ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ (National Herald Case) ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಇತರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ದೂರನ್ನು ಪರಿಗಣಿಸಲು ನಿರಾಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ದೆಹಲಿ ಹೈಕೋರ್ಟ್ (Delhi Highcourt) ವಿಚಾರಣೆ ನಡೆಸಿತು.
ಜಾರಿ ನಿರ್ದೇಶನಾಲಯ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಇ.ಡಿ ಪ್ರಕರಣದಲ್ಲಿ ತನ್ನ ತನಿಖೆಯನ್ನು ಪೂರ್ಣಗೊಳಿಸಿದೆ, ಸಾಕ್ಷ್ಯಗಳನ್ನು ಸಂಗ್ರಹಿಸಿದೆ ಮತ್ತು ಈ ವಿಷಯಕ್ಕೆ ಸಂಬಂಧಿಸಿದಂತೆ ಹಲವಾರು ಶೋಧಗಳನ್ನು ನಡೆಸಿದೆ ಎಂದು ಹೇಳಿದರು. ಇ.ಡಿ ಆರೋಪಪಟ್ಟಿಯನ್ನು ಪರಿಗಣಿಸಲು ನಿರಾಕರಿಸುವ ಮೂಲಕ ಕೆಳ ನ್ಯಾಯಾಲಯವು ತಪ್ಪು ಮಾಡಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಕಾರಿನ ಕೆಳಗಿರಿಸಿದ್ದ ಬಾಂಬ್ ಸ್ಫೋಟ – ರಷ್ಯಾದ ಹಿರಿಯ ಜನರಲ್ ಸಾವು
ವಾದದ ಬಳಿಕ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಂದ ಹೈಕೋರ್ಟ್ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿ ಮಾಡಿತು. ಪ್ರಕರಣದ ಮುಂದಿನ ವಿಚಾರಣೆ ಮಾ.12ರಂದು ನಡೆಯಲಿದೆ. ಕಳೆದ ವಾರ, ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ಪ್ರಕರಣದಲ್ಲಿ ಇ.ಡಿ ಸಲ್ಲಿಸಿದ ಆರೋಪಪಟ್ಟಿಯನ್ನು ಪರಿಗಣಿಸಲು ನಿರಾಕರಿಸಿತ್ತು. ಇದನ್ನೂ ಓದಿ: ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದ ಅಂತಿಮ

