Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಕ್ಸಿಂಗ್‌ ಡೇ ಟೆಸ್ಟ್‌ – 5,468 ದಿನಗಳ ಬಳಿಕ ಆಸೀಸ್‌ ನೆಲದಲ್ಲಿ ಟೆಸ್ಟ್‌ ಗೆದ್ದ ಇಂಗ್ಲೆಂಡ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಬಾಕ್ಸಿಂಗ್‌ ಡೇ ಟೆಸ್ಟ್‌ – 5,468 ದಿನಗಳ ಬಳಿಕ ಆಸೀಸ್‌ ನೆಲದಲ್ಲಿ ಟೆಸ್ಟ್‌ ಗೆದ್ದ ಇಂಗ್ಲೆಂಡ್‌

Cricket

ಬಾಕ್ಸಿಂಗ್‌ ಡೇ ಟೆಸ್ಟ್‌ – 5,468 ದಿನಗಳ ಬಳಿಕ ಆಸೀಸ್‌ ನೆಲದಲ್ಲಿ ಟೆಸ್ಟ್‌ ಗೆದ್ದ ಇಂಗ್ಲೆಂಡ್‌

Public TV
Last updated: December 27, 2025 4:40 pm
Public TV
Share
3 Min Read
England Test 4
SHARE

– ಎರಡೇ ದಿನಗಳಲ್ಲಿ 36 ವಿಕೆಟ್‌ ಪತನ

ಮೆಲ್ಬರ್ನ್‌: ಆಸ್ಟ್ರೇಲಿಯಾ ತವರಿನಲ್ಲಿ ನಡೆದ ಬಾಕ್ಸಿಂಗ್‌ ಡೇ ಟೆಸ್ಟ್‌ (Boxing Day Test) ಪಂದ್ಯದಲ್ಲಿ ಇಂಗ್ಲೆಂಡ್‌ ತಂಡ ಐತಿಹಾಸ ನಿರ್ಮಿಸಿದೆ. ಬರೋಬ್ಬರಿ 5,468 ದಿನಗಳ ಬಳಿಕ ಆಸೀಸ್‌ ನೆಲದಲ್ಲಿ ಟೆಸ್ಟ್‌ ಪಂದ್ಯದಲ್ಲಿ ಗೆಲುವು ಸಾಧಿಸಿದೆ.

ಹೌದು. ಮೆಲ್ಬರ್ನ್‌ (Melbourne) ಕ್ರಿಕೆಟ್‌ ಮೈದಾನದಲ್ಲಿ ನಡೆದ ಆಶಸ್‌ ಟೂರ್ನಿಯ ಬಾಕ್ಸಿಂಗ್‌ ಡೇ 4ನೇ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡ 4 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ. 175 ರನ್‌ಗಳ ಗುರಿ ಪಡೆದ ಇಂಗ್ಲೆಂಡ್‌ 32.2 ಓವರ್‌ಗಳಲ್ಲೇ 6 ವಿಕೆಟ್‌ ನಷ್ಟಕ್ಕೆ 178 ರನ್‌ ಗಳಿಸಿ ಗೆಲುವು ಸಾಧಿಸಿದೆ. ಇದನ್ನೂ ಓದಿ: ವೇಗದ ಶತಕ | 16 ಬೌಂಡರಿ, 15 ಸಿಕ್ಸ್‌ – ದಾಖಲೆ ಬರೆದ ವೈಭವ್‌ ಸೂರ್ಯವಂಶಿ

England Test 2

ಟಾಸ್‌ ಗೆದ್ದು ಮೊದಲು ಬೌಲಿಂಗ್‌ ಮಾಡಿದ ಇಂಗ್ಲೆಂಡ್‌ ತಂಡ (England Team) ಆತಿಥೇಯ ಆಸ್ಟ್ರೇಲಿಯಾವನ್ನು 152 ರನ್‌ಗಳಿಗೆ ಆಲೌಟ್‌ ಮಾಡಿತ್ತು. ಆದ್ರೆ ಆಸೀಸ್‌ ಬೆಂಕಿ ದಾಳಿಗೆ ತತ್ತರಿಸಿದ ಆಂಗ್ಲಪಡೆ ತನ್ನ ಸರದಿಯ ಮೊದಲ ಇನ್ನಿಂಗ್ಸ್‌ನಲ್ಲೇ ಕೇವಲ 110 ರನ್‌ಗಳಿಗೆ ಸರ್ವಪತನ ಕಂಡಿತು. ಬಳಿಕ ಮೊದಲ ದಿನವೇ 2ನೇ ಇನ್ನಿಂಗ್ಸ್‌ ಶುರು ಮಾಡಿದ್ದ ಆಸೀಸ್‌ (Australia Team) 4 ರನ್‌ಗಳಿಸಿ 2ನೇ ದಿನಕ್ಕೆ ಕ್ರೀಸ್‌ ಕಾಯ್ದುಕೊಂಡಿತು.

ಇನ್ನೂ 46 ರನ್‌ಗಳ ಮುನ್ನಡೆಯೊಂದಿಗೆ ಕ್ರೀಸ್‌ ಆರಂಭಿಸಿದ ಆಸೀಸ್‌ 2ನೇ ಇನ್ನಿಂಗ್ಸ್‌ನಲ್ಲಿ 132 ರನ್‌ಗಳಿಗೆ ಆಲೌಟ್‌ ಆಯಿತು. ಈ ಮೂಲಕ ಎದುರಾಳಿ ಇಂಗ್ಲೆಂಡ್‌ಗೆ 175 ರನ್‌ ಗುರಿ ನೀಡಿತ್ತು.‌ ಸ್ಪರ್ಧಾತ್ಮಕ ಗುರಿ ಪಡೆದ ಇಂಗ್ಲೆಂಡ್‌ 32 ಓವರ್‌ಗಳಲ್ಲಿ 178 ರನ್‌ ಗಳಿಸಿ ಗುರಿ ತಲುಪಿತು.

England Test

ಎರಡೇ ದಿನಕ್ಕೆ 36 ವಿಕೆಟ್‌ ಪತನ
ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯದಲ್ಲಿ ಬೌಲರ್‌ಗಳ ಕೈಚಳಕವೇ ಮೇಲುಗೈ ಸಾಧಿಸಿತು. ಮೆಲ್ಬರ್ನ್‌ನಲ್ಲಿ ನಡೆದ 4ನೇ ಪಂದ್ಯದಲ್ಲಿ 2 ದಿನದಲ್ಲಿ 36 ವಿಕೆಟ್‌ ಪತನಗೊಂಡಿತು. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ಗೆ ರೆಡ್‌ಸಿಗ್ನಲ್ – ಸರ್ಕಾರದ ಕ್ರಮ ಸಮರ್ಥಿಸಿಕೊಂಡ ಪರಮೇಶ್ವರ್

ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ ಪರ ಗಸ್ ಅಟ್ಕಿನ್ಸನ್ 2 ವಿಕೆಟ್‌, ಬ್ರಾಂಡನ್‌ ಕರ್ಸ್‌ 1 ವಿಕೆಟ್‌, ಜೋಶ್ ಟಂಗ್ 5 ವಿಕೆಟ್‌, ಬೆನ್‌ ಸ್ಟೋಕ್ಸ್‌ 1 ವಿಕೆಟ್‌ ಪಡೆದರೆ, ಆಸ್ಟ್ರೇಲಿಯಾ ಪರ ಮಿಚೆಲ್‌ ಸ್ಟಾರ್ಕ್‌ 2 ವಿಕೆಟ್‌, ಮೈಕೆಲ್ ನೆಸರ್ 4 ವಿಕೆಟ್‌, ಸ್ಕಾಟ್‌ ಬೊಲೆಂಡ್‌ 3 ವಿಕೆಟ್‌, ಕ್ಯಾಮರೂನ್‌ ಗ್ರೀನ್‌ 1 ವಿಕೆಟ್‌ ಪಡೆದರು. ಇದನ್ನೂ ಓದಿ:  ಇಂಡೋ, ಆಸೀಸ್‌ ಮ್ಯಾಚ್‌ – ಬಾಕ್ಸಿಂಗ್‌ ಡೇ ಟೆಸ್ಟ್‌ ಎಂದು ಯಾಕೆ ಕರೆಯುತ್ತಾರೆ?

England Test 3

2ನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ ಪರ ಗಸ್ ಅಟ್ಕಿನ್ಸನ್ 1 ವಿಕೆಟ್‌, ಬ್ರಾಂಡನ್‌ ಕರ್ಸ್‌ 4 ವಿಕೆಟ್‌, ಜೋಶ್‌ ಟಂಗ್‌ 2 ವಿಕೆಟ್‌, ಬೆನ್‌ ಸ್ಟೋಕ್ಸ್‌ 3 ವಿಕೆಟ್‌ ಪಡೆದರೆ, ಆಸೀಸ್‌ ಪರ ಮಿಚೆಲ್‌ ಸ್ಟಾರ್ಕ್‌, ಜೇ ರಿಚರ್ಡ್ಸನ್, ಸ್ಕಾಟ್‌ ಬೊಲೆಂಡ್‌ ತಲಾ 2 ವಿಕೆಟ್‌ ಕಿತ್ತರು.

ಬಾಕ್ಸಿಂಗ್‌ ಡೇ ಟೆಸ್ಟ್‌ ಅನ್ನೋದು ಯಾಕೆ?
ಇಂಗ್ಲೆಂಡ್‌ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ ಟೆಸ್ಟ್‌ ಪಂದ್ಯಕ್ಕೆ ಬಾಕ್ಸಿಂಗ್‌ ಡೇ ಎಂದು ಕರೆಯಲು ಕಾರಣವಿದೆ. ಇಂಗ್ಲೆಂಡ್ ಹಾಗೂ ಹಲವು ದೇಶಗಳಲ್ಲಿ ಕ್ರಿಸ್‌ಮಸ್ ಮರುದಿನ ಅಂದರೆ ಡಿಸೆಂಬರ್ 26ರ ರಜಾದಿನವನ್ನ ಬಾಕ್ಸಿಂಗ್‌ ಡೇ ಎಂದು ಕರೆಯಲಾಗುತ್ತದೆ. ಜರ್ಮನಿ, ಪೊಲೆಂಡ್, ರೋಮೆನಿಯಾ, ಹಂಗೇರಿ, ನೆದರ್ಲೆಂಡ್ಸ್ ಸೇರಿದಂತೆ ಕೆಲ ದೇಶಗಳಲ್ಲಿ ಡಿಸೆಂಬರ್ 26ರನ್ನು ಸೆಕೆಂಡ್ ಕ್ರಿಸ್‌ಮಸ್ ಡೇ ಎಂದು ಆಚರಿಸಲಾಗುತ್ತಿದೆ. ಈ ದಿನ ಸಾರ್ವಜನಿಕ ರಜಾ ದಿನವಾಗಿದ್ದು, ಐರ್ಲೆಂಡ್‌ ಹಾಗೂ ಸ್ಪೇನ್‌ನ ಕ್ಯಾಟಲೋನಿಯಾ ರೀಜನ್‌ನಲ್ಲಿ ʼಸೈಂಟ್ ಸ್ಟೀಫನ್ ಡೇʼ ಎಂದು ಕರೆಯಲಾಗುತ್ತದೆ. ಈ ಹಿಂದೆ ಆಸ್ಟ್ರೇಲಿಯಾ ಬ್ರಿಟಿಷರ ವಸಾಹತು ಆಗಿತ್ತು. ಈ ಸಮಯದಲ್ಲಿ ಇಂಗ್ಲೆಂಡ್‌ ರಾಜಮನೆತನದವರು ಕ್ರಿಸ್ಮಸ್‌ ಸಮಯದಲ್ಲಿ ಕೆಲಸ ಮಾಡಿದ ನೌಕರರಿಗೆ ಡಿ.26 ರಂದು ಬಾಕ್ಸ್‌ ಮೂಲಕ ಉಡುಗೊರೆ ನೀಡುತ್ತಿದ್ದರು. ಬಾಕ್ಸ್‌ಗಳಲ್ಲಿ ಸಿಹಿ ತಿಂಡಿ ಸೇರಿದಂತೆ ಹಲವು ಉಡುಗೊರೆ ಡಿ.26 ರಂದು ಸಿಗುತ್ತಿದ್ದ ಕಾರಣ ಈ ದಿನಕ್ಕೆ ‘ಬಾಕ್ಸಿಂಗ್‌ ಡೇ’ ಎಂಬ ಹೆಸರು ಬಂತು. ಹೀಗಾಗಿ ಈ ದಿನ ನಡೆಯುವ ಟೆಸ್ಟ್ ಪಂದ್ಯಕ್ಕೆ ‘ಬಾಕ್ಸಿಂಗ್ ಡೇ ಟೆಸ್ಟ್’ ಪಂದ್ಯ ಎಂಬ ಹೆಸರು ಬಂದಿದೆ.

TAGGED:Ben StokesBoxing Day TestCameron GreenHarry BrookMitchell Starcsteve smithಆಸ್ಟ್ರೇಲಿಯಾಇಂಗ್ಲೆಂಡ್ಬಾಕ್ಸಿಂಗ್ ಡೇ ಟೆಸ್ಟ್ಸ್ಟೀವನ್ ಸ್ಮಿತ್
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

reliance industries mukesh ambani
Latest

ಇರಾನ್‌ನಿಂದ ನಾವು ಕಚ್ಚಾ ತೈಲ ಖರೀದಿಸಿಲ್ಲ: ರಿಲಯನ್ಸ್‌ ಇಂಡಸ್ಟ್ರೀಸ್‌

Public TV
By Public TV
16 minutes ago
ಸಾಂದರ್ಭಿಕ ಚಿತ್ರ
Latest

ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣ ಉಚಿತ – ಕೇಂದ್ರದ ಮಹತ್ವದ ನಿರ್ಣಯ

Public TV
By Public TV
58 minutes ago
LPG Vessel Apollo Ocean Arrives at New Mangaluru Port
Dakshina Kannada

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

Public TV
By Public TV
1 hour ago
Russian Oil
Latest

‌ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

Public TV
By Public TV
2 hours ago
Chinnaswamy Stadium
Bengaluru City

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್‌ ನೋಡಲು 4 ಟಿಕೆಟ್‌ ಕೊಡಿಸಿ: ಶಾಸಕರಿಂದ ಪಕ್ಷಾತೀತ ಬೇಡಿಕೆ

Public TV
By Public TV
2 hours ago
SONIA GANDHI
Latest

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ, ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ: ದೆಹಲಿ ಆಸ್ಪತ್ರೆ ಮಾಹಿತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?