Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಎಂಬಿ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಎಂಬಿ ಪಾಟೀಲ್

Bengaluru City

ಮಂಗಳೂರು, ವಿಜಯಪುರದಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ: ಎಂಬಿ ಪಾಟೀಲ್

Public TV
Last updated: December 13, 2025 9:43 pm
Public TV
Share
2 Min Read
MB Patil
SHARE

ಬೆಂಗಳೂರು: ಪ್ಲಾಸ್ಟಿಕ್ ಉದ್ಯಮ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ಮಂಗಳೂರು ಮತ್ತು ವಿಜಯಪುರ (Vijayapura) ಜಿಲ್ಲೆಯ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ 200 ಎಕರೆಯಲ್ಲಿ ಸುಸಜ್ಜಿತ `ಪ್ಲಾಸ್ಟಿಕ್ ಪಾರ್ಕ್’ (Plastic Park) ಸ್ಥಾಪಿಸಲಿದೆ. ಉದ್ಯಮಿಗಳು ತಮಗೆ ಎಲ್ಲಿ ಬೇಕೋ ಅಲ್ಲಿ ಅರ್ಜಿ ಹಾಕಿಕೊಳ್ಳಬಹುದು. ಸರ್ಕಾರ ತ್ವರಿತವಾಗಿ ಭೂಮಿ ಕೊಡುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ (MB Patil) ಹೇಳಿದ್ದಾರೆ.

ಶನಿವಾರ ಇಲ್ಲಿ ನಡೆದ ಪ್ಲಾಸ್ಟ್ ಇಂಡಿಯಾ-2026 ಪ್ರದರ್ಶನ ಮೇಳದ ಪೂರ್ವಭಾವಿ ಉದ್ಘಾಟನಾ ಸಮಾವೇಶದಲ್ಲಿ ಅವರು ಪಾಲ್ಗೊಂಡಿದ್ದರು. ಕರ್ನಾಟಕದ ಪ್ಲಾಸ್ಟಿಕ್ ಉದ್ಯಮಿಗಳಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 12ನೇ ವರ್ಷದ ಈ ಅಂತಾರಾಷ್ಟ್ರೀಯ ಸಮಾವೇಶವು ಮುಂದಿನ ವರ್ಷ ಫೆ.5ರಿಂದ 10ರವರೆಗೆ ದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿದೆ. ಇದನ್ನೂ ಓದಿ: ತಿರುವನಂತಪುರಂ ಪಾಲಿಕೆಯಲ್ಲಿ ಬಿಜೆಪಿ ಕಮಾಲ್ – ಗ್ರಾಪಂ, ಬ್ಲಾಕ್‌, ಪುರಸಭೆಯಲ್ಲಿ ಯುಡಿಎಫ್‌ ಮೈತ್ರಿಕೂಟಕ್ಕೆ ದೊಡ್ಡ ಜಯ

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ವಲಯಕ್ಕೆ ಬೇಕಾದ ಪ್ರತಿಭಾವಂತ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಸಂಶೋಧನೆಗಾಗಿ ಕೇಂದ್ರೀಯ ಪೆಟ್ರೋಕೆಮಿಕಲ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯು (ಸಿಐಪಿಇಟಿ) ಇಲ್ಲಿ ತನ್ನ ಕ್ಯಾಂಪಸ್ ತೆರೆಯಲಿದೆ ಎಂದೂ ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ?: ವಿಜಯೇಂದ್ರ

ದೇಶದಲ್ಲಿ ಪ್ಲಾಸ್ಟಿಕ್ ಉದ್ಯಮವು 40 ಲಕ್ಷ ಜನರಿಗೆ ಉದ್ಯೋಗ ನೀಡಿದೆ. ಮುಂದಿನ ಒಂದು ವರ್ಷದಲ್ಲಿ ಇನ್ನೂ 15 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ರಾಜ್ಯದಲ್ಲಿ ಹೂಡಿಕೆದಾರರಿಗೆ ಆದ್ಯತೆ ಇದ್ದು, ಸಮಗ್ರ ಕೈಗಾರಿಕಾ ಬೆಳವಣಿಗೆಯ ಗುರಿ ಇಟ್ಟುಕೊಳ್ಳಲಾಗಿದೆ. ಪ್ಲಾಸ್ಟಿಕ್ ಲೋಹವು ಜೀವನದ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಗುಣಮಟ್ಟದ ಉತ್ಪನ್ನಗಳ ತಯಾರಿಕೆಗೆ ಆದ್ಯತೆ ಕೊಡಬೇಕಾಗಿದೆ. ರಾಷ್ಟ್ರ ಮಟ್ಟದಲ್ಲಿ ಈ ವಲಯದ ವಹಿವಾಟು 2026ರಲ್ಲಿ ವಾರ್ಷಿಕವಾಗಿ 50 ಬಿಲಿಯನ್ ಡಾಲರ್ ಮುಟ್ಟುವುದು ನಿಚ್ಚಳವಾಗಿದೆ’ ಎಂದರು. ಇದನ್ನೂ ಓದಿ: ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ – ಆಯೋಜಕ ಸತಾದೃ ದತ್ತಾ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಹತ್ತು ವರ್ಷಗಳ ಹಿಂದೆ ಪ್ಲಾಸ್ಟಿಕ್ ಉದ್ಯಮದ ವಹಿವಾಟು 15 ಬಿಲಿಯನ್ ಡಾಲರ್ ಇತ್ತು. ಈಗ ಇದು 37 ಬಿಲಿಯನ್ ಡಾಲರ್ ಮಟ್ಟಕ್ಕೆ ಬೆಳೆದಿದೆ. ಇದು ಪ್ರವರ್ಧಮಾನಕ್ಕೆ ಬರುತ್ತಿರುವ ಕೈಗಾರಿಕಾ ವಲಯವಾಗಿದ್ದು, ನಮ್ಮ ದೇಶದ ಜಿಡಿಪಿಗೆ ಶೇಕಡ 1.5ರಷ್ಟು ಕೊಡುಗೆ ನೀಡುತ್ತಿದೆ. ರಾಜ್ಯ ಸರ್ಕಾರ ಕೂಡ ಈ ವಲಯದಲ್ಲಿ ಹೂಡಿಕೆಯನ್ನು ಸ್ವಾಗತಿಸಲಿದ್ದು, ಸಂಪೂರ್ಣ ಬೆಂಬಲ ಕೊಡಲಿದೆ ಎಂದು ಅವರು ಭರವಸೆ ನೀಡಿದರು. ಇದನ್ನೂ ಓದಿ: ಪಾಕಿಸ್ತಾನ ಪರ ಸ್ಪೈ – ವಾಯುಪಡೆಯ ನಿವೃತ್ತ ಅಧಿಕಾರಿ ಅಸ್ಸಾಂನಲ್ಲಿ ಬಂಧನ

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಪಾಸ್ಟ್ ಇಂಡಿಯಾ ಫೌಂಡೇಶನ್ ಅಧ್ಯಕ್ಷ ರವೀಶ್ ಕಾಮತ್, ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಮುಖ್ಯಸ್ಥ ಅಲೋಕ್ ಟೈಬರ್ವಾಲಾ ಮಾತನಾಡಿದರು. ಕಾರ್ಯಕ್ರಮದಲ್ಲಿ ಪ್ಲಾಸ್ಟ್ ಇಂಡಿಯಾ ಫೌಂಡೇಷನ್ ಸಂಘಟನೆಯ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷ ಪ್ರದೀಪ್ ರಾಥೋಡ್ ಉಪಸ್ಥಿತರಿದ್ದರು. ಇದನ್ನೂ ಓದಿ: ದೆಹಲಿಯತ್ತ ಮುಖ ಮಾಡಿದ ‘ಕೈ’ ನಾಯಕರು – ಸಮಾವೇಶ ನೆಪದಲ್ಲೇ ಹೈಕಮಾಂಡ್ ಭೇಟಿ ಮಾಡ್ತಾರಾ?

TAGGED:bengaluruMangaluruMB PatilPlastic Parkvijayapuraಎಂಬಿ ಪಾಟೀಲ್ಪ್ಲಾಸ್ಟಿಕ್ ಪಾರ್ಕ್ಬೆಂಗಳೂರುಮಂಗಳೂರುವಿಜಯಪುರ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
20 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
41 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
42 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
47 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
52 minutes ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?