ಮಂಗಳೂರು: ಧರ್ಮಸ್ಥಳ ಷ್ಯಡ್ಯಂತ್ರ ಪ್ರಕರಣದ (Dharmasthala Case) ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ (Chinnaiah) ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿಬಿದ್ದಿದ್ದಾರೆ.
2 ದಿನಗಳ ಹಿಂದೆಯಷ್ಟೇ ಶಿವಮೊಗ್ಗದ (Shivamogga) ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದ ಚಿನ್ನಯ್ಯ, ಜೀವ ರಕ್ಷಣೆ ಕೋರಿ ಬುರುಡೆ ಗ್ಯಾಂಗ್ ವಿರುದ್ಧ ದೂರು ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ಬುರುಡೆ ಚಿನ್ನಯ್ಯನಿಗೆ ಕೊನೆಗೂ ಬಿಡುಗಡೆ ಭಾಗ್ಯ – ಶೀಘ್ರವೇ ಜೈಲಿನಿಂದ ರಿಲೀಸ್
ಬುರುಡೆ ಗ್ಯಾಂಗ್‌ನ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ, ಜಯಂತ್ ಟಿ, ಸಮೀರ್ ಎಂ.ಡಿ (Sameer MD) ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಹಣ ಪಡೆದು ಬುರುಡೆ ಕಥೆ ಕಟ್ಟಿದ್ದ ಚಿನ್ನಯ್ಯ – ಎಸ್‌ಐಟಿ ವರದಿಯಲ್ಲಿ ಏನಿದೆ?
ತನಗೆ ಹಾಗೂ ತನ್ನ ಪತ್ನಿಗೆ ಜೀವ ಬೆದರಿಕೆ ಹಾಕಬಹುದು, ನಮಗೆ ರಕ್ಷಣೆ ನೀಡಿ ಎಂದು ದೂರು ನೀಡಿದ್ದಾರೆ. ಬೆಳ್ತಂಗಡಿ ಪೊಲೀಸರು ದೂರು ಅರ್ಜಿಯನ್ನ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್- ತಿಮರೋಡಿ, ಮಟ್ಟಣ್ಣನವರ್, ಜಯಂತ್, ವಿಠಲ ಗೌಡ, ಜಯಂತ್ ಪಾತ್ರ ಏನು?


