Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಸೂರ್ಯ’ ಸಿನಿಮಾ ಟ್ರೈಲರ್ ರಿಲೀಸ್ : ಸಾಗರ್ ನಿರ್ದೇಶನದ ಸಿನಿಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | `ಸೂರ್ಯ’ ಸಿನಿಮಾ ಟ್ರೈಲರ್ ರಿಲೀಸ್ : ಸಾಗರ್ ನಿರ್ದೇಶನದ ಸಿನಿಮಾ

Cinema

`ಸೂರ್ಯ’ ಸಿನಿಮಾ ಟ್ರೈಲರ್ ರಿಲೀಸ್ : ಸಾಗರ್ ನಿರ್ದೇಶನದ ಸಿನಿಮಾ

Public TV
Last updated: December 26, 2025 3:50 pm
Public TV
Share
3 Min Read
Surya Movie
SHARE

ಉತ್ತರ ಕರ್ನಾಟಕ ಭಾಗದ ಸಾಕಷ್ಟು ನಿರ್ಮಾಪಕ, ನಿರ್ದೇಶಕರು ಕನ್ನಡ ಚಿತ್ರರಂಗಕ್ಕೆ (Sandalwood) ಬರುತ್ತಿದ್ದಾರೆ. ಅದೇ ರೀತಿ ಇದೀಗ ಬೆಳಗಾವಿ ಮೂಲದ ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರೂ ತಮ್ಮ ಕೊಡುಗೆ ನೀಡಲು ಅಣಿಯಾಗಿದ್ದಾರೆ. ನಂದಿ ಸಿನಿಮಾಸ್ ಅಡಿಯಲ್ಲಿ ಅವರು `ಸೂರ್ಯ’ ಎಂಬ ಮಾಸ್ ಲವ್ ಸ್ಟೋರಿ ಒಳಗೊಂಡ ಚಿತ್ರವನ್ನು ನಿರ್ಮಿಸಿದ್ದು, ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ ಜನವರಿ 15 ರಂದು ತೆರೆಗೆ ತರಲಿದ್ದಾರೆ.

ಸ್ಲಂನಲ್ಲಿ ಬೆಳೆದ ಯುವಕನೊಬ್ಬ ತನ್ನ ಪ್ರೀತಿಯನ್ನು ಪಡೆದುಕೊಳ್ಳಲು ಏನೆಲ್ಲ ಹೋರಾಟ, ಸಾಹಸ ಮಾಡುತ್ತಾನೆ, ಆತನಿಗೆ ಯಾರೆಲ್ಲ ಸಹಾಯ ಮಾಡುತ್ತಾರೆ ಎಂಬುದನ್ನು ಈ ಚಿತ್ರದ ಮೂಲಕ ನಿರ್ದೇಶಕ ಸಾಗರ್ ದಾಸ್ ಅವರು ಹೇಳಹೊರಟಿದ್ದಾರೆ. ಯುವನಟ ಪ್ರಶಾಂತ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಹರ್ಷಿತಾ ನಾಯಕಿ ಪಾತ್ರ ನಿರ್ವಹಿಸಿದ್ದಾರೆ. ಇದನ್ನೂ ಓದಿ: ಬಿಗ್‌ಬಾಸ್‌ ಮನೆಗೆ ಮಾಳು ಮಡದಿ ಎಂಟ್ರಿ  –  ಅಪ್ಪನಂತೆ ಹೇರ್‌ಕಟ್‌… ಮಕ್ಕಳೊಂದಿಗೆ ತರ್ಲೆ ಮಾಡಿದ ಗಿಲ್ಲಿ

Surya Movie 1

ವೇದಿಕೆಯಲ್ಲಿ ನಿರ್ಮಾಪಕ ಬಸವರಾಜ ಬೆಣ್ಣಿ ಮಾತನಾಡುತ್ತ ಟ್ರೈಲರ್ ಚೆನ್ನಾಗಿ ಮೂಡಿಬಂದಿದೆ. ಪೂನಾದಲ್ಲಿ ಉದ್ಯಮ ನಡೆಸುತ್ತಿರುವ ನಾವು, ಹುಟ್ಟಿಬೆಳೆದ ಕನ್ನಡ ನಾಡಿಗೆ ಏನಾದರೂ ಕೊಡುಗೆ ನೀಡಬೇಕೆಂದು ಈ ಚಿತ್ರ ಮಾಡಿದ್ದೇವೆ ಎಂದರೆ, ಅವರ ಸಹೋದರ ರವಿ ಬೆಣ್ಣಿ ಮಾತನಾಡಿ ಜನವರಿ 15ಕ್ಕೆ ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಸಾಗರ್ ಕಥೆ ಹೇಳಿದಾಗ ಬಜೆಟ್ ಜಾಸ್ತಿ ಅನಿಸಿತ್ತು. ಸಿನಿಮಾ ನೋಡಿದಾಗ ನಮ್ಮ ಹಣ ಎಲ್ಲೂ ಹೋಗಿಲ್ಲ ಅನ್ನಿಸಿತು ಎಂದರು.

ನಾಯಕ ಪ್ರಶಾಂತ್ ಮಾತನಾಡಿ ,ಸ್ಲಂನಲ್ಲಿ ಬೆಳೆದ ಹುಡುಗನಾಗಿ ನಾನೀ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಆತನಿಗೆ ಹುಡುಗಿಯ ಜೊತೆ ಪ್ರೀತಿ ಆದ ನಂತರ ಅದನ್ನು ಆತ ಹೇಗೆ ಉಳಿಸಿಕೊಳ್ಳುತ್ತಾನೆ ಎನ್ನುವುದೇ ಚಿತ್ರದ ಎಳೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದರು. ನಾಯಕಿ ಹರ್ಷಿತಾ ಮಾತನಾಡಿ ನಮ್ಮ ಚಿತ್ರ ಬಿಡುಗಡೆಯಾಗುತ್ತಿರುವುದು ಖುಷಿಯಾಗಿದೆ. ಹಿರಿಯ ಕಲಾವಿದರ ಜೊತೆ ಕೆಲಸ ಮಾಡಿದ್ದು ಒಂದೊಳ್ಳೆ ಅನುಭವ ನೀಡಿದೆ. ಕಾಲೇಜ್ ಹೋಗೋ ಹುಡುಗಿ ತನ್ನ ಪ್ರೀತಿಯ ವಿಷಯದಲ್ಲಿ ಯಾವ ನಿರ್ಧಾರ ತಗೋತಾಳೆ ಅನ್ನುವುದೇ ಈ ಚಿತ್ರದ ಕಥೆ. ಡಬ್ಬಿಂಗ್ ಮಾಡುವಾಗ ನನ್ನ ಪಾತ್ರ ನೋಡಿ ಖುಷಿಯಾಯ್ತ ಎಂದು ಹೇಳಿದರು.

ನಿರ್ದೇಶಕ ಸಾಗರ್ ಮಾತನಾಡಿ ಸೂರ್ಯ ನಾಯಕನ ಹೆಸರು. ಚಿತ್ರದ ಬಜೆಟ್ ಮೂರು, ನಾಲ್ಕು ಪಟ್ಟು ಹೆಚ್ಚಾಗಿದೆ. ಚಿತ್ರದ ಹಾಡಲ್ಲಿ ಕಲಾಂ, ಅಂಬೇಡ್ಕರ್, ಮೋದಿ ಅವರನ್ನು ಬಳಸಿಕೊಂಡಿದ್ದೇವೆ. ಏಕೆಂದರೆ ನಾಯಕನೂ ಅವರಂತೆಯೇ ಮಿಡಲ್ ಕ್ಲಾಸ್ ನಿಂದ ಬಂದು ಸಾಧನೆ ಮಾಡುತ್ತಾನೆ. ಉತ್ತರ ಕರ್ನಾಟಕ, ಬೆಂಗಳೂರು ಸುತ್ತಮುತ್ತ ಹಾಗೂ ಪೂನಾದಲ್ಲಿ ಚಿತ್ರದ ಚಿತ್ರೀಕರಣ ನಡೆಸಿದ್ದೇವೆ, ಪ್ರಮೋದ್ ಶೆಟ್ಟಿ, ಶೃತಿ ಅವರನ್ನು ಬೇರೆಯದೇ ಪಾತ್ರದಲ್ಲಿ ನೋಡಬಹುದು. ಆರ್ಮುಗಂ ರವಿಶಂಕರ್ ಅವರದ್ದು ಈವರೆಗೆ ಮಾಡಿರದಂಥ ಪಾತ್ರ. ಸೂರ್ಯ ಚಿತ್ರವನ್ನು ಕನ್ನಡ ವರ್ಷನ್ ಮಾತ್ರ ಮಾಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಕನ್ನಡದಲ್ಲೇ ರಿಲೀಸ್ ಮಾಡುತ್ತೇವೆ. ಸಂಕ್ರಾಂತಿ ಹಬ್ಬಕ್ಕೆ ಸಮ್ ಕಾಂತ್ರಿ ಮಾಡಲು ನಮ್ಮ ಚಿತ್ರ ರೆಡಿಯಾಗಿದೆ ಎಂದರು.

ಹಿರಿಯ ನಟಿ ಶೃತಿ ಮಾತನಾಡಿ ಚಿತ್ರದಲ್ಲಿ ಡಾಕ್ಟರ್ ಮಮತ ಎಂಬ ಪಾತ್ರ ಮಾಡಿದ್ದೇನೆ. ಒಂದು ವಿಚಾರಕ್ಕೆ ಆಕೆಗೆ ತುಡಿತವಿರುತ್ತೆ. ಆಕೆ ಸಾಫ್ಟ್ ಆದರೂ, ಕಷ್ಟ ಬಂದಾಗ ರೆಬೆಲ್ ಆಗ್ತಾಳೆ. ಸಾಗರ ಅವರ ಆತ್ಮವಿಶ್ವಾಸ ನೋಡಿ ಈ ಸಿನಿಮಾ ಮಾಡಿದೆ. ಒಳ್ಳೆಯ ಟೀಮ್‌ಗೆ ಬೆಂಬಲ ನೀಡಿ ಎಂದರು. ಪ್ರಮೋದ್ ಶೆಟ್ಟಿ ಮಾತನಾಡಿ ಮೊದಲ ಬಾರಿಗೆ ಉತ್ತರ ಕರ್ನಾಟಕ ಶೈಲಿಯ ಪಾತ್ರ ಮಾಡಿದ್ದೇನೆ. ಸ್ಲಂನಲ್ಲಿ ಬೆಳೆದ ಹುಡುಗನಿಗೆ ಬೆನ್ನೆಲುಬಾಗಿ ನಿಲ್ಲುವ ಬಾಂಡ್ ಬಸು ಪಾತ್ರ ನನ್ನದು ಎಂದರು. ಬಿ.ಸುರೇಶ್ ಜೊತೆ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದ ಸಾಗರ್ ದಾಸ್ ಸೂರ್ಯ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರದ 5 ಹಾಡುಗಳಿಗೆ ಶ್ರೀ ಶಾಸ್ತ ಅವರು ಸಂಗೀತ ಸಂಯೋಜನೆ ಮಾಡಿದ್ದು, ಬಹದ್ದೂರ್ ಚೇತನ್, ಯೋಗರಾಜ ಭಟ್ ಹಾಗೂ ನಿರ್ದೇಶಕರೂ ಸಾಹಿತ್ಯ ರಚಿಸಿದ್ದಾರೆ. ಉತ್ತರ ಕರ್ನಾಟಕ ಶೈಲಿಯ ‘ಕೆಳಪಾನ ಗಲ್ಲದ ಹುಡುಗಿ’ ಎಂಬ ಹಾಡು ಎಲ್ಲಾ ಕಡೆ ವೈರಲ್ ಆಗಿದೆ. ಮನುರಾಜ್ ಅವರ ಛಾಯಾಗ್ರಹಣ, ಮಣಿಕಂಠ ಕೆ.ವಿ. ಅವರ ಸಂಭಾಷಣೆ, ನರಸಿಂಹ ಅವರ ಸಾಹಸ ಸಂಯೋಜನೆ ಈ ಚಿತ್ರಕ್ಮಿದೆ. ಟಿ.ಎಸ್. ನಾಗಾಭರಣ, ಬಲ ರಾಜವಾಡಿ, ಭಜರಂಗಿ ಪ್ರಸನ್ನ, ಪ್ರಮೋದ್ ಶೆಟ್ಟಿ, ಕುಂಕುಮ್ ಹರಿಹರ, ದೀಪಿಕಾ, ಕಡ್ಡಿಪುಡಿ ಚಂದ್ರು ಚಿತ್ರದ ಉಳಿದ ಪಾತ್ರ ವರ್ಗದಲ್ಲಿದ್ದಾರೆ.ಇದನ್ನೂ ಓದಿ: ಕಾವ್ಯ ಮನೆಯವರಿಂದ ನಿಯಮ ಉಲ್ಲಂಘನೆ; ಹೊರ ಕಳಿಸಿದ್ರಾ ಬಿಗ್‌ ಬಾಸ್‌? – ಕಣ್ಣೀರಿಟ್ಟ ಕಾವ್ಯ

 

TAGGED:Kannada movieLove storynorth karnatakasuryaSurya Trailerಉತ್ತರ ಕರ್ನಾಟಕಕನ್ನಡ ಸಿನಿಮಾಸೂರ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Priyanka Gandhi
Latest

ಇಂದು ನನ್ನ ಗಂಡನ ಹುಟ್ಟುಹಬ್ಬ, ಪ್ರಶ್ನೆ ಸ್ವಲ್ಪ ಚಿಕ್ಕದಾಗಿ ಕೇಳಿ: ಪ್ರಿಯಾಂಕಾ ಗಾಂಧಿ ಹಾಸ್ಯ

Public TV
By Public TV
30 minutes ago
heatwave
Kalaburagi

ಕಲಬುರಗಿಯಲ್ಲಿ ನಿತ್ಯ 44 ರಿಂದ 45 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
32 minutes ago
prisoner who escaped from sakleshpur jail 1 arrested in goa
Districts

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ಪರಾರಿಯಾಗಿದ್ದ ವಿಚಾರಣಾಧಿನ ಕೈದಿ ಗೋವಾದಲ್ಲಿ ಅಂದರ್‌

Public TV
By Public TV
41 minutes ago
Nida Khan TCS 1
Crime

Corporate Jihad| ನಿದಾ ಖಾನ್‌ ಎಲ್ಲಿದ್ದಾಳೆ ಅನ್ನೋದು ನನಗೂ ಗೊತ್ತಿಲ್ಲ: ಪತಿ

Public TV
By Public TV
41 minutes ago
siddaramaiah
Bengaluru City

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿ ಅಲ್ಲ, ಬಿಜೆಪಿ ರಾಜಕೀಯ ಮಾಡ್ತಿದೆ: ಸಿದ್ದರಾಮಯ್ಯ

Public TV
By Public TV
60 minutes ago
electricity chamarajanagara
Chamarajanagar

ಚಾ.ನಗರ| ಮೆದಗನಾಣೆ ಗ್ರಾಮಕ್ಕೆ ವಿದ್ಯುತ್ ಸಂಪರ್ಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?