ಕಲಬುರಗಿ: ಬಿಜೆಪಿ ಕಾಯಕರ್ತೆಯೊಬ್ಬರು (BJP Worker) ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿಯ (Kalaburagi) ನಂದಿಕೂರ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಪಾಟೀಲ್ (35) ಎಂದು ಗುರುತಿಸಲಾಗಿದೆ. ನಂದಿಕೂರ ಗ್ರಾಮದ ಬಿಜೆಪಿ ಕಾರ್ಯಕರ್ತ ಮಲ್ಲಿನಾಥ್ ಬಿರಾದಾರ್ ಎಂಬವರ ಮನೆಗೆ ತೆರಳಿ, ಜ್ಯೋತಿ ಪಾಟೀಲ್ ಬಾಗಿಲು ತಟ್ಟಿದ್ದರು. ಬಾಗಿಲು ತೆರೆಯುತ್ತಿದ್ದಂತೆ ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ವೇಳೆ ಮಲ್ಲಿನಾಥ್ ಬಿರಾದಾರ್ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.ಇದನ್ನೂ ಓದಿ: ಮಕ್ಕಳ ಮೇಲೆ ಕ್ರೌರ್ಯ – ಸೈಕೋ ರಂಜನ್ ವಿರುದ್ಧ ದಾಖಲಾಗುತ್ತಾ ಪೋಕ್ಸೋ ಕೇಸ್?
ಮಲ್ಲಿನಾಥ್ ಬಿರಾದಾರ್ ಪತ್ನಿ ಮೂರು ಜನ ಮಕ್ಕಳು ಆ ಮನೆಯಲ್ಲಿ ವಾಸವಾಗಿದ್ದರು. ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಾಜಧಾನಿ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದು 8 ಆನೆಗಳ ದಾರುಣ ಸಾವು – ಹಳಿ ತಪ್ಪಿದ ಬೋಗಿಗಳು

