Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗ್ಗೆವರೆಗೆ ಪಟ್ಟ ಸಿಗುತ್ತೆ ಅನ್ನೋದು ಗೊತ್ತೇ ಇರಲಿಲ್ಲ – ಬಿಜೆಪಿ ಕಾರ್ಯಾಧ್ಯಕ್ಷ ನಿತಿನ್‌ ನಬಿನ್‌ ಯಾರು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬೆಳಗ್ಗೆವರೆಗೆ ಪಟ್ಟ ಸಿಗುತ್ತೆ ಅನ್ನೋದು ಗೊತ್ತೇ ಇರಲಿಲ್ಲ – ಬಿಜೆಪಿ ಕಾರ್ಯಾಧ್ಯಕ್ಷ ನಿತಿನ್‌ ನಬಿನ್‌ ಯಾರು?

Latest

ಬೆಳಗ್ಗೆವರೆಗೆ ಪಟ್ಟ ಸಿಗುತ್ತೆ ಅನ್ನೋದು ಗೊತ್ತೇ ಇರಲಿಲ್ಲ – ಬಿಜೆಪಿ ಕಾರ್ಯಾಧ್ಯಕ್ಷ ನಿತಿನ್‌ ನಬಿನ್‌ ಯಾರು?

Public TV
Last updated: December 15, 2025 1:06 pm
Public TV
Share
3 Min Read
Nitin Nabin 1
SHARE

– ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿದ್ದಾಗ ಘೋಷಣೆ
– ವಾರಕ್ಕೆ ನಾಲ್ಕು ದಿನ ಛತ್ತೀಸ್‌ಗಢಗೆ ಬರುತ್ತಿದ್ದ ನಿತಿನ್‌

ನವದೆಹಲಿ: ಅಚ್ಚರಿಯ ನಿರ್ಧಾರಗಳನ್ನು ಕೈಗೊಳ್ಳುವಲ್ಲಿ ಹೆಸರುವಾಸಿಯಾಗಿರುವ ಬಿಜೆಪಿ ಹೈಕಮಾಂಡ್‌ (BJP High Command) ಈಗ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು ಬಿಜೆಪಿಯ ಕಾರ್ಯಾಧ್ಯಕ್ಷರನ್ನಾಗಿ ಬಿಹಾರದ ಸಚಿವ ನಿತಿನ್ ನಬಿನ್ (Nitin Nabin) ಅವರನ್ನು ಆಯ್ಕೆ ಮಾಡಿದೆ.

45 ವರ್ಷ ನಿತಿನ್ ನಬಿನ್ ಅತ್ಯಂತ ಕಿರಿಯ ಬಿಜೆಪಿ ಕಾರ್ಯಾಧ್ಯಕ್ಷರಾಗಿದ್ದಾರೆ. ಭವಿಷ್ಯದಲ್ಲಿ ಯುವ ನಾಯಕರಿಗೆ ಮಹತ್ವದ ಜವಾಬ್ದಾರಿ ನೀಡುವ ಬಿಜೆಪಿಯ ಕಾರ್ಯತಂತ್ರದ ಭಾಗವಾಗಿ ಈ ಹುದ್ದೆಯನ್ನು ನೀಡಲಾಗಿದೆ ಎಂದು ವಿಶ್ಲೇಷಿಸಲಾಗುತ್ತದೆ. ಬಿಜೆಪಿಯೊಳಗೆ ನಬಿನ್ ಜೊತೆ ನಿಕಟವಾಗಿ ಕೆಲಸ ಮಾಡಿದವರು ಅವರನ್ನು ಕಠಿಣ ಪರಿಶ್ರಮಿ, ರಾಜಕೀಯವಾಗಿ ಕುತೂಹಲಿ ಎಂದು ಬಣ್ಣಿಸಿದ್ದಾರೆ.

ನಿತಿನ್‌ ಅವರ ತಂದೆ ಜನಸಂಘದ ಮಾಜಿ ಸದಸ್ಯ, ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಸುಮಾರು 2 ದಶಕಗಳ ರಾಜಕೀಯ ಅನುಭವ ಹೊಂದಿರುವ ಇವರು ಐದು ಬಾರಿ ಬಂಕಿಪುರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ ಮತ್ತು ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದಾರೆ. ಬಿಹಾರ ಮತ್ತು ಪೂರ್ವ ಭಾರತದಿಂದ ಆಯ್ಕೆಯಾದ ಮೊದಲ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಇವರಾಗಿದ್ದು ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಇವರನ್ನು ಅಧ್ಯಕ್ಷರನ್ನಾಗಿ ಅನುಮೋದಿಸುವ ಸಾಧ್ಯತೆಯಿದೆ.

ಛತ್ತೀಸ್‌ಗಢದ ಉಸ್ತುವಾರಿಯಾಗಿದ್ದ ಇವರು ಅಲ್ಲಿ ಪಕ್ಷವನ್ನು ಆಡಳಿತಕ್ಕೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಇವರ ಕೆಲಸವನ್ನು ಗುರುತಿಸಿದ ಬಳಿಕ ಇವರಿಗೆ ದೆಹಲಿ ಚುನಾವಣೆಯ ಪ್ರಚಾರದಲ್ಲಿ ಪ್ರಮುಖ ಪಾತ್ರ ನೀಡಲಾಗಿತ್ತು.

VIDEO | Patna: Newly appointed BJP National Working President Nitin Nabin says, “The party has always given opportunities to the youth and supported them by entrusting such responsibilities. Party workers must work patiently for the organisation, as the BJP is the only party… pic.twitter.com/PktdsfUm8B

— Press Trust of India (@PTI_News) December 15, 2025

ಪಕ್ಷದ ಶಿಸ್ತಿನ ಸಿಪಾಯಿ ಆಗಿರುವ ನಿತಿನ್‌ ಎಂದಿಗೂ ಪಕ್ಷ ಹಾಕಿದ ಗೆರೆಯನ್ನು ದಾಟುವುದಿಲ್ಲ ಎಂಬ ಅಭಿಪ್ರಾಯ ಪಕ್ಷದಲ್ಲಿದೆ. ಉತ್ತಮ ಸಂವಹನ ಕಲೆಯ ಜೊತೆ ಸಂಘಟನಾ ಚಾತುರ್ಯ ಇವರಿಗಿದೆ. ಕೊಟ್ಟ ಜವಾಬ್ದಾರಿಯನ್ನು ಯಶಸ್ವಿಯಾಗಿ ಮುಗಿಸಿ ಉತ್ತಮ ಫಲಿತಾಂಶ ತಂದುಕೊಟ್ಟುವ ಹೆಗ್ಗಳಿಕೆಯಿದೆ. ಎಲ್ಲರನ್ನು ಅದರಲ್ಲೂ ಮುಖ್ಯವಾಗಿ ಪಕ್ಷದ ಹಿರಿಯರನ್ನು ಜೊತೆಯಾಗಿ ನಿತಿನ್‌ ಕರೆದುಕೊಂಡು ಹೋಗುತ್ತಾರೆ ಎಂಬ ಭಾವನೆ ಪಕ್ಷದೊಳಗಿದೆ.

ನಿತಿನ್ ನಬಿನ್ ಬಿಹಾರದ ಕಾಯಸ್ಥ ಸಮುದಾಯದಿಂದ ಬಂದಿದ್ದಾರೆ. ಬಿಹಾರದಲ್ಲಿ ಕಾಯಸ್ಥ ಮೇಲ್ವರ್ಗದ ಜಾತಿ ಎಂದು ಪರಿಗಣಿಸಿದರೂ ಇತರ ಜಾತಿಗಳ ಜೊತೆ ಸಂಘರ್ಷದಲ್ಲಿ ಇಲ್ಲ. ಬಿಹಾರ ಚುನಾವಣಾ ಸಮಯದಲ್ಲಿ ಗೃಹ ಸಚಿವ ಅಮಿತ್‌ ಶಾ ನಿತಿನ್ ಮನೆಗೆ ಭೇಟಿ ನೀಡಿ ಅವರ ಸಂಘಟನಾ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಿಹಾರ ಚುನಾವಣೆಗೆ ಮೊದಲು ಜೀವಿಕಾ ದೀದಿ ಜಾಲವನ್ನು ಸಜ್ಜುಗೊಳಿಸುವ ಜವಾಬ್ದಾರಿಯನ್ನು ನಬಿನ್ ಅವರಿಗೆ ವಹಿಸಲಾಗಿತ್ತು. ಬಿಹಾರ ಮೈತ್ರಿಕೂಟ ಒಗ್ಗಟ್ಟನ್ನು ಪ್ರದರ್ಶಿಸುವ ಪ್ರಮುಖ ಎನ್‌ಎಡಿಎಎ ಸಮನ್ವಯ ಸಭೆಗಳಲ್ಲಿಯೂ ಇವರು ಭಾಗಿಯಾಗುತ್ತಿದ್ದರು. ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ನೇಮಕ

ಛತ್ತೀಸ್‌ಗಢ ಪ್ರಚಾರದ ಸಮಯದಲ್ಲಿ ನಬಿನ್ ಅವರ ಸಂಘಟನಾ ಕೌಶಲ್ಯ ಹೈಕಮಾಂಡ್‌ ಗಮನಕ್ಕೆ ಬಂದಿತ್ತು. ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ಚುನಾವಣಾ ಸಹ-ಉಸ್ತುವಾರಿಯಾಗಿ ಕೆಲಸ ಮಾಡಿದ್ದರು. ಚುನಾವಣೆಗೆ ಕನಿಷ್ಠ ಒಂದೂವರೆ ವರ್ಷಕ್ಕೆ ಮೊದಲು ನಬಿನ್ ವಾರದಲ್ಲಿ ಕನಿಷ್ಠ ನಾಲ್ಕು ದಿನ ಛತ್ತೀಸ್‌ಗಢಗೆ ಬರುತ್ತಿದ್ದರು. ಇದು ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ವಿರುದ್ಧ ಬಿಜೆಪಿಯ ಪ್ರಚಾರಕ್ಕೆ ಭದ್ರವಾದ ಅಡಿಪಾಯ ಹಾಕಿತು.

ತಾನು ಕಾರ್ಯಾಧ್ಯಕ್ಷನಾಗುತ್ತೇನೆ ಎನ್ನುವುದು ಸ್ವತ: ನಿತಿನ್ ನಬಿನ್ ಅವರಿಗೆ ತಿಳಿದಿರಲಿಲ್ಲ. ಬಿಹಾರದಲ್ಲಿ ಪಕ್ಷ ಅಧಿಕಾರಕ್ಕೆ ಏರಲು ಕಾರಣರಾದ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ನಿತಿನ್‌ ಭಾನುವಾರ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಇರುವಾಗಲೇ ನಿತಿನ್ ನಬಿನ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಬಿಜೆಪಿ ಘೋಷಿಸಿತ್ತು.

TAGGED:Bihar ElectionbjpNitin Nabinpoliticsನರೇಂದ್ರ ಮೋದಿನಿತಿನ್ ನಬಿನ್ಬಿಜೆಪಿಬಿಹಾರ ಚುನಾವಣೆ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Arundhati Reddy Team India
Cricket

ಅರುಂಧತಿ ರೆಡ್ಡಿ ಮ್ಯಾಜಿಕ್‌ ಸ್ಪೆಲ್‌ – ಆಸ್ಟ್ರೇಲಿಯಾ ವಿರುದ್ಧ 21 ರನ್‌ಗಳ ಜಯ

Public TV
By Public TV
9 minutes ago
Two Youths Drown In Bhadra River Dead Body Found
Chikkamagaluru

ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು – ಮೃತದೇಹ ಪತ್ತೆ

Public TV
By Public TV
11 minutes ago
Womens Asia Cup Rising Stars India vs Pakistan IND A Women won by 8 wickets
Cricket

ಪಾಕ್‌ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
44 minutes ago
Bidar Papnash Temple
Bengaluru City

ಮಹಾಶಿವರಾತ್ರಿ | ಶ್ರೀರಾಮ ಪ್ರತಿಷ್ಠಾಪಿಸಿದ ಶಿವಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Public TV
By Public TV
2 hours ago
Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
2 hours ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?