Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡ್ರಗ್‌ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ: ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಡ್ರಗ್‌ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ: ಪರಮೇಶ್ವರ್

Belgaum

ಡ್ರಗ್‌ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ: ಪರಮೇಶ್ವರ್

Public TV
Last updated: December 11, 2025 5:21 pm
Public TV
Share
2 Min Read
G Paremeshwar
SHARE

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ಕಂಟ್ರೋಲ್ ಆಗುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ ಎಂದು ಗೃಹ ಸಚಿವ ಪರಮೇಶ್ವರ್ (Paremshwar) ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ (Congress) ಸದಸ್ಯ ಅಬ್ದುಲ್ ಜಬ್ಬರ್ ಪ್ರಶ್ನೆಗೆ ಉತ್ತರ ನೀಡಿದ ಅವರು, ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಅವುಗಳ ಬಳಕೆ ಜಾಗತಿಕವಾಗಿ ದಿನೇ ದಿನೇ ಹೆಚ್ಚುತ್ತಿದೆ. ಮಾದಕ ವಸ್ತುಗಳ ಮಾರಾಟವು ಮಾರಾಟಗಾರರಿಗೆ ಅತೀ ಹೆಚ್ಚಿನ ಲಾಭಾಂಶ ತರುವ ಉದ್ಯಮವಾಗಿ ಪರಿವರ್ತನೆಯಾಗಿದೆ. ಅತೀ ಹೆಚ್ಚಿನ ಲಾಭಕ್ಕಾಗಿ ಅಂತರ್ ರಾಜ್ಯ/ ಅಂತರ್ ರಾಷ್ಟ್ರೀಯ ಜಾಲಗಳು ಕಾರ್ಯನಿರ್ವಹಿಸುತ್ತಿವೆ. ಈ ಜಾಲಗಳು ಜಗತ್ತಿನಾದ್ಯಾಂತ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಸಕ್ರಿಯವಾಗಿರುವುದರಿಂದ ಈ ಡಗ್ಸ್ ಸಮಸ್ಯೆಯು ಸಾರ್ವತ್ರಿಕವಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ತಡೆಗಟ್ಟಲು ರಾಜ್ಯ ಸರ್ಕಾರವು ನಾನಾ ಕ್ರಮ ತೆಗೆದುಕೊಂಡಿದೆ ಎಂದಿದ್ದಾರೆ.ಇದನ್ನೂ ಓದಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಪರಮೇಶ್ವರ್

ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ಎದುರಿಸಲು ಹಾಗೂ ತಡೆಗಟ್ಟಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ಎ.ಎನ್.ಟಿ.ಎಫ್) ಪಡೆಯನ್ನು ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವ ಕುರಿತು ಡ್ರಗ್ಸ್ ಹಾವಳಿಯನ್ನು ಪೂರ್ಣವಾಗಿ ತಡೆಗಟ್ಟಲು ಗಾಂಜಾ ಬೆಳೆಯನ್ನು ಬೆಳೆಯುವುದು, ಮಾರಾಟ ಮಾಡುವುದು ಕಾನೂನಾತ್ಮಕ ಅಪರಾಧವಾಗಿರುತ್ತದೆ. ಗಾಂಜಾ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಅದರಿಂದಾಗುವ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಹೇಳಿದ್ದಾರೆ.

ಮಾದಕ ದ್ರವ್ಯಗಳ ಅಕ್ರಮ ಸಾಗಾಟ ಮತ್ತು ಜಾಲದ ಕುರಿತು ಸ್ಥಳೀಯ ಬಾತ್ಮೀದಾರರು, ಅಪರಾಧ ವಿಭಾಗದ ಸಿಬ್ಬಂದಿ ಹಾಗೂ ಬೀಟ್ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಸಾಗಾಟದ ಬಗ್ಗೆ ವಿಶೇಷವಾಗಿ ಮಾಹಿತಿಯನ್ನು ಸಂಗ್ರಹಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರತಿ ತಿಂಗಳು ಶಾಲಾ-ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ, ಮಾದಕ ವಸ್ತುಗಳ ಸೇವನೆಯಿಂದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ.

ಸಂಶಯಾಸ್ಪದ ಹೈಸೆಕ್ಯುರಿಟಿ ಸ್ಥಳಗಳಲ್ಲಿ ಬಿಗಿ ನಿಗಾವಣೆ ಇಡಲಾಗಿದೆ. ಪಾರ್ಸಲ್ ಸರ್ವೀಸ್, ಕೋರಿಯರ್ ಸೆಂಟರ್, ರೆಸಾರ್ಟ್/ಫಾರ್ಮ್ ಹೌಸ್‌ಗಳಿಗೆ ದಿಢೀರ್ ಭೇಟಿ ಕೈಗೊಂಡು ನಗರದ ಹೊರವಲಯಗಳಲ್ಲಿ ಡ್ರಗ್ಸ್ ಪಾರ್ಟಿಗಳನ್ನು ತಡೆಗಟ್ಟುವ ಬಗ್ಗೆ ವಿಶೇಷ ಪೆಟ್ರೋಲಿಂಗ್ ನಡೆಸಲಾಗಿರುತ್ತದೆ. ಪ್ರತಿ ಮಾಹೆಯಲ್ಲಿ ಜಿಲ್ಲಾಮಟ್ಟದ ಎನ್‌ಸಿಒಆರ್‌ಡಿ ಸಭೆಗಳನ್ನು ನಡೆಸಲು ಎಲ್ಲಾ ಘಟಕಾಧಿಕಾರಿಗಳಿಗೆ ತಿಳಿಸಲಾಗಿರುತ್ತದೆ. ಪ್ರತಿ ವರ್ಷ ಜೂನ್ 26ರಂದು ಮಾದಕ ವಸ್ತುಗಳ ನಿಗ್ರಹ ದಿನವನ್ನು ಆಚರಣೆ ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮಾದಕ ವಸ್ತು ಮಾರಾಟ, ಉತ್ಪಾದನೆ ಬಗ್ಗೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ವಿ.ಸಿ ಮೂಲಕವು ಸಹ ಎಲ್ಲ ಘಟಕಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಸರ್ಕಾರಿ ಇಲಾಖೆಯಲ್ಲಿ ಖಾಲಿಯಿರುವ 2.88 ಲಕ್ಷ ಹುದ್ದೆ ಭರ್ತಿಗೆ ಕ್ರಮ – ಸಿದ್ದರಾಮಯ್ಯ

 

TAGGED:belagavicongressparameshwarಕಾಂಗ್ರೆಸ್ಜಿ.ಪರಮೇಶ್ವರ್ಬೆಳಗಾವಿಮಾದಕ ವಸ್ತುವಿಧಾನ ಪರಿಷತ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
4 hours ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
5 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
5 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
5 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
6 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?