Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ & ಸಂಶೋಧನಾ ಸಂಸ್ಥೆ ಆರಂಭಿಸಿ: ಕೇಂದ್ರಕ್ಕೆ ಎಂ.ಬಿ.ಪಾಟೀಲ್ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ & ಸಂಶೋಧನಾ ಸಂಸ್ಥೆ ಆರಂಭಿಸಿ: ಕೇಂದ್ರಕ್ಕೆ ಎಂ.ಬಿ.ಪಾಟೀಲ್ ಪತ್ರ

Bengaluru City

ರಾಜ್ಯದಲ್ಲಿ ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ & ಸಂಶೋಧನಾ ಸಂಸ್ಥೆ ಆರಂಭಿಸಿ: ಕೇಂದ್ರಕ್ಕೆ ಎಂ.ಬಿ.ಪಾಟೀಲ್ ಪತ್ರ

Public TV
Last updated: December 31, 2025 6:29 pm
Public TV
Share
1 Min Read
MB Patil 2
SHARE

ಬೆಂಗಳೂರು: ವಿಜ್ಞಾನ ಮತ್ತು ಔಷಧ ವಿಜ್ಞಾನ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯನ್ನು ಆರಂಭಿಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ಅವರು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ (JP Nadda) ಅವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಸಚಿವರು ಸಲ್ಲಿಸಿದ ಪತ್ರದಲ್ಲಿ, ಹಿಂದೊಮ್ಮೆ ಈ ಕೇಂದ್ರವನ್ನು ಕರ್ನಾಟಕದಲ್ಲಿ ಪ್ರಾರಂಭಿಸಬೇಕೆಂದು ಕೇಂದ್ರ ಸರ್ಕಾರವು ಆಲೋಚಿಸಿತ್ತು. ಆದರೆ ಅದು ಕಾರ್ಯರೂಪಕ್ಕೆ ಬರಲಿಲ್ಲ. ರಾಜ್ಯದಲ್ಲಿರುವ ವೈಜ್ಞಾನಿಕ ಸಂಶೋಧನಾ ಸಂಸ್ಥೆಗಳು, ಜೈವಿಕ ತಂತ್ರಜ್ಞಾನ (ಬಿ.ಟಿ.) ಕಂಪನಿಗಳು ಇತ್ಯಾದಿಗಳನ್ನು ಪರಿಗಣಿಸಿ ಈ ಚಿಂತನೆಗೆ ಮರುಜೀವ ನೀಡಬೇಕು. ಇದಕ್ಕೆ ಬೇಕಾದ ಭೂಮಿ, ಮೂಲಸೌಕರ್ಯ, ನೆರವು ಮತ್ತು ಸಹಭಾಗಿತ್ವದ ಅವಕಾಶಗಳನ್ನು ರಾಜ್ಯ ಸರ್ಕಾರವು ಕ್ಷಿಪ್ರ ಗತಿಯಲ್ಲಿ ಒದಗಿಸಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೋವಾದಲ್ಲಿ ಬಿಯರ್‌ ಬಾಟಲ್‌ ಹಿಡ್ಕೊಂಡು ಸುತ್ತಾಡಿದ ಸಚಿನ್‌ ಪುತ್ರಿ

ರಾಜ್ಯವು ಔಷಧ ವಿಜ್ಞಾನ, ಬಿ.ಟಿ ಮತ್ತು ಆರೋಗ್ಯ ಸೇವೆಗಳಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ. ಅದರಲ್ಲೂ ಬೆಂಗಳೂರೊಂದರಲ್ಲೇ 400ಕ್ಕೂ ಹೆಚ್ಚು ಬಿ.ಟಿ. ಕಂಪನಿಗಳಿವೆ. ಜೊತೆಗೆ ಇಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ, ರಾಷ್ಟ್ರೀಯ ಜೀವ ವಿಜ್ಞಾನಗಳ ಕೇಂದ್ರ (ಎನ್.ಸಿ.ಬಿ.ಎಸ್), ಬಯೋಇನ್ಫರ್ಮ್ಯಾಟಿಕ್ಸ್ ಮತ್ತು ಅಪ್ಲೈಡ್ ಬಯೋಟೆಕ್ನಾಲಜಿ (ಐಬಿಎಬಿ) ಮುಂತಾದ ಪ್ರತಿಷ್ಠಿತ ಸಂಸ್ಥೆಗಳಿವೆ. ರಾಜ್ಯ ಸರ್ಕಾರದ ಬಯೋ-ಇನ್ನೋವೇಶನ್ ಸೆಂಟರ್ ಮತ್ತು ರಚನಾತ್ಮಕ ಬಿ.ಟಿ. ನೀತಿಯ ಮೂಲಕ ಈ ಕ್ಷೇತ್ರದ ನವೋದ್ಯಮಗಳಿಗೆ ಬೆಂಬಲ ಕೊಡಲಾಗುತ್ತಿದೆ ಎಂದು ವಿವರಿಸಿದ್ದಾರೆ.

ದೇಶದಲ್ಲಿರುವ ಬಿ.ಟಿ. ಕಂಪನಿಗಳ ಪೈಕಿ ಶೇ.60ರಷ್ಟು ರಾಜ್ಯದಲ್ಲೇ ಇವೆ. ಭಾರತವು ಮಾಡುತ್ತಿರುವ ಒಟ್ಟು ಔಷಧಗಳ ರಫ್ತಿನಲ್ಲಿ ರಾಜ್ಯದ ಪಾಲು ಶೇಕಡ 12ರಷ್ಟಿದೆ. ಅಲ್ಲದೆ ಕ್ಲಿನಿಕಲ್ ಸಂಶೋಧನೆ, ವೈದ್ಯಕೀಯ ಸಾಧನ ಸಲಕರಣೆಗಳ ತಯಾರಿಕೆ ಮತ್ತು ಎಪಿಐ ಉತ್ಪಾದನೆಯ ಕಾರ್ಯಜಾಲ ನಮ್ಮಲ್ಲಿದೆ. ಇವೆಲ್ಲವುಗಳನ್ನು ಪರಿಗಣಿಸಿ ರಾಜ್ಯಕ್ಕೆ ರಾಷ್ಟ್ರೀಯ ಔಷಧ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯನ್ನು ಮಂಜೂರು ಮಾಡಬೇಕು ಎಂದು ಪತ್ರದಲ್ಲಿ ಗಮನ ಸೆಳೆದಿದ್ದಾರೆ.ಇದನ್ನೂ ಓದಿ: ಬುರುಡೆ ಕೇಸ್‌| ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ನ್ಯಾಯಾಲಯಕ್ಕೆ ವಕಾಲತ್ತು ಸಲ್ಲಿಕೆ

TAGGED:bengaluruJP NaddakarnatakaMP Patilಎಂ.ಬಿ.ಪಾಟೀಲ್ಕರ್ನಾಟಕಜೆ.ಪಿ.ನಡ್ಡಾಬೆಂಗಳೂರು
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Rajnath Singh
Latest

ಈ ಬಾರಿಯ ಈಶ ಮಹಾಶಿವರಾತ್ರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿ

Public TV
By Public TV
37 minutes ago
Chikkamagaluru Two Youths Drown In Bhadra River
Chikkamagaluru

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

Public TV
By Public TV
47 minutes ago
HAL Techie Murder
Bengaluru City

ಬೆಂಗಳೂರಲ್ಲಿ ಪುತ್ರನಿಂದ ತಂದೆ-ತಾಯಿ ಕೊಲೆ ಕೇಸ್;‌ ಕೊಂದ ಮಗನಿಂದಲೇ ಅಂತ್ಯಸಂಸ್ಕಾರಕ್ಕೆ ಕೋರ್ಟ್ ಅವಕಾಶ

Public TV
By Public TV
49 minutes ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
Hampi Utsava
Bellary

ಹಂಪಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Public TV
By Public TV
2 hours ago
zameer ahmed students
Bellary

ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?