ಶಿವಮೊಗ್ಗ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ (Rural Drinking Water and Sanitation Department) ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ (Lokayukta raid) ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನಗರದ (Shivamogga) ಬಸವನಗುಡಿಯಲ್ಲಿರುವ ಅವರ ಬಾಡಿಗೆ ಮನೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸುತ್ತೂರು ಜಾತ್ರಾ ಮಹೋತ್ಸವ – ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ
ರೂಪ್ಲಾ ನಾಯ್ಕ್ ಅವರ ಕುಟುಂಬ ನೆಲೆಸಿರುವ ಬೆಂಗಳೂರಿನ (Bengaluru) ನಿವಾಸ ಹಾಗೂ ರೂಪ್ಲಾ ನಾಯ್ಕ್ ಅವರ ಸಹಾಯಕ ತಾಂಬೆ ಅವರ ವಿದ್ಯಾನಗರದಲ್ಲಿರುವ ಮನೆ ಮೇಲೂ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಒಟ್ಟು ಆರು ತಂಡಗಳು ದಾಳಿ ನಡೆಸಿವೆ. ಇದನ್ನೂ ಓದಿ: ನಡುರಸ್ತೆಯಲ್ಲೇ ಹೃದಯಾಘಾತ; ಜೀವ ಉಳಿಸಲು ಅಂಗಲಾಚಿದರೂ ನೆರವಿಗೆ ಬಾರದ ಜನ – ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ವ್ಯಕ್ತಿ

