ಬೆಂಗಳೂರು: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯ (Air Pollution) ಅತಿಯಾಗಿದ್ದು, ಬೆಂಗಳೂರಿಗೂ (Bengaluru) ಈ ಸ್ಥಿತಿ ಬಾರದಂತೆ ಎಲ್ಲ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ (Eshwara Khandre) ಸೂಚನೆ ನೀಡಿದ್ದಾರೆ.
ವಿವಿಧ ಯೋಜನೆಗಳ ಅನುಷ್ಠಾನದಿಂದ ಪರಿಸರದ ಮೇಲಾಗುವ ಪರಿಣಾಮಗಳ ಕುರಿತಂತೆ ಪರಾಮರ್ಶಿಸಲು ನೇಮಕಗೊಂಡಿರುವ ರಾಜ್ಯ ತಜ್ಞರ ನಿಷ್ಕರ್ಷ ಸಮಿತಿ – SEAC ಮತ್ತು SEIAA ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಔಪಚಾರಿಕವಾಗಿ ಮಾತನಾಡಿದರು. ನೂತನ ವರ್ಷದಲ್ಲಿ ಪ್ರಕೃತಿ, ಪರಿಸರ ಸಂರಕ್ಷಣೆಗೆ ಸಂಕಲ್ಪ ಮಾಡಿ ಎಂದರು. ಇದನ್ನೂ ಓದಿ: ಕೋಗಿಲು ಪ್ರಕರಣದಲ್ಲಿ ಮನೆ ಕೊಟ್ಟರೆ ನ್ಯಾಯಾಲಯದಲ್ಲಿ ಪ್ರಶ್ನೆ, ರಾಜ್ಯಪಾಲರಿಗೆ ದೂರು – ಎಸ್.ಆರ್.ವಿಶ್ವನಾಥ್
ಇತ್ತೀಚೆಗೆ ದೆಹಲಿಗೆ ಹೋಗಿದ್ದಾಗ ಹೊಗೆ ಮತ್ತು ಮಂಜಿನಿಂದ ಕೂಡಿದ ವಾತಾವರಣದಲ್ಲಿ ಉಸಿರಾಡಲೂ ಕಷ್ಟವಾಯಿತು ಎಂದ ಅವರು, ಬೆಂಗಳೂರು ನಗರದ ರಕ್ಷಣೆಗೆ ಕಟಿಬದ್ಧರಾಗಿ, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಪರಿಸರ ಸಂರಕ್ಷಣೆಗಾಗಿ ರೂಪಿಸಿರುವ ಎಲ್ಲ ಕಾಯಿದೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು. ಇದನ್ನೂ ಓದಿ: ಕುರ್ಚಿ ಕದನಕ್ಕೆ ಟ್ವಿಸ್ಟ್ – ಹೊಸ ವರ್ಷದ ಮೊದಲ ದಿನವೇ ಸಿಎಂ ಪವರ್‌ಫುಲ್ ಸಂದೇಶ

