Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ; ಆಡಳಿತ ಪಕ್ಷ v/s ವಿಪಕ್ಷಗಳ ಮಧ್ಯೆ ಫೈಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ; ಆಡಳಿತ ಪಕ್ಷ v/s ವಿಪಕ್ಷಗಳ ಮಧ್ಯೆ ಫೈಟ್

Belgaum

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ; ಆಡಳಿತ ಪಕ್ಷ v/s ವಿಪಕ್ಷಗಳ ಮಧ್ಯೆ ಫೈಟ್

Public TV
Last updated: December 8, 2025 7:46 am
Public TV
Share
2 Min Read
belagavi suvarna soudha
SHARE

– ಸರ್ಕಾರಕ್ಕೆ ಕುರ್ಚಿ ಕದನ ಮುಚ್ಚಿಕೊಳ್ಳುವ ಟೆನ್ಶನ್
– ವಿಪಕ್ಷಗಳಿಗೆ ಅವಿಶ್ವಾಸ ನಿರ್ಣಯ ಮಂಡಿಸುವ ಪ್ಲ್ಯಾನ್

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ (Winter Session) ಆರಂಭವಾಗಲಿದೆ. ಅಧಿವೇಶನಕ್ಕೆ ಕುಂದಾನಗರಿ ಸಜ್ಜಾಗಿದೆ. ಚಳಿಗಾಲದ ಅಧಿವೇಶನ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈ ಬಾರಿ ಬೆಳಗಾವಿ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜನೆ ಮಾಡಲಾಗಿದೆ. ಡಿಸೆಂಬರ್ 19 ವರೆಗೆ 10 ದಿನಗಳ ಕಾಲ ಅಧಿವೇಶನ ನಡೆಯಲಿದ್ದು, 21ಕ್ಕೂ ಹೆಚ್ಚು ವಿಧೇಯಕಗಳ ಮಂಡನೆ ಸಾಧ್ಯತೆ ಇದೆ.

ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ-ಜೆಡಿಎಸ್ ದೋಸ್ತಿಗಳು ಸಜ್ಜಾಗಿವೆ. ವಿಪಕ್ಷಗಳ ಅಸ್ತçಗಳನ್ನು ಎದುರಿಸಲು ಸರ್ಕಾರ ಕೂಡ ರೆಡಿಯಾಗಿದೆ. ಸಿಎಂ ಕುರ್ಚಿಗಾಗಿ ರಾಜ್ಯ ಸರ್ಕಾರದಲ್ಲಿ ಹಗ್ಗ ಜಗ್ಗಾಟ ನಡೆಯುತ್ತಿರುವ ಹಿನ್ನೆಲೆ ಅಧಿವೇಶನದಲ್ಲಿ ಅವಿಶ್ವಾಸ ನಿಲುವಳಿ ಮಂಡನೆಗೆ ವಿಪಕ್ಷ ಬಿಜೆಪಿ ಚಿಂತಿಸಿತ್ತು. ಆದರೆ, ಈಗ ತನ್ನ ನಿರ್ಧಾರದಿಂದ ಕಮಲಪಡೆ ಹಿಂದೆ ಸರಿದಿದೆ. ಇದನ್ನೂ ಓದಿ: ಏನಿದು ಸಿಮ್ ಬೈಂಡಿಂಗ್? ಇನ್ಮುಂದೆ ಮೊಬೈಲ್‌ನಿಂದ ಸಿಮ್ ತೆಗೆದ್ರೆ ವಾಟ್ಸಪ್ ಬಂದ್!

ಬದಲಾದ ರಾಜಕೀಯ ಸನ್ನಿವೇಶ, ಸರ್ಕಾರದ ವಿವಾದಾತ್ಮಕ ನಡೆಗಳು ಮತ್ತು ಉತ್ತರ ಕರ್ನಾಟಕದ ಜನರ ನಿರೀಕ್ಷೆಗಳ ಹಿನ್ನೆಲೆಯಲ್ಲಿ ಈ ಅಧಿವೇಶನ ವಿಶೇಷ ಗಮನ ಸೆಳೆಯುತ್ತಿದೆ. ಅಧಿವೇಶನದ ಮೊದಲ ದಿನದ ಕಲಾಪ ಸಂತಾಪ ಸೂಚನೆಗೆ ಮಾತ್ರ ಸೀಮಿತವಾಗಲಿದೆ. ಸಂತಾಪದ ಬಳಿಕ ಕಲಾಪವನ್ನು ಮುಂದೂಡಲು ಸ್ಪೀಕರ್ ತೀರ್ಮಾನಿಸಿದ್ದಾರೆ. ಬಿಜೆಪಿ-ಜೆಡಿಎಸ್ ಪಕ್ಷಗಳು ಈಗಾಗಲೇ ಈಗ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಿದ್ಧವಾಗಿವೆ. ಹಂತಹಂತವಾಗಿ ಮಹತ್ವದ ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ತೀವ್ರ ಒತ್ತಡಕ್ಕೆ ಸಿಲುಕಿಸುವ ಯೋಜನೆ ರೂಪಿಸಲಾಗಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳೇ ಪ್ರಮುಖ ಅಸ್ತ್ರವಾಗಲಿವೆ. ಕಳೆದ ಬೆಳಗಾವಿ ಅಧಿವೇಶನದಲ್ಲಿ ನೀಡಿದ್ದ ಭರವಸೆಗಳ ಅನುಷ್ಠಾನದ ಸ್ಥಿತಿಗತಿ ಕುರಿತು ಸರ್ಕಾರದಿಂದ ಮಾಹಿತಿ ಕೋರಲಿವೆ ಎನ್ನಲಾಗಿದೆ.

ಕಾಂಗ್ರೆಸ್ ಶಾಸಕರಲ್ಲೇ ಮುಂದುವರಿದ ಬಣಗಾರಿಕೆ, ದಿಲ್ಲಿ ಯಾತ್ರೆ, ನಾಯಕತ್ವ ಬದಲಾವಣೆ ಚರ್ಚೆ, ಬ್ರೇಕ್‌ಫಾಸ್ಟ್-ಲಂಚ್-ಡಿನ್ನರ್ ಸಭೆಗಳ ಪ್ರಸ್ತಾಪ, ಇವೆಲ್ಲವೂ ಸರ್ಕಾರಕ್ಕೆ ಮುಜುಗರ ಉಂಟು ಮಾಡಲಿವೆ. ಪ್ರತಿಪಕ್ಷಗಳು ಈ ಒಳಗಿನ ಗೊಂದಲವನ್ನೂ ಆಯುಧವಾಗಿ ಬಳಸಿಕೊಳ್ಳಲಿವೆ. ಇದನ್ನೂ ಓದಿ: ಕೆಎಸ್‌ಸಿಎ ಚುನಾವಣೆ ಫಲಿತಾಂಶ ಪ್ರಕಟ – ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

ಬೆಳಗಾವಿ ಅಧಿವೇಶನಕ್ಕೆ ಪ್ರತಿಭಟನೆಗಳ ಬಿಸಿ
ಬೆಳಗಾವಿಯ ಚಳಿಗಾಲದ ಅಧಿವೇಶನದ ಸಂದರ್ಭದಲ್ಲೇ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಮೆಕ್ಕೆಜೋಳ, ಕಬ್ಬಿನ ಬೆಲೆ ನಿಗದಿ, ಹೆಸರು ಕಾಳು ಬೆಲೆ ಕುಸಿತವಾಗಿರುವುದು ರೈತರನ್ನು ಕಂಗೆಡಿಸಿದೆ. ಕಬ್ಬು ಬೆಳೆಗಾರರ ಪ್ರತಿಭಟನೆ ತಾತ್ಕಾಲಿಕವಾಗಿ ಶಮನವಾಗಿದ್ದರೂ, ಬೇಡಿಕೆ ಇನ್ನೂ ಪೂರ್ಣವಾಗಿ ಈಡೇರಿಲ್ಲ. ಹೀಗಾಗಿ, ಬಾಗಲಕೋಟೆ ಹಾಗೂ ಇತರ ಜಿಲ್ಲೆಗಳ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳ ನೇಮಕಾತಿಗಾಗಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಇತ್ತೀಚೆಗೆ ಉದ್ಯೋಗ ಆಕಾಂಕ್ಷಿಗಳು ಹುಬ್ಬಳ್ಳಿ ಧಾರವಾಡದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದರು. ಅದರ ಪರಿಣಾಮ ಮತ್ತೆ ಬೆಳಗಾವಿಯಲ್ಲೂ ಪ್ರತಿಭಟನೆಯಾಗುವ ಸಾಧ್ಯತೆ ಇದೆ. ಇನ್ನು ಒಳಮೀಸಲಾತಿಯ ಗೊಂದಲಗಳು ಇನ್ನೂ ಜೀವಂತವಾಗಿವೆ. ಹೀಗಾಗಿ, ಕೆಲವು ಪರಿಶಿಷ್ಟ ಸಮುದಾಯದ ಸಂಘಟನೆಗಳ ಪ್ರತಿಭಟನೆಯೂ ನಡೆಯುವ ಸಾಧ್ಯತೆ ಇದೆ. ಅಂಗನವಾಡಿ ನೌಕರರು, ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯಿತಿಗಳ ದಿನಗೂಲಿ ನೌಕರರು ವೇತನ ಪರಿಷ್ಕರಣೆ ವೇತನ ಪಾವತಿಯಂತಹ ಸಮಸ್ಯೆಗಳಿಗಾಗಿ ಪ್ರತಿಭಟನೆ ನಡೆಸೋ ಸಾಧ್ಯತೆ ಇದೆ. ಇನ್ನು ಮಹಾರಾಷ್ಟ್ರ ಬೆಂಬಲಿತ ಸಂಘಟನೆಗಳು ಮತ್ತೊಮ್ಮೆ ತಗಾದೆ ತೆಗೆಯುವ ಆತಂಕವೂ ಇದೆ.

TAGGED:belagavi sessionbjpcongressjdssessionಕಾಂಗ್ರೆಸ್ಜೆಡಿಎಸ್ಬಿಜೆಪಿಬೆಳಗಾವಿ ಅಧಿವೇಶನ
Share This Article
Facebook Whatsapp Whatsapp Telegram

Cinema news

Actress Yamuna Srinidhi becomes the villain of Yajamana
ಯಜಮಾನನಿಗೆ ವಿಲನ್ ಆದ ನಟಿ ಯಮುನಾ ಶ್ರೀನಿಧಿ
Cinema Latest TV Shows
Landlord Movie Raj B Shetty
ಲ್ಯಾಂಡ್ ಲಾರ್ಡ್ : ರಾಜ್ ಬಿ ಶೆಟ್ಟಿ ಪರಿಚಯದ ದಿ ರೂಲರ್
Cinema Latest Sandalwood Top Stories
The song Taye Taye from the movie Peter has been released
ಹಾಡಲ್ಲಿ ತಾಯಿ ಮಗನ ಬಾಂಧವ್ಯ ಹೇಳಿದ ಪೀಟರ್
Cinema Latest Sandalwood South cinema Top Stories
Theertharoopa Thandeyavarige
ತೀರ್ಥರೂಪ ತಂದೆಯವರಿಗೆ: ಭಾವನಾತ್ಮಕ ಕಥೆ ಹೇಳಿದ ನಿರ್ದೇಶಕ ಜಗನ್ನಾಥ್
Cinema Latest Sandalwood Top Stories

You Might Also Like

ram mohan naidu 2
Latest

ಯಾವ ವಿಮಾನಯಾನ ಸಂಸ್ಥೆಯೂ ಕಾನೂನಿಗಿಂತ ದೊಡ್ಡದಲ್ಲ: ರಾಮ್‌ಮೋಹನ್ ನಾಯ್ಡು

Public TV
By Public TV
12 minutes ago
DK Shivakumar
Belgaum

ಘನತ್ಯಾಜ್ಯ ನಿರ್ವಹಣೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹುಳ – ಡಿಸಿಎಂ ಸುಳಿವು

Public TV
By Public TV
23 minutes ago
tirupati shirdi express
Latest

ತಿರುಪತಿ-ಶಿರಡಿ ಎಕ್ಸ್‌ಪ್ರೆಸ್‌ಗೆ ಸಚಿವ ಸೋಮಣ್ಣ ಚಾಲನೆ

Public TV
By Public TV
44 minutes ago
Karnataka Legislatiev Assembly
Belgaum

ಮುಂದಿನ ಸಿಎಂ ಯಾರು? – ವಿಧಾನಸಭೆಯಲ್ಲೂ ಕೂಗು, ವಿಪಕ್ಷ ಸದಸ್ಯರಿಂದ ತಿವಿತ

Public TV
By Public TV
52 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ: 09-12-2025

Public TV
By Public TV
1 hour ago
namma metro
Bengaluru City

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಮೆಟ್ರೋಗೆ ಬರ್ತಿವೆ 96 ರೈಲು, 516 ಹೊಸ ಕೋಚ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?