ಬೆಂಗಳೂರು: ಆಸ್ಪತ್ರೆಯಲ್ಲಿ ನರ್ಸ್ ಬಟ್ಟೆ ಬದಲಿಸುವಾಗ ಕದ್ದುಮುಚ್ಚಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಅಲ್ಲಿನ ಸಿಬ್ಬಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಸುವೆಂದು ಮೊಹಂತ ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದಿಂದ ನಾಗರಭಾವಿಯ (Nagarbhavi) ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.ಇದನ್ನೂ ಓದಿ: Chitradurga Bus Accident | ಮೃತರ ಬೋನ್ ಸ್ಯಾಂಪಲ್ ಸಂಗ್ರಹ – ಡಿಎನ್‌ಎ ವರದಿ ಬಳಿಕ ಶವ ಹಸ್ತಾಂತರ
ಆಪರೇಷನ್ ಥಿಯೇಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸುವುದನ್ನ ನರ್ಸ್ ಒಬ್ಬರು ಗಮನಿಸಿದ್ದರು. ಬಳಿಕ ಈ ಕುರಿತು ಆಸ್ಪತ್ರೆಯ ವೈದ್ಯರ ಗಮನಕ್ಕೆ ತಂದಿದ್ದರು. ಅದರಂತೆ ಆಸ್ಪತ್ರೆಯ ಹಿರಿಯ ವೈದ್ಯ ಚೇತನ್ ಆರೋಪಿಯ ವಿರುದ್ಧ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆರೋಪಿಯನ್ನ ಬಂಧಿಸಿ, ವಿಡಿಯೋ ಚಿತ್ರೀಕರಿಸಿದ್ದ ಮೊಬೈಲ್‌ನ್ನು ಸೀಜ್ ಮಾಡಿದ್ದಾರೆ.
ಆರೋಪಿ ವಿಡಿಯೋ ಮಾಡಿಕೊಂಡಿರುವುದನ್ನ ಕಾಯಕವನ್ನಾಗಿ ಮಾಡಿಕೊಂಡಿದ್ದ. ಹೀಗಾಗಿ ಈ ನರ್ಸ್ನದ್ದು ಮಾತ್ರ ವಿಡಿಯೋ ಮಾಡಿಕೊಂಡಿದ್ದಾನಾ? ಅಥವಾ ಬೇರೆ ಆಪರೇಷನ್ ಥೇಟರ್‌ನಲ್ಲಿ ಕೆಲಸ ಮಾಡುವ ನರ್ಸ್ಗಳೆಲ್ಲರ ವಿಡಿಯೋ ಮಾಡಿಕೊಂಡಿದ್ದಾನಾ? ಹಾಗೂ ಮಾಡಿಕೊಂಡಿರುವ ವಿಡಿಯೋ ಬೇರೆಯವರಿಗೆ ಕಳುಹಿಸಿದ್ದಾನಾ? ಎನ್ನುವುದನ್ನು ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.ಇದನ್ನೂ ಓದಿ: ಟಿಪ್ಪರ್ ಡಿಕ್ಕಿ – ಒಂದೇ ಬೈಕಿನಲ್ಲಿದ್ದ ನಾಲ್ವರು ಬಲಿ

