ದಾವಣಗೆರೆ: ನಗರದ (Davanagere) ವಿನಾಯಕ ಬಡಾವಣೆಯ ವ್ಯಕ್ತಿಯೊಬ್ಬರಿಗೆ ಸೈಬರ್ ವಂಚಕರು (Cyber Crime) 76.48 ಲಕ್ಷ ರೂ. ಪಂಗನಾಮ ಹಾಕಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭ ಪಡೆಯಬಹುದು ಎಂಬ ಆಸೆ ತೋರಿಸಿ ವಂಚಕರು ಈ ಕೃತ್ಯ ಎಸಗಿದ್ದಾರೆ.
ವಂಚನೆಗೊಳಗಾದ ವ್ಯಕ್ತಿಗೆ ಫೇಸ್‍ಬುಕ್ ಮೂಲಕ ಪರಿಚಯವಾದ ವಂಚಕ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭ ಪಡೆಯಬಹುದು ಎಂಬ ಆಸೆ ಹುಟ್ಟಿಸಿದ್ದ. ವಂಚಕನ ಮಾತು ನಂಬಿ ಸೆಪ್ಟೆಂಬರ್‌ನಿಂದ ಡಿಸೆಂಬರ್‌ವರೆಗೆ ವಿವಿಧ ಬ್ಯಾಂಕ್‌ಗಳಿಂದ ಹಣ ವರ್ಗಾವಣೆ ಮಾಡಲಾಗಿತ್ತು. ಇದನ್ನೂ ಓದಿ: ಅಪಘಾತವಾಗಿ ಬಿದ್ದಿದ್ದವನ ಮೊಬೈಲ್‌ನಿಂದ 80 ಸಾವಿರ ದೋಚಿದ್ದ ಕದೀಮರು ಅರೆಸ್ಟ್!
ಕೆಲ ದಿನಗಳ ಕಾಲ ಬಿಟ್ಟು ಹಣ ವಾಪಸ್ ಪಡೆಯಲು ಹೋದಾಗ ಹಣ ಬಾರದೇ ಇದ್ದಾಗ ವಂಚನೆ ಜಾಲಕ್ಕೆ ಸಿಲುಕಿದ್ದು ಗೊತ್ತಾಗಿದೆ. ವಂಚನೆಗೊಳಗಾಗಿದ್ದು ಗೊತ್ತಾಗುತ್ತಿದ್ದಂತೆ ದಾವಣಗೆರೆ ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

