Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಷಿನ್, ವೆಂಟಿಲೇಟರ್ ಸೇರಿ 24 ಲಕ್ಷ ಬೆಲೆ ಬಾಳುವ ಯಂತ್ರಗಳು ನಾಪತ್ತೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಷಿನ್, ವೆಂಟಿಲೇಟರ್ ಸೇರಿ 24 ಲಕ್ಷ ಬೆಲೆ ಬಾಳುವ ಯಂತ್ರಗಳು ನಾಪತ್ತೆ!

Crime

ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಷಿನ್, ವೆಂಟಿಲೇಟರ್ ಸೇರಿ 24 ಲಕ್ಷ ಬೆಲೆ ಬಾಳುವ ಯಂತ್ರಗಳು ನಾಪತ್ತೆ!

Public TV
Last updated: December 20, 2025 7:30 am
Public TV
Share
2 Min Read
Beluru Hospital
SHARE

ಹಾಸನ: ಬೇಲೂರು (Beluru) ತಾಲೂಕು ಆಸ್ಪತ್ರೆಯಲ್ಲಿ (Beluru Hospital) 24 ಲಕ್ಷ ರೂ.ಗೂ ಹೆಚ್ಚು ಬೆಲೆ ಬಾಳುವ ವಸ್ತುಗಳ ಕಳವು ಆರೋಪ ಕೇಳಿಬಂದಿದೆ. ಸ್ಕ್ಯಾನಿಂಗ್ ಮಷಿನ್, ವೆಂಟಿಲೇಟರ್, ಮಾನಿಟರ್‌ಗಳು, ಆಕ್ಸಿಜನ್ ಸಿಲಿಂಡರ್‌ಗಳ ಸೇರಿ ಇತರೆ ವಸ್ತುಗಳು ಕಳವು ಆಗಿದೆ. ಈ ಬಗ್ಗೆ ಆಸ್ಪತ್ರೆ ಅಧಿಕಾರಿಗಳನ್ನು ಕೇಳಿದ್ರೆ ಉಡಾಫೆ ಉತ್ತರ ನೀಡುತ್ತಿದ್ದಾರೆ.

ಆಸ್ಪತ್ರೆಗೆ ಹಂತ ಹಂತವಾಗಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇಲ್ಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಹಾಗೂ ಗರ್ಭಿಣಿಯರು ಆಗಮಿಸುವ ಹಿನ್ನೆಲೆ ಸ್ಕ್ಯಾನಿಂಗ್ ಮಿಷನ್, ವೆಂಟಿಲೇಟರ್‌ಗಳನ್ನು ಕಳೆದ ಎರಡು ವರ್ಷಗಳ ಹಿಂದೆ ಖರೀದಿ ಮಾಡಲಾಗಿತ್ತು. ಇದಕ್ಕೆ ಸಂಬಂಧಪಟ್ಟ ವೈದ್ಯರು ಹಾಗೂ ಸಿಬ್ಬಂದಿ ಕೊರತೆಯಿದ್ದು ಹೊಸದಾಗಿ ನೇಮಕ ಮಾಡಲು ಡಿಹೆಚ್‌ಓ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ವೇಳೆ ವಸ್ತುಗಳು ಕಳವಾಗಿರುವುದು ಕಂಡು ಬಂದಿದೆ. ಕೂಡಲೇ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಆಸ್ಪತ್ರೆಯ ಸಿಬ್ಬಂದಿ ಪ್ರದೀಪ್ ಹಾಗೂ ಖಾಸಗಿ ಆಸ್ಪತ್ರೆ ಚಾಲಕ ಸೂಫಿಯಾನ್ ಸ್ಕ್ಯಾನಿಂಗ್ ಮಿಷನ್ ತೆಗೆದುಕೊಂಡು ಹೋಗುತ್ತಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಭೀಕರ ಅಪಘಾತಕ್ಕೆ ಇಬ್ಬರು ಬಲಿ

ಈ ಕಳ್ಳತನದ ಹಿಂದೆ ಆಸ್ಪತ್ರೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಖಾಸಗಿ ಅಂಬ್ಯುಲೆನ್ಸ್ ಚಾಲಕ ಸೇರಿದಂತೆ ದೊಡ್ದ ಜಾಲವೇ ಇದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕೊರೋನ ಸಂದರ್ಭದಲ್ಲಿ ಹೆಚ್ಚುವರಿಯಾಗಿ ಕೊಡಲಾಗಿದ್ದ ಆಕ್ಸಿಜನ್ ಸಿಲಿಂಡರ್‌ಗಳು ಸಹ ಕಳುವಾಗಿರುವುದು ಅಧಿಕಾರಿಗಳ ಭೇಟಿ ವೇಳೆ ಬಯಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಸ್ತ್ರಚಿಕಿತ್ಸಕಿ ಜಯಲಕ್ಷ್ಮೀ, ನೂತನ ವೈದ್ಯರಿಗೆ ಕೊಠಡಿ ನೀಡಲು ಪರಿಶೀಲನೆ ನಡೆಸುತ್ತಿದ್ದೆವು. ಆಗ ಸ್ಕ್ಯಾನಿಂಗ್ ರೂಂ ನೋಡಿದಾಗ ಮಿಷನ್ ಇರಲಿಲ್ಲ. ಸಿಬ್ಬಂದಿ ಪ್ರಶ್ನಿಸಿದಾಗ ಅದು ಕೆಟ್ಟು ಹೋಗಿದ್ದು, ರಿಪೇರಿಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಆಸ್ಪತ್ರೆಗೆ ಬರುವ ರೋಗಿಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದ್ದರೂ ಹಣದಾಸೆಗೆ ಅಲ್ಲಿನ ಸಿಬ್ಬಂದಿ ಕಳ್ಳತನ ಮಾಡಿ ಹಣಕ್ಕಾಗಿ ದಂಧೆ ನಡೆಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕಿದೆ. ಇದನ್ನೂ ಓದಿ: KSRTC,  ಬೈಕ್ ಮುಖಾಮುಖಿ ಡಿಕ್ಕಿ – ಬಸ್ಸಿನ ಅಡಿಗೆ ಸಿಲುಕಿ ಸವಾರ ಸಾವು

TAGGED:beluruBeluru Hospitalhassanhospitalಬೇಲೂರುಹಾಸನ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

SATISH JARKIHOLI 1
Latest

ನಾವ್ಯಾರೂ ಸಿಎಂ ರೇಸ್‌ನಲ್ಲಿ ಇಲ್ಲ: ಸತೀಶ್ ಜಾರಕಿಹೊಳಿ

Public TV
By Public TV
6 minutes ago
Delhi Police
Latest

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು

Public TV
By Public TV
46 minutes ago
G Parameshwar
Bengaluru City

ದೆಹಲಿಯಲ್ಲಿ ಲಷ್ಕರ್‌ ಸಂಘಟನೆಯ ಶಂಕಿತ ಉಗ್ರರು ಸೆರೆ – ರಾಜ್ಯದಲ್ಲೂ ಹೈ ಅಲರ್ಟ್‌: ಪರಮೇಶ್ವರ್‌

Public TV
By Public TV
1 hour ago
Yadagiri
Districts

ವೈಭವದಿಂದ ನೆರವೇರಿದ ಕಲ್ಯಾಣ ಕರ್ನಾಟಕದ ಸಿದ್ದಿ ಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ

Public TV
By Public TV
1 hour ago
MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
1 hour ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?