Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್‌ಗೆ ಯತ್ನ – ಎಂ.ಬಿ.ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್‌ಗೆ ಯತ್ನ – ಎಂ.ಬಿ.ಪಾಟೀಲ್

Belgaum

ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್‌ಗೆ ಯತ್ನ – ಎಂ.ಬಿ.ಪಾಟೀಲ್

Public TV
Last updated: December 12, 2025 7:18 pm
Public TV
Share
2 Min Read
MB Patil
SHARE

ಬೆಳಗಾವಿ: ವಿಜಯಪುರ, ಧಾರವಾಡ, ಬೆಳಗಾವಿ ಒಳಗೊಂಡಂತೆ ಉತ್ತರ ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ನಿರ್ಮಾಣಕ್ಕೆ ಸರ್ಕಾರ ಪ್ರಯತ್ನ ನಡೆಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ (M B Patil) ಅವರು ಹೇಳಿದರು.

ಬೆಳಗಾವಿಯ (Belagavi) ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶುಕ್ರವಾರ (ಡಿ.12) ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು ಮಾತನಾಡಿದರು. ದೇಶದ ಏರೋಸ್ಪೇಸ್ ಹಾಗೂ ಡಿಫೆನ್ಸ್ ಕ್ಷೇತ್ರಕ್ಕೆ ನಮ್ಮ ರಾಜ್ಯ ಶೇ.65ರಷ್ಟು ಕೊಡುಗೆ ನೀಡುತ್ತಿದೆ. ನಮ್ಮ ರಾಜ್ಯವನ್ನು ಎಕೋ ಸ್ಪೇಸ್‌ನಲ್ಲಿಯೂ ಮುಂಚೂಣಿ ರಾಜ್ಯವನ್ನಾಗಿ ಪರಿಗಣಿಸಲಾಗಿದೆ. ಬೆಳಗಾವಿ, ವಿಜಯಪುರ, ಧಾರವಾಡ ಒಳಗೊಂಡ ಪ್ರದೇಶದಲ್ಲಿ ಬಹುಮುಖ್ಯವಾದ ಡಿಫೆನ್ಸ್ ಕಾರಿಡಾರ್ ನಿರ್ಮಾಣಕ್ಕಾಗಿ ಮುಖ್ಯಮಂತ್ರಿಗಳು ಹಾಗೂ ನಾವು ನಿಯೋಗದೊಂದಿಗೆ ತೆರಳಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದೆವು. ಡಿಫೆನ್ಸ್ ಕಾರಿಡಾರ್ ನಿರ್ಮಾಣಕ್ಕಾಗಿ ಬೇಡಿಕೆ ಸಲ್ಲಿಸಲಾಗಿದ್ದು, ಅವರೂ ಕೂಡ ಈ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ವಪಕ್ಷ ಶಾಸಕರುಗಳು ಬೆಂಬಲವಾಗಿ ನಿಂತು, ಈ ಯೋಜನೆ ಸಾಕಾರಗೊಳಿಸಬೇಕಿದೆ ಎಂದರು.ಇದನ್ನೂ ಓದಿ: ಸದನದಲ್ಲಿ ʻಗೃಹಲಕ್ಷ್ಮಿʼ ಕದನ – ಲಕ್ಷ್ಮಿ ಹೆಬ್ಬಾಳ್ಕರ್‌ ಸದನದ ಗೌರವ ಕಳೆದ್ರು: ಆರ್‌.ಅಶೋಕ್‌ ಕಿಡಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದ ಏರೋಸ್ಪೇಸ್ ಪಾರ್ಕ್ ನಿರ್ಮಾಣ ಸಂಬಂಧಿಸಿದಂತೆ, 13 ಗ್ರಾಮಗಳಿಂದ 1,777 ಎಕರೆ ಭೂಮಿಯನ್ನು ಭೂಸ್ವಾಧೀನ ಮಾಡಿಕೊಳ್ಳುವ ಪ್ರಕ್ರಿಯೆಯಿಂದ ಕೈಬಿಡಲು ನಿರ್ಧರಿಸಿದ್ದೇವೆ. ಈ ಸಂಬಂಧ ಕಳೆದ ಡಿ.06ರಂದು ಅಧಿಸೂಚನೆ ಹೊರಡಿಸಿದ್ದೇವೆ. ಈ ಸಂಪೂರ್ಣ ಪ್ರದೇಶವನ್ನು ಹಸಿರು ವಲಯವನ್ನಾಗಿ ಮುಂದುವರೆಸುವ ಸಲುವಾಗಿ ವಿಶೇಷ ಕೃಷಿ ವಲಯ ಎಂದು ಘೋಷಿಸಲಾಗಿದೆ ಎಂದು ತಿಳಿಸಿದರು.

ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ ಮೆ: ಏಕಸ್ ಎಸ್.ಇ.ಝೆಡ್ ಪ್ರೈ.ಲಿ ಅವರು ಏರೋಸ್ಪೇಸ್ ಕಾಂಪೋನೆಂಟ್‌ಗಳ ಎಸ್.ಇ.ಝೆಡ್ ಸ್ಥಾಪಿಸಿದ್ದು, ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಏರೋಸ್ಪೇಸ್ ಕಾಂಪೋನೆಂಟ್‌ಗಳ ತಯಾರಿಕೆಯಲ್ಲಿ ಎಕೋ ಸಿಸ್ಟಂ ಅಭಿವೃದ್ಧಿಯಾಗಿದೆ. ಜಿಲ್ಲೆಯಲ್ಲಿ ಈ ವಲಯದಲ್ಲಿ ಬಂಡವಾಳ ಆಕರ್ಷಿಸಲು ವಿಪುಲ ಅವಕಾಶಗಳಿವೆ. ಬೆಂಗಳೂರು-ಮುಂಬೈ ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಅಂದಾಜು 3 ಸಾವಿರ ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಪಡಿಸುತ್ತಿದ್ದೇವೆ. ಈ ಪ್ರದೇಶದಲ್ಲಿ ಏರೋಸ್ಪೇಸ್ ಕಾಂಪೋನೆಂಟ್‌ಗಳ ತಯಾರಿಕಾ ಘಟಕಗಳಿಗೆ ಅಗತ್ಯ ಭೂಮಿ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ. ಇದರ ಜೊತೆಗೆ ಇದೇ ರೀತಿ ಉತ್ತರ ಕರ್ನಾಟಕದಲ್ಲಿ ಏರೋಸ್ಪೇಸ್ ಕಾಂಪೋನೆಂಟ್ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಮುಂದೆ ಬರುವವರಿಗೆ ಅಗತ್ಯ ಬೆಂಬಲ ಹಾಗೂ ಆಕರ್ಷಕ ರಿಯಾಯಿತಿ ಮತ್ತು ಪ್ರೋತ್ಸಾಹ ಒದಗಿಸಲು ನಾವು ಸಿದ್ಧರಿದ್ದೇವೆ. ಹೊಸ ಕೈಗಾರಿಕಾ ನೀತಿಯಡಿ ನಂಜುಂಡಪ್ಪ ವರದಿಯಲ್ಲಿ ಅತೀ ಹಿಂದುಳಿದ ತಾಲೂಕುಗಳು ಎಂದು ಘೋಷಿಸಲಾಗಿರುವ ಪ್ರದೇಶಗಳಲ್ಲಿ ಕೈಗಾರಿಕೆ ಸ್ಥಾಪಿಸ ಬಯಸುವವರಿಗೆ ಪ್ರೋತ್ಸಾಹ ಜೊತೆಗೆ ಹೆಚ್ಚುವರಿಯಾಗಿ ಶೇ.3 ರಿಂದ 5ರಷ್ಟು ವಿಶೇಷ ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.ಇದನ್ನೂ ಓದಿ: ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗೆ DBT ಮೂಲಕ ಸಂಬಳ ಪಾವತಿ – ಸಂತೋಷ್ ಲಾಡ್

TAGGED:belagaviDefence CorridorMB Patilnorth karnatakaಉತ್ತರ ಕರ್ನಾಟಕಎಂ.ಬಿ.ಪಾಟೀಲ್ಡಿಫೆನ್ಸ್‌ ಕಾರಿಡಾರ್‌ಬೆಳಗಾವಿ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

Iran Israel America War Iran cheap drones High Impact
Latest

ಅಮೆರಿಕದ ದುಬಾರಿ ಶಸ್ತ್ರಾಸ್ತ್ರಗಳಿಗೆ ಇರಾನ್‌ನ ಅಗ್ಗದ ಡ್ರೋನ್‌ಗಳ ಸವಾಲು

Public TV
By Public TV
10 minutes ago
Andhra Pradesh Chittoor Accident
Crime

ಕಂಟೇನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಬೆಂಗಳೂರು ಮೂಲದ ಐವರು ದುರ್ಮರಣ

Public TV
By Public TV
17 minutes ago
Puneet MANGALURU
Crime

ಕಾಲ್, ಮೆಸೇಜ್‍ಗೆ ಪ್ರೇಯಸಿಯಿಂದ ನೋ ರಿಪ್ಲೈ – ಸೋಮೇಶ್ವರದ ಯುವಕ ಒಮನ್‍ನಲ್ಲಿ ಆತ್ಮಹತ್ಯೆ

Public TV
By Public TV
53 minutes ago
Donald Trump 2
Latest

ಹಾರ್ಮೂಜ್‌ ಬಿಕ್ಕಟ್ಟಿನ ಬಗ್ಗೆ ದೊಡ್ಡ ನಿರ್ಧಾರ – ತೈಲ ಟ್ಯಾಂಕರ್‌ಗಳಿಗೆ ರಕ್ಷಣೆ ನೀಡುವಂತೆ ಟ್ರಂಪ್‌ ಆದೇಶ

Public TV
By Public TV
2 hours ago
Madhu Bangarappa Birthday free flights for civil servants government school children
Districts

ಸಚಿವ ಮಧು ಬಂಗಾರಪ್ಪ ಜನ್ಮದಿನ – ಪೌರಕಾರ್ಮಿಕರು, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ವಿಮಾನಯಾನ

Public TV
By Public TV
2 hours ago
Udupi Malpe Fishermen Leader Stabbed
Crime

ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಮಲ್ಪೆ ಮೀನುಗಾರರ ಮುಖಂಡನಿಗೆ ಚಾಕು ಇರಿತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?