– ಸೆಲ್ಫಿಗಾಗಿ ಮೈಮೇಲೆ ಮುಗಿಬಿದ್ದ ಫ್ಯಾನ್ಸ್
ಸೆಲೆಬ್ರೆಟಿಗಳನ್ನ ನೋಡೋದಕ್ಕೆ ಫ್ಯಾನ್ಸ್ ಮುಗಿಬೀಳೋದು ಸಹಜ. ಆದ್ರೆ ಅಭಿಮಾನಿಗಳ ಅತ್ಯುತ್ಸಾಹ ಬಹಳಷ್ಟು ಸಲ ನಟ-ನಟಿಯರಿಗೆ ಸಮಸ್ಯೆ ತಂದೊಡ್ಡಿರುವುದೂ ಉಂಟು. ಇತ್ತೀಚೆಗೆ ಹೈದರಾಬಾದ್ನಲ್ಲಿ ನಟಿ ನಿಧಿ ಅಗರ್ವಾಲ್ಗೆ (Nidhhi Agerwal) ಈ ಕಹಿ ಅನುಭವ ಆಗಿತ್ತು. ಇದೀಗ ನಟಿ ಸಮಂತಾಗೂ (Samantha Ruth Prabhu) ಅದರ ಬಿಸಿ ತಟ್ಟಿದೆ.
Apudu Niddhi,ipudu Samantha!Entra idhi pic.twitter.com/XdKH3GB72F
— Aryan (@Pokeamole_) December 21, 2025
ಪ್ರಭಾಸ್ ನಟನೆಯ ‘ದಿ ರಾಜಾಸಾಬ್’ ಸಾಂಗ್ ರಿಲೀಸ್ (Raja Saab Song Launch) ಕಾರ್ಯಕ್ರಮಕ್ಕೆ ಆಗಮಿಸಿದ್ದ ನಾಯಕಿ ನಿಧಿ ಅಗರ್ವಾಲ್ ವಾಪಸ್ ತೆರಳುವಾಗ ಫ್ಯಾನ್ಸ್ ಕ್ರೌಡ್ ಮಧ್ಯೆ ನಟಿ ಸಿಕ್ಕಿಕೊಂಡು ಭಾರೀ ಕಸಿವಿಸಿ ಅನುಭವಿಸಿದ್ದರು. ಈ ಕುರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಇದೀಗ ನಟಿ ಸಮಂತಾಗೂ ಅದೇ ರೀತಿ ಆಗಿದೆ.
ಹೈದರಾಬಾದ್ನಲ್ಲಿ (Hyderabad) ಮಳಿಗೆಯೊಂದರ ಉದ್ಘಾಟನೆಗೆ ತೆರಳುತ್ತಿದ್ದ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದ ಫ್ಯಾನ್ಸ್ ಮೈಮೇಲೆ ಮುಗಿಬೀಳಲು ಯತ್ನಿಸಿದ ಘಟನೆ ನಡೆದಿದೆ. ಸನ್ನಿವೇಶದ ವಿಡಿಯೋಗಳು ಈಗ ವೈರಲ್ ಆಗಿವೆ. ಇದನ್ನೂ ಓದಿ: Video Viral | ಸೆಲ್ಫಿಗಾಗಿ ಮೈಮೇಲೆ ಮುಗಿಬಿದ್ದ ಫ್ಯಾನ್ಸ್ – ನಟಿ ನಿಧಿ ಅಗರ್ವಾಲ್ಗೆ ಭಾರೀ ಕಸಿವಿಸಿ
ಹೌದು. ಭಾನುವಾರ ಸಂಜೆ, ಸಮಂತಾ ರುತ್ ಪ್ರಭು ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಯತ್ನಿಸಿದ್ದಾರೆ. ಇನ್ನೂ ಕೆಲವರು ಶೇಕ್ ಹ್ಯಾಂಡ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ಜೊತೆಗಿದ್ದ ಗಾರ್ಡ್ಸ್ ಸಮಂತಾರನ್ನ ರಕ್ಷಿಸಿ ಕಾರಿನೊಳಗೆ ಹತ್ತಿಸಿದ್ದಾರೆ.
ಸದ್ಯ ಅಭಿಮಾನಿಗಳ ವರ್ತನೆಗೆ ಸೋಷಿಯಲ್ ಮೀಡಿಯಾದಲ್ಲಿ ನೆಟ್ಟಿಗರಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದರೂ, ಸಮಂತಾ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ವಿಜಯಲಕ್ಷ್ಮಿ ದರ್ಶನ್ ಬೆಂಕಿ ಮಾತು – ಕಿಚ್ಚನ ವಿರುದ್ಧ ಮಾತಿನ ಯುದ್ಧಕ್ಕೆ ನಿಂತ ಡಿಬಾಸ್ ಫ್ಯಾನ್ಸ್


