇಲೆಯೇ ಈ ಗರಿಷ್ಠ ಮಿತಿ ನಿಗದಿಪಡಿಸಲಾಗಿದೆ.
ಜೊತೆಗೆ ಡಿಸ್ಟಿಲರಿಗಳ ಸಮೀಪದಲ್ಲಿರುವ PACS (ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು) ಮೂಲಕ ಖರೀದಿಗೆ ಆದ್ಯತೆ ನೀಡಿ ತಿದ್ದುಪಡಿ ಆದೇಶ ಹೊರಡಿಸಿದೆ. ರೈತರು ಹಾಗೂ ರೈತ ಸಂಘಟನೆಗಳ ಮನವಿ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ದುಬಾರಿ ಗಿಫ್ಟ್ ತೆಗೆದುಕೊಳ್ಳೋದು ತಪ್ಪಾಗುತ್ತೆ – ಸಿಎಂ ವಾಚ್ ಬಗ್ಗೆ ಯದುವೀರ್ ಒಡೆಯರ್ ರಿಯಾಕ್ಷನ್

