ವಿಜಯಪುರ: ಅಗ್ನಿ ಅವಘಡದಿಂದ (Fire Incident) ಹೋಟೆಲ್‌ವೊಂದು (Hotel) ಹೊತ್ತಿ ಉರಿದ ಘಟನೆ ವಿಜಯಪುರ (Vijayapura) ನಗರದ ಸೋಲಾಪುರ ರಸ್ತೆ ಬಳಿ ನಡೆದಿದೆ.
ತಡರಾತ್ರಿ ಸಂಭವಿಸಿದ ಅಗ್ನಿ ಅವಘಡಕ್ಕೆ ಹೋಟೆಲ್ ಕೃಷ್ಣ ಪ್ಯಾಲೆಸ್‌ನ ಮುಂಭಾಗ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದು, ಕೊನೆಗೂ ಬೆಂಕಿ ನಂದಿಸುವಲ್ಲಿ ಯಾಸ್ವಿಯಾಗಿದ್ದಾರೆ. ಇದನ್ನೂ ಓದಿ: ಪಾನ್ ಶಾಪ್ ಮೇಲೆ 10ಕ್ಕೂ ಹೆಚ್ಚು ಪುಡಿರೌಡಿಗಳ ಅಟ್ಟಹಾಸ – ಬಾಟಲ್ ಒಡೆದುಹಾಕಿ ಮಾರಕಾಸ್ತ್ರಗಳಿಂದ ಹಲ್ಲೆ
ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಸದ್ಯ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಗ್ಯಾಸ್ ಲೀಕ್ ಅಥವಾ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಸುಪ್ರೀಂ ಸಮಿತಿಯಿಂದ ಗಡಿ ಒತ್ತುವರಿ ವರದಿ ಸಲ್ಲಿಕೆ – ರೆಡ್ಡಿಗೆ ಮತ್ತೆ ಸಂಕಷ್ಟ

